AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ರಾಜ್ಯದಲ್ಲಿ ಪವನ ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಮುದ್ರಣಕಾಶಿ ಫಸ್ಟ್! ಪ್ರತಿ ತಿಂಗಳಿಗೆ ಎಷ್ಟು ವಿದ್ಯುತ್​ ಉತ್ಪಾದನೆಯಾಗುತ್ತದೆ ಗೊತ್ತಾ?

ಅದು ಏಷ್ಯಾ ಖಂಡದಲ್ಲೇ ಅತೀ ಹೆಚ್ಚು ಗಾಳಿ ಬೀಸುವ ಪ್ರದೇಶ. ಹೀಗಾಗಿ ಆ ಜಿಲ್ಲೆಯಲ್ಲಿ ಎಲ್ಲಿ ನೋಡಿದ್ರೂ ಪವನ ವಿದ್ಯುತ್ ಯಂತ್ರಗಳು ತಲೆ ಎತ್ತಿವೆ. ಈ ಮೂಲಕ ರಾಜ್ಯದಲ್ಲೇ ಅತಿ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು ಮುದ್ರಣ ಕಾಶಿ ಗದಗ ಜಿಲ್ಲೆ ಇಡೀ ರಾಜ್ಯಕ್ಕೆ ಹೆಚ್ಚು ಪವನ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಮೈಲಿಗಲ್ಲು ಸಾಧಿಸಿದೆ.

ಇಡೀ ರಾಜ್ಯದಲ್ಲಿ ಪವನ ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಮುದ್ರಣಕಾಶಿ ಫಸ್ಟ್! ಪ್ರತಿ ತಿಂಗಳಿಗೆ ಎಷ್ಟು ವಿದ್ಯುತ್​ ಉತ್ಪಾದನೆಯಾಗುತ್ತದೆ ಗೊತ್ತಾ?
ಪವನ ವಿದ್ಯುತ್​​ ಶಕ್ತಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 11, 2023 | 3:58 PM

Share

ಗದಗ: ಜಿಲ್ಲೆಯು ರಾಜ್ಯದಲ್ಲೇ ಅತಿ ಹೆಚ್ಚು ವಿದ್ಯುತ್  ಉತ್ಪಾದನೆ(Power Generation) ಮಾಡುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದಲ್ಲಿ ಪವರ್ ಉತ್ಪಾದನೆಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ ಪಡೆದರೇ, ರಾಜ್ಯದಲ್ಲಿ ಗದಗ ಜಿಲ್ಲೆ ಮೊದಲಿದೆ. ಎಲ್ಲಿ ಕಣ್ಣು ಹಾಯಿಸಿದರೂ ಪವನ ಯಂತ್ರಗಳ ಕಲರವ. ಭರ್ ಭರ್ ಎಂದು ಸದ್ದು ಮಾಡಿ ಭರ್ಜರಿ ವಿದ್ಯುತ್ ಉತ್ಪಾದನೆ ಮಾಡುತ್ತಿರುವ ಯಂತ್ರಗಳು. ಹೌದು ಮುದ್ರಣ ಕಾಶಿ ಗದಗ ಜಿಲ್ಲೆ ಇಡೀ ಏಷ್ಯಾ ಖಂಡದಲ್ಲೇ ಅತೀ ಹೆಚ್ಚು ಗಾಳಿ ಬಿಸುವ ಪ್ರದೇಶ. ಈ ಗಾಳಿ ಇವಾಗ ಜಿಲ್ಲೆಗೆ ಭಾರಿ ವರದಾನವಾಗಿದೆ. ಗದಗ ಜಿಲ್ಲೆಯಲ್ಲಿ ಅತೀ ಹೆಚ್ಚು ಪವನ್ ಯಂತ್ರಗಳನ್ನು ಆಳವಡಿಸಲಾಗಿದೆ. ಹೀಗಾಗಿ ಇಡೀ ರಾಜ್ಯದಲ್ಲಿ ಅತೀ ಹೆಚ್ಚು ಪವನ್ ವಿದ್ಯುತ್ ಉತ್ಪಾದನೆಯನ್ನ ಮಾಡಲಾಗುತ್ತಿದೆ.

ಜಿಲ್ಲೆಯಾದ್ಯಂತ 687 ಕ್ಕೂ ಹೆಚ್ಚು ಪವನ ಯಂತ್ರಗಳ ಅಳವಡಿಕೆ; ತಿಂಗಳಿಗೆ 50 ರಿಂದ 60 ಮಿಲಿಯನ್​ ಯೂನಿಟ್​ ವಿದ್ಯುತ್ ​ಉತ್ಪಾದನೆ

ಗದಗ ಜಿಲ್ಲೆಯ ಕಪ್ಪತ್ತಗುಡ್ಡ ಹಾಗೂ ಗಜೇಂದ್ರಗಡ ಬೆಟ್ಟ, ಲಕ್ಕುಂಡಿ, ಹರ್ತಿ, ನರೇಗಲ್, ಸೇರಿದಂತೆ ಜಿಲ್ಲೆಯಾದ್ಯಂತ 687 ಕ್ಕೂ ಹೆಚ್ಚು ಪವನ ಯಂತ್ರಗಳನ್ನು ಅಳವಡಿಸಲಾಗಿದೆ. ಇನ್ನೂ ಅಳವಡಿಸುವ ಕಾರ್ಯವೂ ನಡೆದಿದೆ. ಹೀಗಾಗಿ ರಾಜ್ಯದಲ್ಲೇ ಅತೀ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡುವ ಜಿಲ್ಲೆಯ ಹೆಗ್ಗಳಿಕೆಗೆ ಗದಗ ಜಿಲ್ಲೆ ಪಾತ್ರವಾಗಿದೆ. ಪ್ರತಿ ತಿಂಗಳು 50 ರಿಂದ‌ 60 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. 50 ರಿಂದ 60 ಮಿಲಿಯನ್ ಯೂನಿಟ್ ವಿದ್ಯುತ್ ರಾಜ್ಯಕ್ಕೆ ಸರಬರಾಜು ಮಾಡಲಾಗುತ್ತಿದೆ. ಭಾರತ ದೇಶದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದ್ರೆ, ರಾಜ್ಯದಲ್ಲಿ ಗದಗ ಜಿಲ್ಲೆ ಅತೀ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡುತ್ತಿದೆ.‌

ಇದನ್ನೂ ಓದಿ:Fire Accident: ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ; ವಿದ್ಯುತ್ ಉತ್ಪಾದನೆ ಸ್ಥಗಿತ

ಇನ್ನು ಈ ಕುರಿತು ಗದಗ ಹೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನೀಯರ್ ರಾಜೇಶ್ ಕಲ್ಯಾಣಶೆಟ್ಟಿ ‘ ಜಿಲ್ಲೆಯಲ್ಲಿ ಇನ್ನೂ ಹೆಚ್ವಿನ ವಿದ್ಯುತ್ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಗದಗ ಜಿಲ್ಲೆ ಪವನ ಯಂತ್ರಗಳ ಅಳವಡಿಕೆಗೆ ಹೇಳಿ ಮಾಡಿಸಿದ ಪ್ರದೇಶವಾಗಿದೆ. ಉತ್ತಮವಾದ ಗಾಳಿ ಇರೋದರಿಂದ ಪವನ್ ಯಂತ್ರಗಳಿಂದ ವಿದ್ಯುತ್ ಉತ್ಪಾದನೆ ಮಾಡಲು ಸಹಕಾರಿಯಾಗಿದೆ ಎಂದರು.

ಗದಗ ಜಿಲ್ಲೆಯಲ್ಲಿ ಸರ್ಕಾರದ ಹಾಗೂ ಖಾಸಗಿ ಮಾಲಿಕತ್ವದ ನೂರಾರು ವಿಂಡ್ ಫ್ಯಾನ್ ‌ಗಳಿವೆ. ಸರ್ಕಾರಕ್ಕೆ ಹಾಗೂ ಖಾಸಗಿಯಾಗಿ ಕೂಡ ವಿದ್ಯುತ್ ಮಾರಾಟ ಮಾಡಲಾಗುತ್ತಿದೆ. ವಿಂಡ ಫ್ಯಾನ್ ನಿಂದ ವಿದ್ಯುತ್ ಉತ್ಪಾದನೆ ಮಾಡಲು ಸಾಕಷ್ಟು ಅನುಕೂಲತೆ ಇರೋದರಿಂದ ವಿಂಡ್ ಕಂಪನಿಗಳು ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಪವನ ವಿದ್ಯುಂತ್ ಯಂತ್ರಗಳು ಅಳವಡಿಸುತ್ತಿವೆ. ಈ ಮೂಲಕ ಭರ್ಜರಿ ವಿದ್ಯುತ್ ಉತ್ಪಾದನೆ ‌ಮಾಡುತ್ತಿವೆ. ಇದರಿಂದ ಕೆಲ ಸ್ಥಳೀಯ ರೈತರಿಗೆ ಅನುಕೂಲವಾದ್ರೆ, ಇನ್ನೂ ಕೆಲ ರೈತರಿಗೆ ಅನಾನಕೂಲವೂ ಆಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ