AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವೆಲ್ಲ ಅವೈಜ್ಞಾನಿಕ: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು. ಅವೆಲ್ಲ ಅವೈಜ್ಞಾನಿಕವಾದದ್ದು, ಅವರು ಶುದ್ಧವಾಗಿ ಕೈತೊಳೆಯಲ್ಲ ಎಂದು ನಗರದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವೆಲ್ಲ ಅವೈಜ್ಞಾನಿಕ: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ
ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 06, 2022 | 2:56 PM

Share

ಗದಗ: ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು (tirtha) ಕುಡಿಯಬಾರದು. ಅವೆಲ್ಲ ಅವೈಜ್ಞಾನಿಕವಾದದ್ದು (unscientific), ಅವರು ಶುದ್ಧವಾಗಿ ಕೈತೊಳೆಯಲ್ಲ ಎಂದು ನಗರದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ (Bt Lalitha Nayak) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಮ್ಮ ಮನೆಯಲ್ಲಿ ನೀರು ಇಲ್ವಾ? ಕೃಷ್ಣಯ್ಯ ಶೆಟ್ಟಿ ಗಂಗಾಜಲ ತಂದು ಕೊಟ್ಟರು, ಅಲ್ಲಿ ಹೆಣ ತೇಲುತ್ತೆ. ಅಲ್ಲಿ ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಮಂಗಳ ಮುಖಿಯರು ದೇವರು ಅಂತೆ? ಅದು ತಪ್ಪು. ಯಾರಾದರೂ ಒಂಟಿಯಾಗಿ ಸಿಕ್ಕರೆ ಎತ್ತಿಹಾಕಿಕೊಂಡು ಹೋಗಿ ಕೊಂದು ಬಿಡುತ್ತಾರೆ. ಅಷ್ಟೊಂದು ಹಿಂಸೆಯನ್ನು ನೀಡುತ್ತಾರೆ. ಸಾಕಷ್ಟು ಉದಾಹರಣೆ ಇವೆ. ಗಂಡಸರು ಕೂಡಾ ಆ ವೇಷವನ್ನು ಹಾಕಿಕೊಂಡು ಮಂಗಳಮುಖಿ ಅಂತಾರೆ. ಅವರನ್ನು ದುಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಲಲಿತಾ ನಾಯಕ್ ಹೇಳಿದರು.

ದೈವ ನರ್ತಕರ ಮಾಸಾಶನಕ್ಕೆ ಬಿ.ಟಿ.ಲಲಿತಾ ನಾಯಕ್ ವಿರೋಧ

ರಾಜ್ಯ ಸರ್ಕಾರ ದೈವ ನರ್ತಕರಿಗೆ ಮಾಸಾಶನ ನೀಡಬಾರದು. ಯಾರೋ ನೋವಿನಿಂದ ಕೂಗಿದವರನ್ನು ದೇವರು ಎಂದರು. ಈಗಿರುವ ಎಲ್ಲಾ ದೇವರು ಮನುಷ್ಯರೇ. ಇದೊಂದು ಸುಳ್ಳು ಸತ್ಯವನ್ನು ಜನರ ಮುಂದೆ ಇಡುವ ಕೆಲಸ ಮಾಡಬೇಕು. 2 ಸಾವಿರ ರೂ. ಮಾಸಾಶನ ನೀಡುವ ಬದಲು ಉದ್ಯೋಗ ನೀಡಿ. ಮಾನವ ಶ್ರಮವನ್ನು ಸರ್ಕಾರ ಬಳಸಿಕೊಳ್ಳಬೇಕು. ಅದನ್ನು ಬಿಟ್ಟು ದೇವರು ನಾನು ಅಂತಾ ಕುಣಿದಾಗ, ಅದಕ್ಕೆ ಎರಡು ಸಾವಿರ ಕೊಟ್ಟರೆ ಅದು ಸಾಲಲ್ಲ ಮುಂದೆ ಆತ ಮೌಡ್ಯವನ್ನು ಬಿತ್ತುತ್ತಾನೆ. ಸಾರ್ವಜನಿಕ ಹಣವನ್ನು ಪೋಲು ಮಾಡಬಾರದು. ಅರ್ಚಕರು ಹಾಗೂ ಮೌಲ್ವಿಗಳಿಗೂ ಮಾಸಾಶನ ನೀಡಬಾರದು. ದೇವಸ್ಥಾನದಲ್ಲಿ ನಮಗೆ ಜ್ಞಾನ ಸಿಗಲ್ಲ. ಗ್ರಂಥಾಲಯ, ಶಾಲೆಗಳಲ್ಲಿ ಮಾತ್ರ ನಮಗೆ ಜ್ಞಾನ ಸಿಗುವುದು ಎಂದು ಹೇಳಿದರು.

ಬಿ.ಟಿ.ಲಲಿತಾ ನಾಯಕ್ ಹೇಳಿಕೆಗೆ ಯು.ಟಿ ಖಾದರ್ ವಿರೋಧ

ಇನ್ನು ದೈವ ನರ್ತಕರಿಗೆ ಮಾಸಾಶನ ನೀಡಬಾರದು ಎಂಬ ಹೇಳಿಕೆಗೆ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಯು. ಟಿ ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಡಿರುವ ಅವರು, ಮಾನ್ಯ ಬಿ.ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ ಎಂದು ಖಾರವಾಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:43 pm, Sun, 6 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ