ಗದಗ: ಶಂಕಿತ ಡೆಂಗ್ಯೂಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಬಲಿ

ದಸರಾ ರಜೆಗೆ ಊರಿಗೆ ಬಂದಿದ್ದ ವೈಶಾಲಿ, ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಗದಗ: ಶಂಕಿತ ಡೆಂಗ್ಯೂಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಬಲಿ
ವೈಶಾಲಿ
Follow us
TV9 Web
| Updated By: preethi shettigar

Updated on:Oct 17, 2021 | 12:01 PM

ಗದಗ: ಶಂಕಿತ ಡೆಂಗ್ಯೂಗೆ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ನಡೆದಿದೆ. ವೈಶಾಲಿ ಶಿವಪ್ಪ ಸಾವನ್ನಪ್ಪಿದ ವಿದ್ಯಾರ್ಥಿನಿ. ದಸರಾ ರಜೆಗೆ ಊರಿಗೆ ಬಂದಿದ್ದ ವೈಶಾಲಿ, ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಶಿವಪ್ಪ ಮತ್ತು ತುಳಚಾಬಾಯಿ ದಂಪತಿಗೆ ಒಬ್ಬಳೆ ಮಗಳು ವೈಶಾಲಿ. ಗದಗ ತಾಲೂಕಿನ ಮುಳಗುಂದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವೈಶಾಲಿ ವ್ಯಾಸಂಗ ಮಾಡುತ್ತಿದ್ದಳು. ದಸರಾ ರಜೆ ಹಿನ್ನೆಲೆ ಊರಿಗೆ ಬಂದಿದ್ದಾಳೆ. ಆದರೆ ಮೊನ್ನೆ (ಅಕ್ಟೋಬರ್ 15) ವೈಶಾಲಿ ಸಾವನ್ನಪ್ಪಿದ್ದಾಳೆ. ವಿದ್ಯಾರ್ಥಿನಿ ವೈಶಾಲಿ ಸಾವಿಗೆ ಮನೆಯಲ್ಲಿ ಅಲ್ಲದೇ ಇಡೀ ಹರದಗಟ್ಟಿ ಗ್ರಾಮವೇ ಕಂಬನಿ ಮಿಡಿಯುತ್ತಿದೆ.

ಬಾಗಲಕೋಟೆ:ಕನ್ಯೆ ನೋಡಲು ಬಂದಿದ್ದ ಯುವಕ ಸಾವು ಕನ್ಯೆಯನ್ನು ನೋಡಲು ಹೋಗಿದ್ದ ಯುವಕ, ಕಾಲು ಜಾರಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಬಲಕುಂದಿ ತಾಂಡಾದಲ್ಲಿ ನಡೆದಿದೆ. ಬಯಲು ಬಹಿರ್ದೆಸೆಗೆ ಹೋಗಿದ್ದಾಗ ಕಾಲೂವೆಯಲ್ಲಿ ಕಾಲುಜಾರಿ ಬಿದ್ದು ಪ್ರತಾಪ್ ನಾಯಕ್(24) ಸಾವನ್ನಪ್ಪಿದ್ದಾರೆ. ಇಳಕಲ್ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪ್ರತಾಪ್ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ತರಿಗೆದೊಡ್ಡಿ ಗ್ರಾಮದ ಯುವಕ. ಕುಟುಂಬದವರು ಸೇರಿ ನಿನ್ನೆ ಬಲಕುಂದಿ ತಾಂಡಾಕ್ಕೆ ಕನ್ಯೆ ನೋಡಲು ಬಂದಿದ್ದರು. ಸಂಜೆ ಬಹಿರ್ದೆಸೆಗಾಗಿ ಕಾಲುವೆ ಬಳಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಇತ್ತೀಚಿಗೆ ಸುರಿದ ಮಳೆಯಿಂದ ಕಾಲೂವೆಯಲ್ಲಿ ನೀರು ಬಂದಿತ್ತು. ಇದರಿಂದಾಗಿ ಯುವಕ ಬಲಿಯಾಗಿದ್ದಾರೆ. ಇಂದು (ಅಕ್ಟೋಬರ್ 17) ಬೆಳಿಗ್ಗೆ ಅಗ್ನಿಶಾಮಕ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಚಾಮರಾಜನಗರ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ನಡೆದಿದೆ. ರೈತರೊಬ್ಬರ ಜಮೀನಿನಲ್ಲಿ ಮೂವರು ಯುವಕರು ಭೇಟೆಯಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಕುಮಾರ್(22) ಸಾವನ್ನಪ್ಪಿದ್ದಾನೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಬಿಬಿಎಂಪಿ ಎಡವಟ್ಟಿಗೆ 9 ವರ್ಷದ ಬಾಲಕ ಬಲಿ!

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!

Published On - 11:57 am, Sun, 17 October 21

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ