ಇಲ್ಲಿ ಅನೇಕ ವರ್ಷಗಳಿಂದ ಮುಸ್ಲಿಂ ಬಾಂಧವರು ಗಣೇಶನ ಪ್ರತಿಷ್ಠಾಪಿಸಿ, ಭಾವೈಕ್ಯತೆಯ ಸಂದೇಶ ನೀಡುತ್ತಿದ್ದಾರೆ

ಹನ್ನೊಂದು ದಿನಗಳ ಕಾಲ ಭಕ್ತಿಪೂರ್ವಕವಾಗಿ ಪೂಜೆ ಪುನಸ್ಕಾರ ಮಾಡ್ತಾರೆ. ಅಂಜುಮನ್ ಕಮಿಟಿ ಹಾಗೂ ಈಶ್ವರ ದೇವಸ್ಥಾನದ ಕಮಿಟಿಯ ಸದಸ್ಯರು, ಎಲ್ಲಾ ಖರ್ಚು ವೆಚ್ಚಗಳಿಗೆ ಮೊದಲೇ ಗ್ರಾಮಸ್ಥರಿಂದ ದೇಣಿಗೆ ಸಂಗ್ರಹ ಮಾಡಿರುತ್ತಾರೆ. ಒಟ್ಟಾರೇ ಇಂತಹ ಸಾಮರಸ್ಯದ ಬದುಕು ಹಾಗೂ ಆಚರಣೆ ಎಲ್ಲರಿಗೂ ಎಲ್ಲಾಕಡೆ ಮಾದರಿಯಾಗಲಿ ಎಂಬುದು ಎಲ್ಲರ ಆಸೆ-ಆಶಯ!

ಇಲ್ಲಿ ಅನೇಕ ವರ್ಷಗಳಿಂದ  ಮುಸ್ಲಿಂ ಬಾಂಧವರು ಗಣೇಶನ ಪ್ರತಿಷ್ಠಾಪಿಸಿ, ಭಾವೈಕ್ಯತೆಯ ಸಂದೇಶ ನೀಡುತ್ತಿದ್ದಾರೆ
ಇಲ್ಲಿ ಅನೇಕ ವರ್ಷಗಳಿಂದ ಮುಸ್ಲಿಂ ಬಾಂಧವರು ಗಣೇಶನ ಪ್ರತಿಷ್ಠಾಪಿಸಿ, ಭಾವೈಕ್ಯತೆಯ ಸಂದೇಶ ನಿಡುತ್ತಿದ್ದಾರೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 26, 2022 | 7:30 PM

ಗದಗ: ದಿನನಿತ್ಯ ಜಾತಿ ಜಾತಿಗಳ ಹೆಸರಿನಲ್ಲಿ ಗದ್ದಲ, ಗಲಾಟೆಗಳು ನಡೆಯುತ್ತಲೇ ಇರುತ್ತವೆ. ಆದರೆ ಗದಗ ಜಿಲ್ಲೆಯ ಗ್ರಾಮವೊಂದರಲ್ಲಿ ಹಲವು ವರ್ಷಗಳಿಂದ ಮುಸ್ಲಿಂ ಬಾಂಧವರು ಗಣೇಶನ ಪ್ರತಿಷ್ಠಾಪನೆ ಮಾಡುವ ಮೂಲಕ ಭಾವೈಕ್ಯತೆಯ ಸಂದೇಶ ಸಾರುತ್ತಿದ್ದಾರೆ. ಗಣಪತಿ ಪ್ರತಿಷ್ಠಾಪನೆ ಬಳಿಕ ನಿತ್ಯವೂ ಹಿಂದೂ ಮುಸ್ಲಿಂ ಮಹಿಳೆಯರು, ಪುರುಷರು ಒಟ್ಟುಗೂಡಿ ಪೂಜೆ ಮಾಡ್ತಾರೆ. ಆ ಮುಸ್ಲಿಂ ಬಾಂಧವರು ಪೂಜೆ ಮಾಡೋ ಗಣೇಶ್ ಎಲ್ಲಿ ಅಂತಿರಾ.. ಈ ವಿಶೇಷ ವರದಿ ಓದಿ…

ಕಳಸಾಪುರದ ಗಣೇಶೋತ್ಸವ: ರಾಜ್ಯದ ಹಲವೆಡೆ ಈಗ ಕೋಮು ದಳ್ಳುರಿ ಹೊತ್ತಿ ಉರಿಯುತ್ತಿದೆ. ವರ್ಷಗಳಿಂದ ಒಂದಿಲ್ಲೊಂದು ವಿಷಯಕ್ಕೆ ಕೋಮು ಭಾವನೆ ಕೆರಳಿಸುವ ಪ್ರಕರಣಗಳು ನಡೀಯುತ್ತಲೇ ಇವೆ. ಆದ್ರೆ, ಈ ಭಾವೈಕ್ಯತೆಯ ಗಣೇಶ್ ಸ್ಥಪನೆ ಮಾಡಿದ್ದು ಗದಗ ತಾಲೂಕಿನ ಕಳಸಾಪೂರ ಗ್ರಾಮದಲ್ಲಿ ಮಾತ್ರ ಇದಕ್ಕೆಲ್ಲವೂ ಅಪವಾದವಾಗಿದೆ (Kalasapur Ganeshotsav). ಈ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಜಂಟಿಯಾಗಿ ಗಣೇಶ ಪ್ರತಿಷ್ಠಾಪನೆ ಮಾಡ್ತಾರೆ. ಸತತ 8 ವರ್ಷದಿಂದ ಅಂಜುಮಾನ್ ಏ -ಇಸ್ಲಾಂ ಹಾಗೂ ಈಶ್ವರ ದೇವಾಲಯ ಕಮಿಟಿಯವರು ಜಂಟಿಯಾಗಿ ಏಕದಂತನನ್ನ ಪೂಜೆ ಮಾಡ್ತಾರೆ. ಒಟ್ಟಿಗೆ ಹಬ್ಬ ಆಚರಿಸೋ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ. (ವರದಿ-ಸಂಜೀವ ಪಾಂಡ್ರೆ, ಟಿವಿ 9 ಗದಗ)

ಜಾತಿ ಬೇಧ ಮರೆತು ಇಲ್ಲಿ 11 ದಿನಗಳ ಕಾಲ ವಿನಾಯಕನಿಗೆ ಸಾಮೂಹಿಕವಾಗಿ ಪೂಜೆ ಸಲ್ಲಿಸುತ್ತಾರೆ. ಹಿಂದೂ-ಮುಸ್ಲಿಂ ಸಮಾಜದ ಮಹಿಳೆಯರು ಪೂಜೆಯಲ್ಲಿ ಭಾಗಿಯಾಗ್ತಾರೆ. ಇದಕ್ಕೆಲ್ಲಾ ಕಾರಣವಾಗಿರೋ ಅಂಜುಮಾನ್ ಹಾಗೂ ಈಶ್ವರ ದೇವಾಲಯದ ಕಮಿಟಿ ಸದಸ್ಯರು. ಅದರಲ್ಲೂ ದೇವನೊಬ್ಬ ನಾಮ ಹಲವು ಎಂಬ ನಂಬಿಕೆಯಲ್ಲಿ ಇಲ್ಲಿನ ಮುಸ್ಲಿಂ ಬಾಂಧವರು, ಹಿಂದೂಗಳ ಜೊತೆ ಸೇರಿ ವಿಘ್ನನಿವಾರಕನನ್ನ ಪ್ರತಿಷ್ಠಾಪನೆ ಮಾಡಿದ್ದಾರೆ.

ಅಷ್ಟೇ ಅಲ್ಲದೆ ನಿತ್ಯವೂ ಇವರೆಲ್ಲಾ ಸಾಮೂಹಿಕವಾಗಿ ಪೂಜೆ ಪುನಸ್ಕಾರದಲ್ಲಿ ತೊಡಗಿಕೊಳ್ತಾರೆ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಿಂದೂ ಮುಸ್ಲಿಂ ಅನ್ನೋ ಬೇಧ ಇಲ್ಲ. ಇಲ್ಲಿ ನಾವೇಲ್ಲಾ ಒಟ್ಟಾಗಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಿ, ಹಿಂದೂ ಮುಸ್ಲಿಂ ಎಲ್ಲರೂ ಗಣೇಶನ ಹಬ್ಬ ಆಚರಣೆ ಮಾಡ್ತೀವಿ ಅಂತ ಮುಸ್ಲಿಂ ಸಮಾಜದ ಮುಖಂಡ ಸಾಧೀಕ್ ಸಾಬ್ ಶೇಕ್ ಹೇಳ್ತಾರೆ.

ಶಾಂತಿಗೆ ಹೆಸರಾದ ಕಳಸಾಪೂರ ಗ್ರಾಮ, ಈಗ ಭಾವೈಕ್ಯೆತೆಯ ಕೇಂದ್ರಬಿಂದುವಾಗಿದೆ. ಸತತ 8 ವರ್ಷಗಳಿಂದ ಇಲ್ಲಿನ ಹಿಂದೂಗಳು ಹಾಗೂ ಮುಸ್ಲೀಮರು ಸೇರಿ ವಿನಾಯಕನನ್ನು ಪ್ರತಿಷ್ಠಾಪನೆ ಮಾಡ್ತಾ ಇದ್ದಾರೆ. ವರ್ಷದಿಂದ ವರ್ಷಕ್ಕೆ ಕಳಸಾಪುರದ ಭಾವೈಕ್ಯತಾ ಗಣೇಶ ಗ್ರಾಮಸ್ಥರಲ್ಲಿ ಒಗ್ಗಟ್ಟನ್ನು ಹೆಚ್ಚಿಸುತ್ತಿದ್ದಾನೆ. ಇಡೀ ರಾಜ್ಯಾದ್ಯಂತ ಕಳಸಾಪುರ ಭಾವೈಕ್ಯತೆಗೆ ಕಳಸಪ್ರಾಯವಾಗಿದೆ ಎನ್ನೋ ಭಾವನೆಯನ್ನು ಸ್ಥಳೀಯರಲ್ಲಿ ಮೂಡಿಸುತ್ತಿದ್ದಾನೆ.

ಒಟ್ಟಾಗಿ ಹಿಂದೂ-ಮುಸ್ಲಿಂ ರ ರಲ್ಲರು ಒಟ್ಟಾಗಿ ಎಲ್ಲಾ ಹಬ್ಬಗಳನ್ನ ಆಚರಿಸುವ ಮೂಲಕ ಸಬ್ ಕಾ ಮಾಲೀಕ್ ಏಕ್ ಹೈ ಅನ್ನೋ ಮಾತನ್ನು ಕಳಸಾಪುರ ಗ್ರಾಮಸ್ಥರು ಸಾಬೀತು ಮಾಡುತ್ತಿದ್ದಾರೆ. ಗ್ರಾಮದಲ್ಲಿ ನಡೆಯುವ ಎಲ್ಲ ಹಬ್ಬಗಳನ್ನು ಇಲ್ಲಿನ ಜನರು ಜಾತಿ, ಮತ, ಪಂಥವಿಲ್ಲದೇ ಆಚರಣೆ ಮಾಡ್ತಾ ಬರುತ್ತಿರುವುದು ತುಂಬಾನೆ ಖುಷಿ ತರುತ್ತೆ ಎಂತಿದ್ದಾರೆ ಸ್ಥಳಿಯ ಚೆನ್ನವೀರಪ್ಪ ಪಲ್ಲೇದ್, ನಿಂಗಯ್ಯ ಇಟಗಿಮಠ, ಮಂಜುನಾಥ್ ಘೋಡಕೆ…

ಹನ್ನೊಂದು ದಿನಗಳ ಕಾಲ ಭಕ್ತಿಪೂರ್ವಕವಾಗಿ ಪೂಜೆ ಪುನಸ್ಕಾರ ಮಾಡ್ತಾರೆ. ಅಂಜುಮನ್ ಕಮಿಟಿ ಹಾಗೂ ಈಶ್ವರ ದೇವಸ್ಥಾನದ ಕಮಿಟಿಯ ಸದಸ್ಯರು, ಎಲ್ಲಾ ಖರ್ಚು ವೆಚ್ಚಗಳಿಗೆ ಮೊದಲೇ ಗ್ರಾಮಸ್ಥರಿಂದ ದೇಣಿಗೆ ಸಂಗ್ರಹ ಮಾಡಿರುತ್ತಾರೆ. ಒಟ್ಟಾರೇ ಇಂತಹ ಸಾಮರಸ್ಯದ ಬದುಕು ಹಾಗೂ ಆಚರಣೆ ಎಲ್ಲರಿಗೂ ಎಲ್ಲಾಕಡೆ ಮಾದರಿಯಾಗಲಿ ಎಂಬುದು ಎಲ್ಲರ ಆಸೆ-ಆಶಯ!

Published On - 3:40 pm, Fri, 26 August 22

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್