ಗದಗದಲ್ಲಿ ಮುಂದುವರೆದ ಹಿಂದೂ ದೇವರ ಮೇಲಿನ ಅಟ್ಟಹಾಸ: 2 ಗ್ರಾಮಗಳಲ್ಲಿ ಮೂರ್ತಿಗಳು ಧ್ವಂಸ

ಗದಗ ಜಿಲ್ಲೆಯಲ್ಲಿ ಕಿಡಿಗೇಡಿಗಳಿಂದ ಮತ್ತೇ ಹಿಂದೂ ದೇವರುಗಳ ವಿಗ್ರಹವನ್ನು ಧ್ವಂಸಗೊಳಿಸಿರುವ ನೀಚ ಕೃತ್ಯ ಮುಂದುವರೆದಿದೆ. ಮೊನ್ನೆ ಅಷ್ಟೇ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ಈಶ್ವರ, ನಂದಿ ಹಾಗೂ ಹೊನ್ನತ್ತೆಮ್ಮ ದೇವರುಗಳ ಮೂರ್ತಿ ಭಗ್ನಗೊಳಿಸಿದ್ದರು. ಈ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಮತ್ತೇ ಎರಡು ಕಡೆಗಳಲ್ಲಿ ಘಟನೆ ನಡೆದಿದೆ.

ಗದಗದಲ್ಲಿ  ಮುಂದುವರೆದ ಹಿಂದೂ ದೇವರ ಮೇಲಿನ ಅಟ್ಟಹಾಸ: 2 ಗ್ರಾಮಗಳಲ್ಲಿ ಮೂರ್ತಿಗಳು ಧ್ವಂಸ
Gadag Hindu God
Edited By:

Updated on: Feb 19, 2026 | 7:02 PM

ಗದಗ, (ಫೆಬ್ರವರಿ 19): ಜಿಲ್ಲೆಯಲ್ಲಿ ಹಿಂದೂ ದೇವರಗಳ (Hindu God) ಮೇಲಿನ ದಾಳಿ ಮುಂದುವರೆದಿದೆ. ಮೊನ್ನೇ ಶಿವರಾತ್ರಿ ಸಂಭ್ರಮದ ಮಧ್ಯೆ ದುಷ್ಕರ್ಮಿಗಳು ಶಿವಲಿಂಗ, ಅದರ ಪಾಣಿಪೀಠ ಮತ್ತು ನಂದಿ ವಿಗ್ರಹವನ್ನು ಭಗ್ನಗೊಳಿಸಿದ್ದರು. ಇದರ ಬೆನ್ನಲ್ಲೇ ಇದೀಗ ಗದಗ (Gadag) ಜಿಲ್ಲೆಯ ಮುಂಡರಗಿ ತಾಲೂಕಿನ ಮಲ್ಲಿಕಾರ್ಜುನಪುರ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ದೇವರು ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ಈ ಮೂಲಕ ಕಿಡಿಗೇಡಿಗಳು ಹಿಂದೂ ದೇವರುಗಳನ್ನು ಟಾರ್ಗೆಟ್ ಮಾಡಿದ್ರಾ ಎನ್ನುವ ಪ್ರಶ್ನೆ ಉದ್ಭವಿಸಿದೆ.

ಮಲ್ಲಿಕಾರ್ಜುನಪುರದ ಗಾಳಿ ಬಸವೇಶ್ವರ ದೇವಸ್ಥಾನ ಶಿವಲಿಂಗ, ಪಾಣಿಪೀಠ ಹಾಗೂ ಆದರಳ್ಳಿ ಸಮೀಪದ ದಂಡೇರಿ ಮರಿಯಮ್ಮ ದೇವರುಗಳ ಮೂರ್ತಿ ಭಗ್ನಗೊಳಿಸಿದ್ದಾರೆ. ಇನ್ನು ಮರಿಯಮ್ಮ ದೇವಿ ಮುಖಕ್ಕೆ ಕೀಚಕರು ಮಸಿ ಬಳಿದು ಮುಖ ಧ್ವಂಸಗೊಳಿಸಿದ್ದಾರೆ. ದುಷ್ಟರ ದುಷ್ಕೃತ್ಯಕ್ಕೆ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ನೋಡಿ: ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಗ್ರಾಮಸ್ಥರು

ಪುರಾತನ ಕಾಲದ ಐತಿಹಾಸಿಕ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕೃತ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಜನವಸತಿ ಕಡಿಮೆ ಇರುವ ಪ್ರದೇಶದಲ್ಲಿರುವ ಐತಿಹಾಸಿಕ ದೇವಸ್ಥಾನಗಳಲ್ಲಿ ಧ್ವಂಸ ಕೃತ್ಯಗಳು ನಡೆದಿವೆ. ಈವರೆಗೂ ಶಿಂಗಟಾಲೂರು ಘಟನೆಗೆ ಕಾರಣರಾದ ಆರೋಪಿಗಳ ಪತ್ತೆ ಆಗಿಲ್ಲ. ಇದೀಗ ಮತ್ತೆ ಎರಡು ಕಡೆಗಳಲ್ಲಿ ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುವಂತಾಗಿದ್ದು, ಪೊಲೀಸರು ಈ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us