ಗದಗ ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿಲ್ಲ: ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ

ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿಲ್ಲ. ಗದಗ ಜಿಲ್ಲೆಯಲ್ಲಿರುವ 39 ಕ್ರಷರ್​ಗಳು ಅನಧಿಕೃತ ಇಲ್ಲ. ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆದರೇ ನಾವೇ ಕ್ರಮ ಕೈಗೊಳ್ಳುತ್ತೇವೆ ಎಂದು ಗದಗ ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ ನೀಡಿದೆ.

ಗದಗ ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿಲ್ಲ: ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ
ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ರಾಮಣ್ಣ
Edited By: ವಿವೇಕ ಬಿರಾದಾರ

Updated on: Jul 15, 2023 | 7:42 PM

ಗದಗ: ಜಿಲ್ಲೆಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ (Stone mining) ನಡೆಯುತ್ತಿಲ್ಲ. ಗದಗ (Gadag) ಜಿಲ್ಲೆಯಲ್ಲಿರುವ 39 ಕ್ರಷರ್​ಗಳು ಅನಧಿಕೃತ ಇಲ್ಲ. ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆದರೇ ನಾವೇ ಕ್ರಮ ಕೈಗೊಳ್ಳುತ್ತೇವೆ ಎಂದು ಗದಗ ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘ ಸ್ಪಷ್ಟನೆ ನೀಡಿದೆ. ಕ್ವಾರಿ ಮತ್ತು ಕಲ್ಲು ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ರಾಮಣ್ಣ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಗಣಿಗಾರಿಕೆ ನಡೆಯುತ್ತಿರುವ ಸ್ಥಳದಲ್ಲಿ ಜಮೀನುಗಳಿಗೆ ಸಮಸ್ಯೆ ಆಗುತ್ತಿದೆ. ಕೆಲವು ರೈತರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬಡವರ ಪಾಲಾಗಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳರ ಪಾಲು, ಗದಗದಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ ವಶಕ್ಕೆ

100 ಮೀಟರ್ ವ್ಯಾಪ್ತಿಯ ಜಮೀನಿಗಳಿಗೆ 10 ಸಾವಿರ ರೂ. ನಿಗದಿ ಮಾಡಲಾಗಿದೆ. 200 ಮೀಟರ್ ವ್ಯಾಪ್ತಿಯ ಜಮೀನಿಗೆ 5 ಸಾವಿರ ರೂ. ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ ಎಕರೆಗೆ 30, 50 ಸಾವಿರ ರೂ. ಹಾಗೂ ಒಂದು ಲಕ್ಷ ಹಣ ನೀಡಿದ್ದೇವೆ ಎಂದು ತಿಳಿಸಿದರು.

ಏನಿದು ಕಲ್ಲು ಗಣಿಗಾರಿಕೆ ಪ್ರಕರಣ

ಗದಗ ತಾಲೂಕಿ ಶಿತಾಲಹರಿ, ಮುಳಗುಂದ ಗ್ರಾಮಗಳ ಸುತ್ತಮುತ್ತ ನಡೆಯುವ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಘಟಗಳಿಂದ ದಬ್ಬಾಳಿಕೆ ಹಾಗೂ ಬೆಳಗಳಿಗೆ ಹಾನಿಯಾಗುತ್ತಿದೆ ಎಂದು ರೈತರು ಆರೋಪಿಸಿದ್ದರು. ರೈತರು ಗಣಿ ಮಾಲೀಕರ ದಬ್ಬಾಳಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ಬಳಿಕ ಗಣಿ ಇಲಾಖೆ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ನಿಮ್ಮ ಗಣಿ ಇಲಾಖೆ ನಿಯಮಗಳೇನು. ಬ್ಲಾಸ್ಟಿಂಗ್ ನಿಯಮ ಏನೂ ಹೀಗಾಗಿ ಪ್ರಶ್ನೆ ಮೇಲೆ ಪ್ರಶ್ನೆ ಹಾಕಿ ತರಾಟೆಗೆ ತೆಗೆದುಕೊಂಡಿದ್ದರು.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ, ಪರಸಾಪೂರ, ಕೊಂಚಿಗೇರಿ, ಚಿಕ್ಕಸವಣೂರ ಹಾಗೂ ಗದಗ ತಾಲೂಕಿನ ಮಿಳಗುಂದ, ಶೀತಾಲಹರಿ ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯ ಕಲ್ಲು ಗಣಿಗಾರಿಕೆಯಲ್ಲಿ ಬ್ಲಾಸ್ಟಿಂಗ್ ಮಾಡಲಾಗುತ್ತಿದೆ. ಇದರಿಂದ ಶೇಂಗಾ, ಚೆಂಡೂ ಹೂವು, ಸೂರ್ಯಕಾಂತಿ, ಮೆಣಸಿನಕಾಯಿ, ಗೋವಿನಜೋಳ ಸೇರಿ ಹಲವು ಬೆಳೆಗಳಿಗೆ ಕಂಟಕವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us