ಗದಗ ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿಲ್ಲ: ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ

ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿಲ್ಲ. ಗದಗ ಜಿಲ್ಲೆಯಲ್ಲಿರುವ 39 ಕ್ರಷರ್​ಗಳು ಅನಧಿಕೃತ ಇಲ್ಲ. ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆದರೇ ನಾವೇ ಕ್ರಮ ಕೈಗೊಳ್ಳುತ್ತೇವೆ ಎಂದು ಗದಗ ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ ನೀಡಿದೆ.

ಗದಗ ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿಲ್ಲ: ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ
ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ರಾಮಣ್ಣ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ವಿವೇಕ ಬಿರಾದಾರ

Updated on: Jul 15, 2023 | 7:42 PM

ಗದಗ: ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ (Stone mining) ನಡೆಯುತ್ತಿಲ್ಲ. ಗದಗ (Gadag) ಜಿಲ್ಲೆಯಲ್ಲಿರುವ 39 ಕ್ರಷರ್​ಗಳು ಅನಧಿಕೃತ ಇಲ್ಲ. ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆದರೇ ನಾವೇ ಕ್ರಮ ಕೈಗೊಳ್ಳುತ್ತೇವೆ ಎಂದು ಗದಗ ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ ನೀಡಿದೆ. ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ರಾಮಣ್ಣ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಗಣಿಗಾರಿಕೆ ನಡೆಯುತ್ತಿರುವ ಸ್ಥಳದಲ್ಲಿ ಜಮೀನುಗಳಿಗೆ ಸಮಸ್ಯೆ ಆಗುತ್ತಿದೆ. ಕೆಲವು ರೈತರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬಡವರ ಪಾಲಾಗಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳರ ಪಾಲು, ಗದಗದಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ ವಶಕ್ಕೆ

100 ಮೀಟರ್ ವ್ಯಾಪ್ತಿಯ ಜಮೀನಿಗಳಿಗೆ 10 ಸಾವಿರ ರೂ. ನಿಗದಿ ಮಾಡಲಾಗಿದೆ. 200 ಮೀಟರ್ ವ್ಯಾಪ್ತಿಯ ಜಮೀನಿಗೆ 5 ಸಾವಿರ ರೂ. ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ ಎಕರೆಗೆ 30, 50 ಸಾವಿರ ರೂ. ಹಾಗೂ ಒಂದು ಲಕ್ಷ ಹಣ ನೀಡಿದ್ದೇವೆ ಎಂದು ತಿಳಿಸಿದರು.

ಏನಿದು ಕಲ್ಲು ಗಣಿಗಾರಿಕೆ ಪ್ರಕರಣ

ಗದಗ ತಾಲೂಕಿ ಶಿತಾಲಹರಿ, ಮುಳಗುಂದ ಗ್ರಾಮಗಳ ಸುತ್ತಮುತ್ತ ನಡೆಯುವ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಘಟಗಳಿಂದ ದಬ್ಬಾಳಿಕೆ ಹಾಗೂ ಬೆಳಗಳಿಗೆ ಹಾನಿಯಾಗುತ್ತಿದೆ ಎಂದು ರೈತರು ಆರೋಪಿಸಿದ್ದರು. ರೈತರು ಗಣಿ ಮಾಲೀಕರ ದಬ್ಬಾಳಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಬಳಿಕ ಗಣಿ ಇಲಾಖೆ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ನಿಮ್ಮ ಗಣಿ ಇಲಾಖೆ ನಿಯಮಗಳೇನು. ಬ್ಲಾಸ್ಟಿಂಗ್ ನಿಯಮ ಏನೂ ಹೀಗಾಗಿ ಪ್ರಶ್ನೆ ಮೇಲೆ ಪ್ರಶ್ನೆ ಹಾಕಿ ತರಾಟೆಗೆ ತೆಗೆದುಕೊಂಡಿದ್ದರು.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ, ಪರಸಾಪೂರ, ಕೊಂಚಿಗೇರಿ, ಚಿಕ್ಕಸವಣೂರ ಹಾಗೂ ಗದಗ ತಾಲೂಕಿನ ಮಿಳಗುಂದ, ಶೀತಾಲಹರಿ ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯ ಕಲ್ಲು ಗಣಿಗಾರಿಕೆಯಲ್ಲಿ ಬ್ಲಾಸ್ಟಿಂಗ್ ಮಾಡಲಾಗುತ್ತಿದೆ. ಇದರಿಂದ ಶೇಂಗಾ, ಚೆಂಡೂ ಹೂವು, ಸೂರ್ಯಕಾಂತಿ, ಮೆಣಸಿನಕಾಯಿ, ಗೋವಿನಜೋಳ ಸೇರಿ ಹಲವು ಬೆಳೆಗಳಿಗೆ ಕಂಟಕವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ