AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಖಾಕಿ ಸಮರ: ಕಂತೆ ಕಂತೆ ಹಣ, ಚಿನ್ನಾಭರಣ ಕಂಡು ಶಾಕ್​​!

Gadag News: ಗದಗ ಪೊಲೀಸರು ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಸಮರ ಸಾರಿದ್ದಾರೆ. ಬೆಟಗೇರಿ ಪ್ರದೇಶದಲ್ಲಿ ನಡೆದ ಭರ್ಜರಿ ದಾಳಿಯಲ್ಲಿ, ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು, ಖಾಲಿ ಚೆಕ್ ಮತ್ತು ಬಾಂಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಮನೋಹರ್ ಕಟ್ಟಿಮಣಿ ಸೇರಿ ಅಕ್ರಮ ಹಣಕಾಸು ವ್ಯವಹಾರ ನಡೆಸುತ್ತಿದ್ದವರ ವಿರುದ್ಧ ಮೈಕ್ರೋಫೈನಾನ್ಸ್ ಮತ್ತು ಬಿಎನ್‌ಎಸ್ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ.

ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಖಾಕಿ ಸಮರ: ಕಂತೆ ಕಂತೆ ಹಣ, ಚಿನ್ನಾಭರಣ ಕಂಡು ಶಾಕ್​​!
ಪೊಲೀಸ್ ದಾಳಿImage Credit source: tv9 kannada
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jun 24, 2026 | 8:32 PM

Share

ಮುಖ್ಯಾಂಶಗಳು

  • ಗದಗದ ಬೆಟಗೇರಿಯ ಹಲವೆಡೆ ಪೊಲೀಸ್​ ದಾಳಿ
  • ಕಂತೆ ಕಂತೆ ಹಣ, ಅಪಾರ ಚಿನ್ನಾಭರಣ ಪತ್ತೆ
  • 5.5 ಲಕ್ಷ ನಗದು, 10 ಗೋವಾ ಮದ್ಯದ ಬಾಟಲಿ ವಶಕ್ಕೆ

ಗದಗ, ಜೂನ್​​ 24: ನಗರದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧ ಪೊಲೀಸ್ ಇಲಾಖೆ ಸಮರ ಸಾರಿದೆ. ಅಕ್ರಮ ಹಣಕಾಸು ವ್ಯವಹಾರ ಮತ್ತು ಅತಿಯಾದ ಬಡ್ಡಿ ವಸೂಲಿ ಆರೋಪ ಬೆನ್ನಲ್ಲೇ ಡಿವೈಎಸ್​ಪಿ ಮುರ್ತುಜ್ ಖಾದ್ರಿ ನೇತೃತ್ವದಲ್ಲಿ ಗದಗದ (gadag) ಬೆಟಗೇರಿಯ ಹಲವೆಡೆ ದಾಳಿ ನಡೆಸಿ ಪರಿಶೀಲನೆ ಮಾಡಿದರು. ದಾಳಿ ವೇಳೆ ಕಂತೆ ಕಂತೆ ಹಣ, ಅಪಾರ ಚಿನ್ನಾಭರಣ ಪತ್ತೆ ಆಗಿದ್ದು, ಪೊಲೀಸರೇ ಶಾಕ್ ಆಗಿದ್ದಾರೆ.

ದಾಳಿ ವೇಳೆ ಸಿಕ್ಕಿದ್ದೇನು?

ಗದಗ ಎಸ್​​ಪಿ ರೋಹನ್ ಜಗದೀಶ್ ಸೂಚನೆ ಮೇರೆಗೆ ಪೊಲೀಸ್​ರ ಆರು ತಂಡಗಳು ಏಕಕಾಲದಲ್ಲಿ ವಿವಿಧೆಡೆ ದಾಳಿ ಮಾಡಿದ್ದಾರೆ. ಅದರಲ್ಲೂ ಬಡ್ಡಿ ದಂಧೆಕೋರ ಮನೋಹರ ಕಟ್ಟಿಮಣಿ ಕಚೇರಿ ಮತ್ತು ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ 9 ಪಾಸ್​ಬುಕ್, 11 ಚೆಕ್ ಬುಕ್, ATM ಕಾರ್ಡ್, ಪ್ಯಾನ್ ಕಾರ್ಡ್​, 150ಕ್ಕೂ ಹೆಚ್ಚು ಚೆಕ್​, 65ಕ್ಕೂ ಹೆಚ್ಚು ಖಾಲಿ ಬಾಂಡ್, ಒಪ್ಪಂದ ಪತ್ರಗಳು ಪತ್ತೆ ಆಗಿವೆ.

ಇದನ್ನೂ ಓದಿ: ಗದಗದಲ್ಲಿ ಬಡ್ಡಿ ಬಕಾಸುರರ ಅಟ್ಟಹಾಸ: 17 ಲಕ್ಷ ರೂ. ಸಾಲ ಕೊಟ್ಟು ರೈತನ 5 ಎಕರೆ ಜಮೀನು ನುಂಗಿದ ರೌಡಿಶೀಟರ್ ಗ್ಯಾಂಗ್

ಇನ್ನು 60 ಲಕ್ಷ ರೂಪಾಯಿ ಮೌಲ್ಯದ 422.4 ಗ್ರಾಂ ಚಿನ್ನಾಭರಣ. 5.5 ಲಕ್ಷ ನಗದು, 10 ಗೋವಾ ಮದ್ಯದ ಬಾಟಲಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಬ್ಬಾಳಿಕೆ, ಬೆದರಿಕೆ, ಮೈಕ್ರೋಫೈನಾನ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಮಾಜಕ್ಕೆ ಹಾನಿಕಾರಕವಾಗಿರುವ ಅಕ್ರಮ ಹಣಕಾಸು ವ್ಯವಹಾರಗಳನ್ನು ನಿಯಂತ್ರಿಸಲು ಹಾಗೂ ನಿರ್ಮೂಲನೆ ಮಾಡಲು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ದಾಳಿ ಕುರಿತು ಗದಗ ಎಸ್​​ಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.

ಮುಂಡಗೋಡದಲ್ಲಿ ಮೀಟರ್ ಬಡ್ಡಿ ದಂಧೆಗೆ ಬಿಳುತ್ತಿಲ್ಲ ಬ್ರೇಕ್: ಪೊಲೀಸರು ದಾಳಿ

ಇನ್ನು ಇತ್ತ ಮುಂಡಗೋಡನಲ್ಲಿ ಮೀಟರ್ ಬಡ್ಡಿ ದಂಧೆಗೆ ಬಿಳುತ್ತಿಲ್ಲ ಬ್ರೇಕ್. ಎಷ್ಟೇ ಕಠಿಣ ಕ್ರಮಕೈಗೊಂಡರು ದಂಧೆಕೋರರು ಮಾತ್ರ ಬಗ್ಗುತ್ತಿಲ್ಲ. ಹೀಗಾಗಿ ಶಿರಸಿ ಡಿವೈಎಸ್​​ಪಿ ಗೀತಾ ಪಾಟೀಲ್ ನೆತೃತ್ವದಲ್ಲಿ ಇಂದು ಬೆಳಿಗ್ಗೆ ಒಟ್ಟು 14 ಜನರ ಮನೆ ಮೇಲೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.

ಮುಂಡಗೋಡ ಪಟ್ಟಣದ ನಿವಾಸಿ ತೌಸಿಪ್ ಪಣಿಬಂದ ಮನೆ ಮೇಲೆ ಅನುಮಾನಸ್ಪದ ದಾಳಿಯಲ್ಲಿ 14 ಖಾಲಿ ಚೆಕ್ ಹಾಗೂ ಬಾಂಡ್​​ಗಳು ಪತ್ತೆ ಆಗಿವೆ. ಇನ್ನು ಮೊಹಮ್ಮದ್ ಪಾನವಾಲೆ ಮನೆಯಲ್ಲಿ ಎರಡು ಜಿಂಕೆ ಕೊಂಬು ಪತ್ತೆ ಆಗಿವೆ. ಸದ್ಯ ಮುಂಡಗೊಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇಡಿ ಖೆಡ್ಡಾಕ್ಕೆ ಬಿದ್ದ ಸಚಿವ ಜಾರಕಿಹೊಳಿ ಬಾಮೈದ: ಮೆಗಾ ಕಾರ್ಯಾಚರಣೆಯಲ್ಲಿ ಏನೆಲ್ಲಾ ಸಿಕ್ತು?

ಮುಂಡಗೊಡನಲ್ಲಿ ಬಡ್ಡಿ ದಂಧೆ ತಣ್ಣಗಾಗಿತ್ತು ಎನ್ನಲಾಗಿತ್ತು. ಇಂದು ಬೆಳಿಗ್ಗೆ 14 ಖಾಲಿ ಚೆಕ್ ಪತ್ತೆ ಹಿನ್ನೆಲೆ ಮುಂಡಗೋಡನಲ್ಲಿ ಮೀಟರ್ ಬಡ್ಡಿ ದಂಧೆ ಬಯಲಿಗೆ‌‌. ಕಳೆದ ಒಂದುವರೆ ವರ್ಷದಲ್ಲಿ 63 ಮನೆಗಳ ಮೇಲೆ ಪೊಲೀಸರು ದಾಳಿ‌‌ ಮಾಡಿದ್ದು, 58 ಜನರನ್ನ ಬಂಧಿಸಿ, 2 ರೌಡಿ ಶೀಟರ್​​ನ್ನ ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!