ಗದಗ: ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿ ಸಾವು, ಶಿಕ್ಷಕಿ ಸ್ಥಿತಿ ಗಂಭೀರ

| Updated By: ವಿವೇಕ ಬಿರಾದಾರ

Updated on: Dec 19, 2022 | 4:24 PM

ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಗದಗ: ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿ ಸಾವು, ಶಿಕ್ಷಕಿ ಸ್ಥಿತಿ ಗಂಭೀರ
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹದಲಿ
Follow us on

ಗದಗ: ಅತಿಥಿ ಶಿಕ್ಷಕನಿಂದ (Guest Teacher) ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ನರಗುಂದ (Nargund) ತಾಲೂಕಿನ ಹದಲಿ ಗ್ರಾಮದ ಸರ್ಕಾರಿ ಶಾಲೆಯ (Government School) ಭರತ್(10) ಮೃತ ವಿದ್ಯಾರ್ಥಿ (Student). ಸರ್ಕಾರಿ ಶಾಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ ಭರತ್​ ಮತ್ತು ಅದೇ ಶಾಲೆಯ ಶಿಕ್ಷಕಿ ಗೀತಾ ಬಾರಕೇರಿ ಮೇಲೆ ಅತಿಥಿ ಶಿಕ್ಷಕ ಮುತ್ತಪ್ಪ ಸಲಾಕೆಯಿಂದ ಹಲ್ಲೆ ಮಾಡಿದ್ದನು.

ಹಲ್ಲೆಗೊಳಗಾಗಿದ್ದ ಶಿಕ್ಷಕಿ ಗೀತಾ ಬಾರಕೇರಿ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ವಿರುದ್ಧ ವಿದ್ಯಾರ್ಥಿಗಳು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಮಂಗಳೂರು: ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ‌ನಡೆಸಿ ಕೊಲೆ

ಗ್ರಾಮದಲ್ಲಿ ಡಿಆರ್ ತುಕಡಿ ನಿಯೋಜನೆ

ವಿಷಯ ತಿಳಿಯುತ್ತಿದಂತೆ ಶಾಲೆಗೆ ಡಿಸಿಪಿಐ ಬಸವಲಿಂಗಪ್ಪ ಜಿ ಎಂ ಭೇಟಿ ನೀಡಿ ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷ ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಿದ್ದಾರೆ. ಡಿಡಿಪಿಐ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಡಿಆರ್ ತುಕಡಿ ನಿಯೋಜನೆ ಮಾಡಲಾಗಿದೆ

ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ

ಶಾಲೆಗೆ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಮತ್ತು  ಎಸ್ಪಿ ಶಿವಪ್ರಕಾಶ್ ಭೇಟಿ ನೀಡಿ, ಘಟನೆ ಸ್ಥಳ ಪರಿಶೀಲನೆ ಮಾಡಿದ್ದಾರೆ. ನಂತರ ಡಿಸಿಪಿಐ ಬಸವಲಿಂಗಪ್ಪ ಜಿ ಎಂ ಹಾಗೂ ಸಿಪಿಐ ಮಲ್ಲಯ್ಯ ಮಠಪತಿ ಅವ್ರಿಂದ ಮಾಹಿತಿ ಕಲೆ ಹಾಕಿದ್ದಾರೆ.

ಆರೋಪಿ ಪರಾರಿಯಾಗಿದ್ದಾನೆ. ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ಕೂಡಲೇ ಆರೋಪಿ ಶಿಕ್ಷಕನನ್ನು ಬಂಧಿಸಲಾಗುತ್ತೆ ಎಂದು ಎಸ್ಪಿ ಶಿವಪ್ರಕಾಶ್ ಹೇಳಿದ್ದಾರೆ.

ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಬೆಂಗಳೂರು ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡದ ಮೇಲಿನಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ  ಮಾಡಿಕೊಂಡಿದ್ದು, ಪ್ರಕರಣದ ಹಿಂದೆ ಪ್ರೇಮ ವೈಫಲ್ಯ  ಆಗಿರುವ ಶಂಕೆ ವ್ಯಕ್ತವಾಗಿದೆ. ಮೂಲತಃ ಬೆಂಗಳೂರಿನ ನಿವಾಸಿಯಾಗಿರುವ ವಾಣಿ(23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ವಿವಿ ಪುರಂ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿನಿ ವಾಣಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಶ್ವೇಶ್ವರಯ್ಯಪುರ ಕಾಲೇಜ್ ಆಫ್ ಲಾ ಸಂಸ್ಥೆಯಲ್ಲಿ ಕಾನೂನು ಪದವಿ ವ್ಯಾಸಾಂಗ ಮಾಡುತ್ತಿದ್ದ ವಾಣಿ ಬೆಂಗಳೂರಿನ ತಾಂತ್ರಿಕ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನ.24 ರಿಂದ ಪ್ರಥಮ ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿತ್ತು. ನಿತ್ಯ ತರಗತಿಗೆ ಹಾಜರಾಗುತ್ತಿದ್ದ ವಿದ್ಯಾರ್ಥಿನಿ ವಾಣಿ, ಇಂದು ಗೈರಾಗಿದ್ದಳು. ಅಲ್ಲದೆ ಒಂದು ಪುಟದ ಪೂರ್ತಿ ಡೆತ್ ನೋಟು ಬರೆದಿಟ್ಟು ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Mon, 19 December 22