60 ವರ್ಷ ಕಾಂಗ್ರೆಸ್ ಪಕ್ಷ ರಾಜ್ಯಕ್ಕೆ ಅಷ್ಟೇ ಅಲ್ಲ, ಇಡೀ ದೇಶಕ್ಕೆ ಶಾಪವಾಗಿತ್ತು; ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಮೈಸೂರಿನಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಶ್ರೀರಾಮುಲು, ಕಾಂಗ್ರೆಸ್​ನವರು ತನಿಖೆಗೆ ಪ್ರತ್ಯೇಕ ಸಮಿತಿ ರಚನೆ ಮಾಡಿದ್ದಾರೆ ಎಂದರು.

60 ವರ್ಷ ಕಾಂಗ್ರೆಸ್ ಪಕ್ಷ ರಾಜ್ಯಕ್ಕೆ ಅಷ್ಟೇ ಅಲ್ಲ, ಇಡೀ ದೇಶಕ್ಕೆ ಶಾಪವಾಗಿತ್ತು; ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ
ಸಚಿವ ಶ್ರೀರಾಮುಲು
Follow us
TV9 Web
| Updated By: sandhya thejappa

Updated on:Aug 29, 2021 | 12:05 PM

ಗದಗ: ಕಾಂಗ್ರೆಸ್ ಪಕ್ಷ (Congress) 60 ವರ್ಷ ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಶಾಪವಾಗಿತ್ತು ಅಂತ ಕಾಂಗ್ರೆಸ್ ವಿರುದ್ಧ ಸಚಿವ ಶ್ರೀರಾಮುಲು (Sri Ramulu) ವಾಗ್ದಾಳಿ ನಡೆದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ನಂತರ ರಾಜ್ಯಕ್ಕೆ ಶಾಪ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ 60 ವರ್ಷ ರಾಜ್ಯಕ್ಕೆ ಅಷ್ಟೇ ಅಲ್ಲ ಇಡೀ ದೇಶಕ್ಕೆ ಶಾಪವಾಗಿತ್ತು. ಆ ಶಾಪದಿಂದ ಮುಕ್ತಿಯಾಗಿ ದೇಶದಲ್ಲಿ ನರೇಂದ್ರ ಮೋದಿಯವರ ಸರಕಾರ ಬಂದಿದೆ. ರಾಜ್ಯದಲ್ಲಿ ಬೊಮ್ಮಾಯಿಯವರ ಸರಕಾರ ಸಮರ್ಥವಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ಇನ್ನು ಮೈಸೂರಿನಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಶ್ರೀರಾಮುಲು, ಕಾಂಗ್ರೆಸ್​ನವರು ತನಿಖೆಗೆ ಪ್ರತ್ಯೇಕ ಸಮಿತಿ ರಚನೆ ಮಾಡಿದ್ದಾರೆ. ಮಹಿಳೆಯರಿಗೆ ರಕ್ಷಣೆ ಕೊಡುವಲ್ಲಿ ನಮ್ಮ ಸರಕಾರ ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು

ಈಗಾಗಲೇ ಆರೋಪಿಗಳನ್ನ ಬಂಧಿಸಲಾಗಿದೆ. ಕಾಂಗ್ರೆಸ್ನವರು ಅಧಿಕಾರ ಕಳೆದುಕೊಂಡಿದ್ದಾರೆ. ಅಧಿಕಾರವಿಲ್ಲದೆ ಅವರಿಗೆ ಬೇಕಾದ ರೀತಿ ಮಾತನಾಡುತ್ತಾರೆ. ಅವರು ಹಗಲು ಗನಸು ಕಾಣುತ್ತಿದ್ದಾರೆ. ಉಳಿದ ಆರೋಪಿಗಳನ್ನೂ ಬಂಧಿಸುವಂತ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಮತ್ತು ಡಿಕೆಶಿ ಕೇವಲ ಫೋಟೋ ಫ್ರೆಂಡ್ಸ್. ದೆಹಲಿಗೆ ಹೋದಾದ ಮಾತ್ರ ಒಂದಾಗಿರುತ್ತಾರೆ. ರಾಹುಲ್, ಸೋನಿಯಾ ಗಾಂಧಿ ಎದುರು ಕೈ ಕುಲಾಯಿಸುತ್ತಾರೆ. ಹೊರಗಡೆ ಇಬ್ಬರ ಮಧ್ಯೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ ಇದೆ. ಕಾಂಗ್ರೆಸ್ ಹಗಲುಕನಸು ಕಾಣುತ್ತಿದೆ. ಎಲ್ಲಾ ಚುನಾವಣೆಯಲ್ಲಿ ಕೈ ನಾಯಕರು ನಾವೇ ಗೆಲುತ್ತೀವಿ ಅಂತಾರೆ. ಆದರೆ ಎಲ್ಲೂ ಗೆದ್ದಿಲ್ಲ ಅಂತ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ

‘ನೀಚವಾಗಿ ಬೈಯ್ದು, ರಾಜಕೀಯ ಮಾಡುವವರ ಲೆವೆಲ್​ಗೆ ರಮ್ಯಾ ಇಳಿಯಲ್ಲ’: ಕವಿತಾ ಲಂಕೇಶ್​

ಡ್ರೋನ್​ ಅಟ್ಯಾಕ್​ ಮೂಲಕ ಇಬ್ಬರು ಐಸಿಸ್​​ ಉಗ್ರರು ಹತ, ಇನ್ನೊಬ್ಬನಿಗೆ ತೀವ್ರ ಗಾಯ: ಅಮೆರಿಕಾ ಮಾಹಿತಿ

(Sriramulu said the 60 year Congress was a curse for the entire country in gadag)

Published On - 10:41 am, Sun, 29 August 21