ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಮಗಳು; ಮರ್ಯಾದೆಗೆ ಅಂಜಿ ಪ್ರಾಣ ಬಿಟ್ಟ ಅಂಗನವಾಡಿ ಶಿಕ್ಷಕಿ

ಗದಗದಲ್ಲಿ ಅಂಗನವಾಡಿ ಶಿಕ್ಷಕಿಯಾಗಿದ್ದ ಸುನೀತಾ ಅವರು ತಮ್ಮ ಮಗಳು ಕೊಟ್ಟ ಆಘಾತವನ್ನು ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಮಗಳು; ಮರ್ಯಾದೆಗೆ ಅಂಜಿ ಪ್ರಾಣ ಬಿಟ್ಟ ಅಂಗನವಾಡಿ ಶಿಕ್ಷಕಿ
ಸುನೀತಾ ಕೋ ವೀರಣ್ಣ ನಾಯಕವಾಡಿ ಮೃತ ತಾಯಿ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ರಮೇಶ್ ಬಿ. ಜವಳಗೇರಾ

Updated on:Jul 06, 2023 | 11:12 AM

ಗದಗ: ಪ್ರೀತಿ, ಸಲುಗೆಯಿಂದ ಬೆಳೆದಿದ್ದ ಮಗಳು ಅದೇ ಗ್ರಾಮದ ಯುವಕನೊಬ್ಬನನ್ನು ಪ್ರೀತಿಸಿ(Love) ಮದುವೆಯಾಗಿ ಊರು ಬಿಟ್ಟು ಓಡಿ ಹೋಗಿದ್ದಳು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ನೊಂದಿದ್ದ ತಾಯಿ ನೇಣು(Hanging) ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬುಧವಾರ ಗದಗದಲ್ಲಿ ಜರುಗಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದ ಹದ್ಲಿ ರಸ್ತೆಯ ಬರೋಡ ಬ್ಯಾಂಕ್ ಬಳಿಯ ನಿವಾಸಿ, ಅಂಗನವಾಡಿ ಶಿಕ್ಷಕಿಯಾಗಿದ್ದ ಸುನೀತಾ ಕೋ ವೀರಣ್ಣ ನಾಯಕವಾಡಿ (48) ಎಂಬ ಮಹಿಳೆ, ಮಗಳು ಕೊಟ್ಟ ಆಘಾತವನ್ನು ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಮಗಳು ಅದೇ ಏರಿಯಾದ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದಳು. ಮಗಳು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಹೋಗಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ತಾಯಿ ಸುನೀತಾ ತನ್ನ ಸಹೋದರಿಯ ಮನೆ ಮುಂದಿರುವ (ಸ್ಟೇರ್ ಕೇಸ್) ಮಳಿಗೆ ಹತ್ತುವು ಮೆಟ್ಟಿಲುಗಳ ಪೈಪ್ ಗೆ ಸೀರೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ನರಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ವಿದ್ಯಾರ್ಥಿಗಳನ್ನೇ ಟಾರ್ಗೆಟ್​ ಮಾಡಿ ಗಾಂಜಾ ಮಾರಾಟ; ಅರೋಪಿಯನ್ನ ಬಂಧಿಸಿದ ಪೊಲೀಸರು, 5 ಕೆಜಿಗೂ ಅಧಿಕ ಗಾಂಜಾ ಜಪ್ತಿ

ಕಾರಿನ ಗ್ಲಾಸ್ ಹೊಡೆದು ಕಳ್ಳತನ

ಕಾರಿನ ಗ್ಲಾಸ್ ಹೊಡೆದು ಲಕ್ಷಾಂತರ ರೂಪಾಯಿ ಮೌಲ್ಯದ ನಗದು, ಚಿನ್ನಾಭರಣ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ದೋಚಿರುವ ಘಟನೆ ಚಂದಾಪುರದಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಹೊನ್ನಕಳಸಾಪುರ ಮೂಲದ ನವೀನ್ ಎಂಬುವವರು ನಿನ್ನೆ ಸಂಜೆ ಊಟ ಮಾಡಲು ಚಂದಾಪುರದ ಎಟುಬಿ ಹೋಟೆಲ್ ಗೆ ಬಂದಿದ್ದರು. ಪಾರ್ಕಿಂಗ್ ನಲ್ಲಿ ಕಾರು ನಿಲ್ಲಿಸಿದ್ದ ವೇಳೆ, ದುಷ್ಕರ್ಮಿಗಳು ಕಾರಿನ ಗಾಜು ಹೊಡೆದು ಆ್ಯಪಲ್ ಟ್ಯಾಬ್, ಚಿನ್ನದ ಓಲೆ, ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ. ಹೋಟೆಲ್ ನಲ್ಲಿ ಊಟ ಮುಗಿಸಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಹೆಬ್ಬಗೋಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:06 am, Thu, 6 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ