AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಲ್ಲೆ ಮುಂಡರಗಿ ಪಟ್ಟಣ ಸೋಮವಾರ ಸಂಪೂರ್ಣ ಬಂದ್

Mundaragi Bandh: ಗದಗ ಜಿಲ್ಲೆಯ ಏಳು ತಾಲೂಕುಗಳ ಪೈಕಿ, ಆರು ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂದು ಸರ್ಕಾರ ಘೋಷಣೆ ಮಾಡಿದೆ. ಆದರೆ ಮುಂಡರಗಿ ತಾಲೂಕನ್ನು ಕೈ ಬಿಟ್ಟಿದೆ. ಇದರಿಂದ ಆಕ್ರೋಶಗೊಂಡಿರುವ ಅನ್ನದಾತರು ಮುಂಡರಗಿ ಬಂದ್​ಗೆ ಕರೆ ಕೊಟ್ಟಿದ್ದಾರೆ. ವಿವಿಧ ರೈತ ಸಂಘಟನೆಗಳು, ಕನ್ನಡಪರ ಸಂಘಟನೆ ಸೇರಿದಂತೆ 10 ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ.

ಗದಗ ಜಿಲ್ಲೆ ಮುಂಡರಗಿ ಪಟ್ಟಣ ಸೋಮವಾರ ಸಂಪೂರ್ಣ ಬಂದ್
ಸಾಂದರ್ಭಿಕ ಚಿತ್ರ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಆಯೇಷಾ ಬಾನು|

Updated on: Sep 24, 2023 | 9:46 AM

Share

ಗದಗ, ಸೆ.24: ಬರ ಪೀಡಿತ ತಾಲೂಕು ಪಟ್ಟಿಯಿಂದ ಮುಂಡರಗಿ (Mundaragi) ತಾಲೂಕನ್ನು ಕೈ ಬಿಟ್ಟಿದಕ್ಕೆ ಆಕ್ರೋಶಗೊಂಡಿರುವ ಅನ್ನದಾತರು, ಸಂಘಟನೆಗಳು ನಾಳೆ (ಸೆ.25) ಮುಂಡರಗಿ ತಾಲೂಕು ಬಂದ್ ಕರೆ ನೀಡಿವೆ. ಗದಗ ಜಿಲ್ಲೆ ಮುಂಡರಗಿ ಪಟ್ಟಣ ನಾಳೆ ಸಂಪೂರ್ಣ ಬಂದ್ ಆಗಲಿದೆ. ಸತತ ಬರಗಾಲವನ್ನು ಅನುಭವಿಸುತ್ತಾ ಬಂದಿರುವ ಮುಂಡರಗಿ ತಾಲೂಕನ್ನು ರಾಜ್ಯ ಸಕಾರವು (Karnataka Government) ಬರಗಾಲ ಪಟ್ಟಿಯಲ್ಲಿ ಕೈ ಬಿಟ್ಟಿದೆ. ಮುಂಡರಗಿ ತಾಲೂಕಿಗೆ ಧೋರಣೆ ಮಾಡುತ್ತಿದೆ ಎಂದು ಅನ್ನದಾತರು ಆಕ್ರೋಶ ಹೊರ ಹಾಕಿದ್ದು ನಾಳೆ ಬಂದ್​ಗೆ ಕರೆ ನೀಡಿವೆ.

ಗದಗ ಜಿಲ್ಲೆಯ ಏಳು ತಾಲೂಕುಗಳ ಪೈಕಿ, ಆರು ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂದು ಸರ್ಕಾರ ಘೋಷಣೆ ಮಾಡಿದೆ. ಆದರೆ ಮುಂಡರಗಿ ತಾಲೂಕನ್ನು ಕೈ ಬಿಟ್ಟಿದೆ. ಇದರಿಂದ ಆಕ್ರೋಶಗೊಂಡಿರುವ ಅನ್ನದಾತರು ಮುಂಡರಗಿ ಬಂದ್​ಗೆ ಕರೆ ಕೊಟ್ಟಿದ್ದಾರೆ. ವಿವಿಧ ರೈತ ಸಂಘಟನೆಗಳು, ಕನ್ನಡಪರ ಸಂಘಟನೆ ಸೇರಿದಂತೆ 10 ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಎತ್ತಿನ ಬಂಡಿ, ಕೃಷಿ ಸಲಕರಣೆ ಹಾಗೂ ಜಾನುವಾರಗಳ ಸಮೇತ ಬಂದ್​ನಲ್ಲಿ ರೈತರು ಭಾಗಿಯಾಗಲಿದ್ದಾರೆ. ಸರ್ಕಾರದಿಂದ ಮುಂಡರಗಿ ತಾಲೂಕಿಗೆ ಅನ್ಯಾಯವಾಗಿದೆ. ಉಸ್ತುವಾರಿ ಸಚಿವರು, ಶಾಸಕರ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಡರಗಿ ತಾಲೂಕನ್ನು ಬರ ಪೀಡಿತ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬರ ಪೀಡಿತ ತಾಲೂಕಿನಿಂದ ಮುಂಡರಗಿ ಕೈ ಬಿಟ್ಟಿದ್ದಕ್ಕೆ ಆಕ್ರೋಶ: ಹೋರಾಟದ ಎಚ್ಚರಿಕೆ ನೀಡಿದ ರೈತರು

ಇನ್ನು ಮುಂಡರಗಿ ಅಭಿವೃದ್ಧಿಯಿಂದ ಹಿಂದುಳಿದಿದೆ. ಜೊತೆಗೆ ಬರಪೀಡಿತವೂ ಆಗಿರುವುದರಿಂದ ಮುಂಡರಗಿ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ಇತ್ತೀಚೆಗೆ ವಿಶ್ವ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ್‌ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು. ಹಾಗೂ ಮುಂಡರಗಿ ತಾಲೂಕನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡುವುದರೊಂದಿಗೆ ತಾಲೂಕಿನ ರೈತರಿಗೆ ಹಾಗೂ ರೈತ ಕಾರ್ಮಿಕರಿಗೆ ವಿಷೇಶ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಗದಗ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ