AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ವಿಮೆ ಹಣ ನೀಡಲು ನಿರಾಕರಿಸಿದ ವಿಮಾ ಕಂಪನಿಗೆ 2 ಲಕ್ಷಕ್ಕೂ ಅಧಿಕ ದಂಡ; ಇಲ್ಲಿದೆ ವಿವರ

ವಿಮಾ ಷರತ್ತಿನ ನಿಯಮದಂತೆ ವಾಹನ ದುರಸ್ತಿಗೆ ತಗುಲಿದ ವೆಚ್ಚವನ್ನು ಕೊಡುವುದು ವಿಮಾ ಕಂಪನಿಯವರ ಕರ್ತವ್ಯವಾಗಿದೆ. ಆ ರೀತಿ ವಿಮೆ ಹಣ ನೀಡಲು ವಿಮಾ ಕಂಪನಿಯವರು ನಿರಾಕರಿಸಿರುವುದರಿಂದ ಅವರ ನಡುವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದ್ದಾರೆ.

ಗದಗ: ವಿಮೆ ಹಣ ನೀಡಲು ನಿರಾಕರಿಸಿದ ವಿಮಾ ಕಂಪನಿಗೆ 2 ಲಕ್ಷಕ್ಕೂ ಅಧಿಕ ದಂಡ; ಇಲ್ಲಿದೆ ವಿವರ
ಗದಗ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Nov 08, 2023 | 7:23 PM

Share

ಗದಗ, ನ.08: ಜಿಲ್ಲೆಯ ನರಗುಂದದ ಸುನೀಲ ದೋಂಗಡಿ ಎನ್ನುವವರು ಬೊಲೆರೋ ಪಿಕ್‍ಅಪ್ ವಾಹನಕ್ಕೆ ಹುಬ್ಬಳ್ಳಿಯ ವಿದ್ಯಾನಗರದ HDFC ಇರ್ಗೋ ಜನರಲ್ ಇನ್ಸುರೆನ್ಸ್ ಕಂಪನಿಯಿಂದ ವಿಮೆ ಮಾಡಿಸಿದ್ದರು. ಆ ವಿಮೆ ಚಾಲ್ತಿಯಿರುವಾಗ 2019 ಸೆಪ್ಟೆಂಬರ್ 27 ರಂದು ವಾಹನ ನರಗುಂದದ ಹಿರೇಹಳ್ಳ ಹತ್ತಿರ ಅಪಘಾತಕ್ಕೀಡಾಗಿ ಜಖಂಗೊಂಡಿತ್ತು. ಆ ವಾಹನದ ದುರಸ್ತಿಗಾಗಿ  2,04,967 ರೂಪಾಯಿ ತಗಲುತ್ತದೆ ಎಂದು ಅಧಿಕೃತ ಸರ್ವಿಸ್ ಸೆಂಟರ್‌ನಿಂದ ಎಸ್ಟಿಮೇಷನ್ ಪಡೆದು, ಆ ಮೊತ್ತದ ಹಣ ಪರಿಹಾರವಾಗಿ ಕೊಡುವಂತೆ ವಿಮಾ ಕಂಪನಿಯವರಿಗೆ ಎಲ್ಲ ದಾಖಲೆಗಳ ಸಮೇತ ಕೋರಿಕೊಂಡಿದ್ದರು.

ಫಿಟ್‌ನೆಸ್ ಸರ್ಟಿಫಿಕೇಟ್ ಇಲ್ಲ ಎನ್ನುವ ಕಾರಣ ಕ್ಲೇಮ್ ಅರ್ಜಿ ನಿರಾಕರಣೆ

ಅಪಘಾತ ಕಾಲಕ್ಕೆ ಆ ವಾಹನಕ್ಕೆ ಫಿಟ್‌ನೆಸ್ ಸರ್ಟಿಫಿಕೇಟ್ ಇಲ್ಲ ಎನ್ನುವ ಕಾರಣ ನೀಡಿ ವಿಮಾ ಕಂಪನಿಯವರು ಸುನೀಲ್ ಅವರ ಕ್ಲೇಮ್ ತಿರಸ್ಕರಿಸಿದ್ದರು. ಅಪಘಾತವಾದ ನಂತರ ಆ ವಾಹನದ ಫಿಟ್‌ನೆಸ್ ಸರ್ಟಿಫಿಕೇಟ್​ನ್ನು ಸುನೀಲ್ ನವೀಕರಿಸಿ ಕ್ಲೇಮ್ ಅರ್ಜಿ ಸಲ್ಲಿಸಿದ್ದರೂ ವಿಮಾ ಕಂಪನಿಯವರು ಅವರ ಕ್ಲೇಮ‌್‌ನ್ನು ಒಪ್ಪಲಿಲ್ಲ. ಇದರಿಂದಾಗಿ ನೊಂದ ಸುನೀಲ್ ವಿಮಾ ಕಂಪನಿಯವರ ವಿರುದ್ದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ:ಸೇವಾ ನ್ಯೂನತೆ ಎಸಗಿದ ವಿಮಾ ಕಂಪನಿಗೆ ಬಡ್ಡಿ ಸಹಿತ 10 ಲಕ್ಷ ರೂ. ಪಾವತಿಸಲು ಉಡುಪಿ ಜಿಲ್ಲಾ ಗ್ರಾಹಕರ ನ್ಯಾಯಾಲಯ ಆದೇಶ

ಅಪಘಾತ ಕಾಲಕ್ಕೆ ಆ ವಾಹನಕ್ಕೆ ಅರ್ಹತಾ ಪತ್ರ ಇರಲಿಲ್ಲವಾದ್ದರಿಂದ ದೂರುದಾರ ಕ್ಲೇಮ್ ಪಡೆಯಲು ಅರ್ಹರಲ್ಲ ಎಂದು ಹೇಳಿ ಅವರ ದೂರನ್ನು ವಜಾ ಮಾಡುವಂತೆ ವಿಮಾ ಕಂಪನಿಯವರು ಆಕ್ಷೇಪಣೆ ಎತ್ತಿದ್ದರು. ಈ ದೂರಿನ ಬಗ್ಗೆ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ ಅವರು ವಾಹನದ ಮೇಲೆ ವಿಮೆ ಚಾಲ್ತಿಯಿದೆ. ಆ ವಾಹನ ಅಪಘಾತದಲ್ಲಿ ಜಖಂಗೊಂಡು ಹುಬ್ಬಳ್ಳಿಯ ಸುತಾರಿಯಾ ಅಟೋ ಸೆಂಟರ್‌ನಲ್ಲಿ ದುರಸ್ತಿಯಾಗಿದೆ. ರಿಪೇರಿ ಮಾಡಿಸಲು ಮಾಲಿಕ ಸುನೀಲ್ 2,04,967 ರೂ ಖರ್ಚು ಮಾಡಿದ್ದಾರೆ. ಅಪಘಾತವಾದ ನಂತರ ದೂರುದಾರ ಗದಗ ಆರ್.ಟಿ.ಓ. ಕಛೇರಿಯಿಂದ ಅರ್ಹತಾ ಪತ್ರ ನವೀಕರಿಸಿರುವುದರಿಂದ ಕರ್ನಾಟಕ ಹೈ ಕೋರ್ಟ್ ತೀರ್ಪಿನನ್ವಯ ಅಪಘಾತ ಕಾಲಕ್ಕೆ ಆ ವಾಹನಕ್ಕೆ ಅರ್ಹತಾ ಪತ್ರ ಇತ್ತು ಎಂದು ಪರಿಗಣಿಸಬೇಕಾಗುತ್ತದೆ.

ಕಾರಣ ವಿಮಾ ಷರತ್ತಿನ ನಿಯಮದಂತೆ ವಾಹನ ದುರಸ್ತಿಗೆ ತಗುಲಿದ ವೆಚ್ಚವನ್ನು ಕೊಡುವುದು ವಿಮಾ ಕಂಪನಿಯವರ ಕರ್ತವ್ಯವಾಗಿದೆ. ಆ ರೀತಿ ವಿಮೆ ಹಣ ನೀಡಲು ವಿಮಾ ಕಂಪನಿಯವರು ನಿರಾಕರಿಸಿರುವುದರಿಂದ ಅವರ ನಡುವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದ್ದಾರೆ. ವಾಹನದ ದುರಸ್ತಿ ವೆಚ್ಚ ಹಾಗೂ ಅದರ ಮೇಲೆ ಕ್ಲೇಮ್ ತಿರಸ್ಕರಿಸಿದ ದಿನಾಂಕದಿಂದ ಶೇ.8 ರಂತೆ ಬಡ್ಡಿ ಲೆಕ್ಕ ಹಾಕಿ ದೂರುದಾರನಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಣ ಸಂದಾಯ ಮಾಡುವಂತೆ ವಿಮಾ ಕಂಪನಿಗೆ ಆಯೋಗ ಆದೇಶಿಸಿದೆ. ಜೊತೆಗೆ ದೂರುದಾರರಿಗೆ ಆಗಿರುವ ಅನಾನುಕೂಲ ಹಾಗೂ ಮಾನಸಿಕ ತೊಂದರೆಗಾಗಿ 25,000 ರೂ ಪರಿಹಾರ ಹಾಗೂ ಪ್ರಕರಣದ ಖರ್ಚು ವೆಚ್ಚ 10 ಸಾವಿರ ರೂ. ನೀಡುವಂತೆ ವಿಮಾ ಕಂಪನಿಗೆ ಆಯೋಗ ನಿರ್ದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Wed, 8 November 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ