ಖಾಸಗಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು ಆರೋಪ: ಆಸ್ಪತ್ರೆಯ ಕಿಟಕಿ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ

|

Updated on: May 26, 2023 | 9:17 PM

ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವನ್ನಪ್ಪಿರುವುದಾಗಿ ಆರೋಪ ಮಾಡಲಾಗಿದೆ. ಆಸ್ಪತ್ರೆಯ ಕಿಟಕಿ ಗಾಜು ಒಡೆದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು ಆರೋಪ: ಆಸ್ಪತ್ರೆಯ ಕಿಟಕಿ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ
ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ
Follow us on

ಗದಗ: ಖಾಸಗಿ ಆಸ್ಪತ್ರೆ ವೈದ್ಯರ (private doctors) ನಿರ್ಲಕ್ಷ್ಯದಿಂದ ರೋಗಿ ಸಾವನ್ನಪ್ಪಿರುವುದಾಗಿ ಆರೋಪ ಮಾಡಲಾಗಿದೆ. ಆಸ್ಪತ್ರೆಯ ಕಿಟಕಿ ಗಾಜು ಒಡೆದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸಿ.ಎಸ್.ಐ ಜರ್ಮನ್ ಆಸ್ಪತ್ರೆಯ ಕಿಟಕಿ ಗಾಜು ಒಡೆದು ರೋಗಿ ಕಡೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಸ್ಮಾಯಿಲಸಾಬ್ ಡಂಬಳ(50) ಮೃತ ವ್ಯಕ್ತಿ. ಗದಗದ ವಸಂತನಗರ ನಿವಾಸಿಯಾಗಿರುವ ಮೃತ ಇಸ್ಮಾಯಿಲಸಾಬ್​ ಉಸಿರಾಟ ತೊಂದರೆಯಿಂದ ಸೋಮವಾರ ತಡರಾತ್ರಿ ಸಿಎಸ್​​ಐ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ ನಿರ್ಲಕ್ಷ್ಯದಿಂದ ಶುಕ್ರವಾರ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೆಟಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ವೈದ್ಯರ ನಿರ್ಲಕ್ಷ್ಯ ಆರೋಪ, ಹೊಟ್ಟೆಯಲ್ಲಿ ಮಗು ಸಹಿತ ತುಂಬು ಗರ್ಭಿಣಿ ಸಾವು

ಯಾದಗಿರಿ: ಹೆರಿಗೆಗೆಂದು ಹೋಗಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಜಿಲ್ಲಾಸ್ಪತ್ರೆಯ ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತ ರ್ದುದೈವಿ. ಮೇ 3ರಂದು ಹೆರಿಗೆಗೆಂದು ಸಂಗೀತಾ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿ ನಾರ್ಮಲ್ ಹೆರಿಗೆ ಮಾಡೋದಾಗಿ ವೈದ್ಯರು ಹೇಳಿದ್ದರು. ಇಡೀ ದಿನ ಆರೋಗ್ಯವಾಗಿಯೇ ಇದ್ದ ಸಂಗೀತಾ ನಿನ್ನೆ(ಮೇ.4) ಸಂಜೆ ಮೃತಪಟ್ಟಿದ್ದಾರೆಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: Yadgir News: ಆ್ಯಂಬುಲೆನ್ಸ್ ಸಿಬ್ಬಂದಿಗಳ ಸಮಯ ಪ್ರಜ್ಞೆ: ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಹೆಣ್ಣು ಮಗವಿಗೆ ಜನ್ಮ ನೀಡಿದ ಮಹಿಳೆ

ಇದನ್ನ ಕೇಳಿದ ಪೋಷಕರು ಶಾಕ್​ ಆಗಿದ್ದು, ವೈದ್ಯರ ನಿರ್ಲಕ್ಷ್ಯವೇ ಮಗಳ ಸಾವಿಗೆ ಕಾರಣ ಎಂದು ಪೋಷಕರು, ಕುಟುಂಬಸ್ಥರು ಯಾದಗಿರಿ ಜಿಲ್ಲಾಸ್ಪತ್ರೆ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ವೈದ್ಯರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗರ್ಭಿಣಿಗೆ ಮಾರ್ಗ ಮಧ್ಯೆ ಸುರಕ್ಷಿತ ಹೆರಿಗೆ ಮಾಡಿಸಿದ ಆ್ಯಂಬುಲೆನ್ಸ್ ಸಿಬ್ಬಂದಿಗಳು 

ಯಾದಗಿರಿ: ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಮಾರ್ಗ ಮಧ್ಯೆ ಸುರಕ್ಷಿತ ಹೆರಿಗೆ ಮಾಡಿಸುವ ಮೂಲಕ ಆ್ಯಂಬುಲೆನ್ಸ್ ಸಿಬ್ಬಂದಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾದಲ್ಲಿ ಘಟನೆ ನಡೆದಿದೆ. ಕಕ್ಕೇರಾದಿಂದ ರಾಯಚೂರಿನ ಲಿಂಗಸಗೂರು ಆಸ್ಪತ್ರೆಗೆ ಹೋಗುವಾಗ ಮಾರ್ಗ ಮಧ್ಯೆ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ಮಲ್ಲಮ್ಮ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿನ ತೂಕ ಹೆಚ್ಚಾಗಿದ್ದರಿಂದ ಲಿಂಗಸಗೂರು ಆಸ್ಪತ್ರೆಗೆ ವೈದ್ಯರು ರವಾನಿಸಿದ್ದಾರೆ.

ಆ್ಯಂಬುಲೆನ್ಸ್ ಸಿಬ್ಬಂದಿ ಮಹಾಂತೇಶ ಹಾಗೂ ಲಾಲಸಾಬ್​ರಿಂದ ಸುರಕ್ಷಿತ ಹೆರಿಗೆ ಮಾಡಲಾಗಿದೆ. ಹೆರಿಗೆ ನಂತರ ತಾಯಿ-ಮಗು ಆರೋಗ್ಯವಾಗಿದ್ದು, ಲಿಂಗಸಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.