AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚ್ಚರಿ ಘಟನೆಗೆ ಸಾಕ್ಷಿಯಾದ ಬೆಟಗೇರಿ: ಒಂದೇ ದಿನದಲ್ಲಿ ಸತ್ತು ಬದುಕಿದ ವ್ಯಕ್ತಿ!

ಮೃತಪಟ್ಟಿದ್ದಾರೆ ಎಂದುಕೊಂಡಿದ್ದ ವ್ಯಕ್ತಿ ಮತ್ತೆ ಉಸಿರಾಡಿದ್ದಾರೆ. ಇಂತಹದೊಂದು ಅಚ್ಚರಿಯ ಘಟನೆ ಗದಗ ನಗರದ ಬೆಟಗೇರಿಯಲ್ಲಿ ನಡೆದಿದ್ದು, ಜನರು ಅಕ್ಷರಶಃ ಚಕಿತಗೊಂಡಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು. ಆದರೆ ಮನೆಗೆ ತರುವ ವೇಳೆ ಮತ್ತೆ ಉಸಿರಾಡುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.

ಅಚ್ಚರಿ ಘಟನೆಗೆ ಸಾಕ್ಷಿಯಾದ ಬೆಟಗೇರಿ: ಒಂದೇ ದಿನದಲ್ಲಿ ಸತ್ತು ಬದುಕಿದ ವ್ಯಕ್ತಿ!
ನಾರಾಯಣ ವನ್ನಾಲ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 08, 2025 | 10:10 PM

Share

ಗದಗ, ನವೆಂಬರ್​​ 08: ಆ ವ್ಯಕ್ತಿಗೆ (man) ಗಂಭೀರ ಕಾಯಿಲೆ ಇತ್ತು. ಬ್ರೇನ್ ಹ್ಯಾಬ್ರೇಜ್ ಹಾಗೂ ಪಿತ್ತಕೋಶ ಸಮಸ್ಯೆಯಿಂದ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಆರು ಗಂಟೆಗಳ ಕಾಲ ವೈದ್ಯರು ಆಪರೇಷನ್ ಮಾಡಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಸ್ಥಿತಿ ಚಿಂತಾಜನವಾಗಿತ್ತು. ವ್ಯಕ್ತಿ ಕೋಮಾಗೆ ಹೋಗಿದ್ದರು. ಆದರೆ ಮೃತಪಟ್ಟಿದ್ದಾರೆಂದು (death) ಸುದ್ದಿ ಹಬ್ಬಿತ್ತು. ಕುಟುಂಬಸ್ಥರು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದರು. ಆದರೆ ನಡುರಸ್ತೆಯಲ್ಲಿ ಏಕಾಏಕಿ ವ್ಯಕ್ತಿ ಉಸಿರಾಟದಿಂದ ಎಲ್ಲರಿಗೂ ಅಚ್ಚರಿಯುಂಟಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗದಗ-ಬೆಟಗೇರಿಯಲ್ಲಿ ಅಚ್ಚರಿ ಘಟನೆ

ಇಂತಹದೊಂದು ಅಚ್ಚರಿ ಘಟನೆ ಗದಗ-ಬೆಟಗೇರಿಯಲ್ಲಿ ನಡೆದಿದೆ‌. ಗದಗ ಬೆಟಗೇರಿ ನಿವಾಸಿ ನಾರಾಯಣ ವನ್ನಾಲ್ (38) ಅವರು ಬ್ರೇಜ್ ಹ್ಯಾಬ್ರೇಜ್, ಪಿತ್ತಕೋಶದ ಸಮಸ್ಯೆಯಿಂದ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ನಾರಾಯಣ ವನ್ನಾಲ್​ಗೆ ಸುಮಾರು ಆರು ಗಂಟೆಗಳ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸ್ಥಿತಿ ಗಂಭೀರವಾಗಿತ್ತು. ಕೋಮಾಕ್ಕೆ ಹೋಗಿದ್ದರು.

ಇದನ್ನೂ ಓದಿ: ಕಲಬುರಗಿ: ಹಗಲಲ್ಲಿ ಕುರಾನ್ ಬೋಧಕ; ರಾತ್ರಿ ಮನೆಗಳಿಗೆ ಕನ್ನ, ಶಿಕ್ಷಕ ಅರೆಸ್ಟ್​​

ವೆಂಟಿಲೇಟರ್ ತೆಗೆದರೆ ಬದುಕಲ್ಲ ಎಂದು ಹೇಳಿದ್ದರಂತೆ. ಹೀಗಾಗಿ ಸಂಬಂಧಿಕರು ಆ್ಯಂಬುಲೆನ್ಸ್​ನಲ್ಲಿ ಗದಗ ನಗರಕ್ಕೆ ಕೆರೆ ತರುವಾಗ ಪ್ರಾಣ ಹೋಗಿತ್ತಂತೆ. ಹೀಗಾಗಿ ಕುಟುಂಬಸ್ಥರು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದರು. ಆದರೆ ಮನೆಗೆ ತರುವ ವೇಳೆ ಮತ್ತೆ ಉಸಿರಾಡುವ ಮೂಲಕ ಎಲ್ಲರಿಗೂ ಅಚ್ಚರಿಗೊಳಿಸಿದ್ದಾರೆ.

ಇದನ್ನೂ ಓದಿ: ಒಂದೂವರೆ ಗಂಟೆಯಿಂದ ಆಗಸದಲ್ಲೇ ಸುತ್ತಾಡಿದ ವಿಮಾನ: ಮುಂದೇನಾಯ್ತು?

ಮೃತಪಟ್ಟಿದ್ದಾರೆ ಎಂದು ತಿಳಿದಿದ್ದ ನಾರಾಯಣ ಅಚ್ಚರಿ ಎಂಬಂತೆ ಉಸಿರಾಡಿದ್ದಾರೆ. ತಕ್ಷಣ ಕುಟುಂಬಸ್ಥರು ಬೆಟಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಚ್ಚರಿಯ ಘಟನೆಯಿಂದ ಗದಗ-ಬೆಟಗೇರಿಯಲ್ಲಿ ಸಂಚಲನ ಮೂಡಿದೆ. ಇದು ದೇವರ ಪವಾಡ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಕುಟುಂಬ ಸದಸ್ಯರು ಕೂಡ ನಾರಾಯಣ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಒಟ್ಟಾರೆ ವೈದ್ಯರ ನಿರ್ಲಕ್ಷ್ಯದಿಂದ ಜೀವಂತವಾಗಿದ್ದ ವ್ಯಕ್ತಿಯ ಅಂತ್ಯಕ್ರಿಯೆ ಆಗುತ್ತಿತ್ತು.‌ ಆದರೆ ಪವಾಡಸದೃತ್​​ ಎಂಬಂತೆ ಬದುಕುಳಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ