ಗಣರಾಜ್ಯೋತ್ಸವ: ಗದಗ ಕಲಾಚೇತನ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಕಾವೆಂಶ್ರೀಗೆ ಆಹ್ವಾನ

ಗದಗದ ನೇಸರ ಉಪಾಹಾರ ಹೋಟೆಲ್‌ನ ಮಾಲೀಕರಾಗಿರುವ ಕಾವೆಂಶ್ರೀ 1996ರಲ್ಲಿ ಕಲಾಚೇತನ ಸಾಂಸ್ಕೃತಿಕ ಸಂಘಟನೆಯನ್ನು ಸ್ಥಾಪಿಸಿದ್ದಾರೆ. ಆ ಮೂಲಕ ಕಳೆದ 28 ವರ್ಷಗಳಿಂದ ಕಲೆ, ಸಾಹಿತ್ಯಕ್ಕೆ ಕೊಡುಗೆ ನೀಡುತ್ತಾ ಬಂದಿದ್ದಾರೆ.

ಗಣರಾಜ್ಯೋತ್ಸವ: ಗದಗ ಕಲಾಚೇತನ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಕಾವೆಂಶ್ರೀಗೆ ಆಹ್ವಾನ
ಕಾವೆಂಶ್ರೀ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jan 24, 2024 | 3:14 PM

ಬೆಂಗಳೂರು, ಜನವರಿ 24: ಸಾಹಿತ್ಯ, ಸಂಸ್ಕೃತಿಗೆ ನೀಡಿರುವ ವಿಶಿಷ್ಟ ಕೊಡುಗೆಯ ಮೂಲಕವೇ ಪ್ರಧಾನಿ ನರೇಂದ್ರ ಮೋದಿ ಅವರ ಮನಗೆದ್ದಿರುವ ಗದಗ (Gadag) ಹೋಟೆಲ್ ಉದ್ಯಮಿ, ಕಲಾಚೇತನ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಡಾ ಕಾವೆಂಶ್ರೀ (ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ್) ಅವರಿಗೆ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ (Republic Day 2024) ಪರೇಡ್​​ನಲ್ಲಿ ಅತಿಥಿಯಾಗಿ ಭಾಗವಹಿಸಲು ಆಹ್ವಾನ ದೊರೆತಿದೆ. ಕಾವೆಂಶ್ರೀ ಅವರ ಬಗ್ಗೆ ತಿಂಗಳ ರೇಡಿಯೋ ಕಾರ್ಯಕ್ರಮ ‘ಮನ್​ ಕೀ ಬಾತ್​’ನಲ್ಲಿಯೂ ಈ ಹಿಂದೆ ಪ್ರಧಾನಿಯವರು ಪ್ರಸ್ತಾಪಿಸಿದ್ದರು.

‘ಮನ್​ ಕೀ ಬಾತ್​​’ನಲ್ಲಿ ಪ್ರಧಾನಿಯವರು ಹೆಸರು ಪ್ರಸ್ತಾಪಿಸಿರುವ ಪ್ರಮುಖರಿಗೂ ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಆಹ್ವಾನ ನೀಡಲಾಗಿದೆ. ಅದರಂತೆ ಕಾವೆಂಶ್ರೀ ಅವರಿಗೂ ಆಹ್ವಾನ ದೊರೆತಿದ್ದು, ಇಂದು (ಜನವರಿ 24) ದೆಹಲಿಗೆ ತೆರಳಿದ್ದಾರೆ.

ಈ ಬಾರಿ ದೇಶದ 1500 ರೈತ ದಂಪತಿಗೆ ಕೂಡ ಗಣರಾಜ್ಯೋತ್ಸವಕ್ಕೆ ವಿಶೇಷ ಆಹ್ವಾನ ನೀಡಲಾಗಿದೆ. ಅದರೊಂದಿಗೆ, ‘ಮನ್ ಕೀ ಬಾತ್​​’ನಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದ ಗಣ್ಯರಿಗೂ ಆಹ್ವಾನ ನೀಡಲಾಗಿದೆ. ಅದರಂತೆ, ದೆಹಲಿಗೆ ತೆರಳಿರುವರನ್ನು ಅಲ್ಲಿನ ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರದೇಶಗಳಿಗೂ ಕರೆದೊಯ್ಯುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡಿದೆ.

ದೆಹಲಿ ಪ್ರಯಾಣ, ವಾಸ್ತವ್ಯ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಕೇಂದ್ರ ಸರ್ಕಾರವೇ ಮಾಡಿದೆ. ಸಾಹಿತ್ಯ, ಸಂಸ್ಕೃತಿ ಕ್ಷೇತ್ರಕ್ಕೆ ನೀಡಿರುವ ಕಿರು ಕೊಡುಗೆಯನ್ನು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರ ಗುರುತಿಸಿರುವುದು ಸಂತಸ ನೀಡಿದೆ ಎಂದು ಕಾವೆಂಶ್ರೀ ‘ಟಿವಿ9 ಕನ್ನಡ ಡಿಜಿಟಲ್​​’ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಗದಗದಲ್ಲಿ ಅರಳಿದ ಕಲಾಚೇತನ; ಕಾವೆಂಶ್ರೀ ಎಂಬ ಹೋಟೆಲ್ ಉದ್ಯಮಿಯ ಕಲಾಸೇವೆಯ ಯಶೋಗಾಥೆಗೆ ನಮೋ

ಇದೇ ಮೊದಲಲ್ಲ

ಪ್ರಧಾನಿ ನರೇಂದ್ರ ಮೋದಿ ಅವರ ಮನ್​ ಕೀ ಬಾತ್​​ನ 100ನೇ ಕಾರ್ಯಕ್ರಮಕ್ಕೂ ಕಾವೆಂಶ್ರೀ ಅವರಿಗೆ ಆಹ್ವಾನ ದೊರೆತಿತ್ತು. ಅದರಂತೆ ಕಳೆದ ವರ್ಷ ಏಪ್ರಿಲ್ 27ರಂದು ಅವರು ದೆಹಲಿಗೆ ತೆರಳಿ ವಾಪಸಾಗಿದ್ದರು. ಆಗ ಕರ್ನಾಟಕದಿಂದ ಆಹ್ವಾನಿಸಲಾದ 7 ಜನ ಅತಿಥಿಗಳಲ್ಲಿ ಕಾವೆಂಶ್ರೀ ಸಹ ಒಬ್ಬರಾಗಿದ್ದರು.

ಗದಗದಲ್ಲರಳಿದ ಕಲಾಚೇತನ

ಗದಗದ ನೇಸರ ಉಪಾಹಾರ ಹೋಟೆಲ್‌ನ ಮಾಲೀಕರಾಗಿರುವ ಕಾವೆಂಶ್ರೀ 1996ರಲ್ಲಿ ಕಲಾಚೇತನ ಸಾಂಸ್ಕೃತಿಕ ಸಂಘಟನೆಯನ್ನು ಸ್ಥಾಪಿಸಿದ್ದಾರೆ. ಆ ಮೂಲಕ ಕಳೆದ 28 ವರ್ಷಗಳಿಂದ ಕಲೆ, ಸಾಹಿತ್ಯಕ್ಕೆ ಕೊಡುಗೆ ನೀಡುತ್ತಾ ಬಂದಿದ್ದಾರೆ. ಕಾವೆಂಶ್ರೀ ಅವರು ಹಂಪಿ ವಿಶ್ವವಿದ್ಯಾನಿಲಯದಿಂದ ‘ರಂಗಸಂಕಥನಕಾರ ಚಿಟ್ಟಾಣಿ ರಾಮಚಂದ್ರ ಹೆಗಡೆ: ಒಂದು ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಡಿ-ಲಿಟ್ (ಡಾಕ್ಟರೇಟ್) ಪದವಿಯನ್ನೂ ಪಡೆದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮನಗೆದ್ದ ಕೊಳ್ಳೆಗಾಲದ ಕವಿ ಮಂಜುನಾಥ್​ಗೆ ಗಣರಾಜ್ಯೋತ್ಸವದ ಆಹ್ವಾನ

ಲಾಲಿ ಹಾಡು ಹಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದ್ದ ಚಾಮರಾಜನಗರದ ಕವಿ ಮಂಜುನಾಥ್ ಅವರೂ ಗಣರಾಜ್ಯೋತ್ಸವ ಪರೇಡ್​ನಲ್ಲಿ ಅತಿಥಿಯಾಗಿ ಭಾಗವಹಿಸಲು ಆಹ್ವಾನ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 24 January 24

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು