ರಾಜ್ಯದ ಈ ಮೂರು ದೇಗುಲಗಳು ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆ; ಸಚಿವ ಎಚ್.ಕೆ.ಪಾಟೀಲ್​ ಹೇಳಿದ್ದಿಷ್ಟು

ಈ ಜಾಗತಿಕ ಮನ್ನಣೆಗೆ ಶ್ರಮಿಸಿದ ಅಧಿಕಾರಿಗಳಿಗೆ, ಯುನೆಸ್ಕೋಗೆ ಹಾಗೂ ರಾಜ್ಯದ ಜನತೆಗೆ ಅಭಿನಂದನೆಗಳು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು.

ರಾಜ್ಯದ ಈ ಮೂರು ದೇಗುಲಗಳು ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆ; ಸಚಿವ ಎಚ್.ಕೆ.ಪಾಟೀಲ್​ ಹೇಳಿದ್ದಿಷ್ಟು
ಹೆಚ್​ಕೆ ಪಾಟೀಲ್​
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 19, 2023 | 8:11 PM

ಗದಗ, ಸೆ.19: ರಾಜ್ಯದ ಐತಿಹಾಸಿಕ ಮತ್ತು ಕಲೆ-ಸಂಸ್ಕೃತಿಗೆ ಪ್ರತೀಕವಾಗಿರುವ 12 ಮತ್ತು 15ನೇ ಶತಮಾನಗಳಲ್ಲಿ ನಿರ್ಮಾಣಗೊಂಡಿರುವ ಹಾಸನ ಜಿಲ್ಲೆಯ ಬೆಲೂರು, ಹಳೆಬೀಡು ಮತ್ತು ಮೈಸೂರು ಜಿಲ್ಲೆಯ ಸೋಮನಾಥಪುರ ದೇಗುಲಗಳಿಗೆ ಜಾಗತಿಕ ಮನ್ನಣೆ ದೊರೆತಿದ್ದು, ಯುನೆಸ್ಕೋ(Unesco)ಈ ಮೂರು ದೇಗುಲಗಳನ್ನು ವಿಶ್ವ ಪಾರಂಪರಿಕ ತಾಣ ಎಂದು ಘೋಷಣೆ ಮಾಡಿದೆ ಎಂದು ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ.ಪಾಟೀಲ್​(HK Patil) ಹೇಳಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ‘ಸಂಪದ್ಭರಿತ ಕರ್ನಾಟಕ ರಾಜ್ಯದ ಸಂಸ್ಕೃತಿ- ಪರಂಪರೆ ಹಿರಿತನಕ್ಕೆ ಮತ್ತು ರಾಜ್ಯ ಸರ್ಕಾರದ ಸತತ ಪರಿಶ್ರಮದ ಫಲವಾಗಿ ರಾಜ್ಯದ ಈ ಮೂರು ದೇಗುಲಗಳ ಕಲೆ ಮತ್ತು ಪರಂಪರೆಯನ್ನು ಯುನೆಸ್ಕೋ ಗುರುತಿಸಿದೆ. ಈ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯುನೆಸ್ಕೋ ಮನ್ನಣೆ ಸಹಕಾರಿ ಆಗಲಿದೆ ಎಂದರು.

ಜಾಗತಿಕ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವ ಬೆಳವಣಿಗೆಯಿಂದಾಗಿ ಈ ದೇಗುಲಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಸ್ಥಳೀಯ ಕರಕುಶಲ ಮತ್ತು ಗುಡಿ ಕೈಗಾರಿಕೆ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕುವ ಜೊತೆಗೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಅವಕಾಶ ಮಾಡಿಕೊಡಲಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವೂ ಸಹ ಈ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಹೆಚ್ಚಿನ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಮುಂದಡಿ ಇರಿಸಲಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಕರ್ನಾಟಕದ ಹೊಯ್ಸಳ ದೇವಾಲಯಗಳು, ಮೋದಿ ಸಂತಸ

ಸೋಮವಾರ ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿ ನಡೆದ ಯೂನೆಸ್ಕೋದ 45ನೇ ಸರ್ವ ಸದಸ್ಯರ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, 2014ರಲ್ಲಿ ಆಯ್ಕೆ ಪಟ್ಟಿಗೆ ಈ ದೇಗುಲಗಳನ್ನು ಸೇರ್ಪಡೆಗೊಳಿಸಲಾಗಿತ್ತು. 2018ರಲ್ಲಿ ಭಾರತೀಯ ಪುರಾತತ್ವ ಇಲಾಖೆಗೆ (ಎಎಸ್‍ಐ)ಗೆ ರಾಜ್ಯ ಸರ್ಕಾರವು ಈ ದೇಗುಲಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿತ್ತು. ಈ ಬೆಳವಣಿಗೆಗಳ ನಂತರ 2022ರಲ್ಲಿ ಅಂತರಾಷ್ಟ್ರೀಯ ಪುರಾತನ ಸ್ಮಾರಕ ಮತ್ತು ಪ್ರದೇಶಗಳ ಸಮಿತಿಯು ಇಲ್ಲಿಗೆ ಭೇಟಿ ನೀಡಿ, ಈ ದೇಗುಲಗಳ ಹಿರಿಮೆ ಬಗ್ಗೆ ಯುನೆಸ್ಕೋಗೆ ವರದಿ ನೀಡಿತ್ತು.

ಬೇಲೂರು, ಹಳೆಬೀಡು ಮತ್ತು ಸೋಮನಾಥಪುರ ದೇಗುಲಗಳ ಬಗ್ಗೆ ಸಲ್ಲಿಕೆಯಾಗಿದ್ದ ವರದಿಯನ್ನು ಆಧರಿಸಿ ಸೋಮವಾರ ನಡೆದ ಯೂನೆಸ್ಕೋ ಸಭೆಯಲ್ಲಿ ಭಾರತವೂ ಸೇರಿದಂತೆ 21 ದೇಶಗಳು ಈ ದೇಗುಲಗಳನ್ನು ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆ ಮಾಡಲು ಸರ್ವಾನುಮತದ ನಿರ್ಧಾರ ಕೈಗೊಂಡಿರುವುದು ಸಂತಸ ತಂದಿದೆ. ಬೇಲೂರು, ಹಳೆಬೀಡು, ಸೋಮನಾಥಪುರ ದೇಗುಲಗಳು ಯುನೆಸ್ಕೋ ಪಟ್ಟಿಗೆ ನಾಲ್ಕನೇ ತಾಣವಾಗಿ ಸೇರ್ಪಡೆಗೊಂಡಿವೆ. ಈಗಾಗಲೇ ರಾಜ್ಯದ ಪಶ್ಚಿಮಘಟ್ಟ ಪ್ರದೇಶ, ಹಂಪಿ, ಪಟ್ಟದಕಲ್ಲು ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಕರ್ನಾಟಕದ ಹೊಯ್ಸಳ ದೇವಾಲಯಗಳು, ಮೋದಿ ಸಂತಸ

ಕರುನಾಡಿನ ಅಂದಿನ ಕಲೆ- ಸಂಸ್ಕೃತಿಯ ಸಿರಿವಂತಿಕೆ ಮತ್ತು ಸರ್ಕಾರದ ಸತತ ಪರಿಶ್ರಮದ ಪರಿಣಾಮ 12 ಮತ್ತು 15ನೇ ಶತಮಾನದಲ್ಲಿ ಹೊಯ್ಸಳರ ವಿಷ್ಣುವರ್ಧನರ ಕಾಲದಲ್ಲಿ ನಿರ್ಮಾಣಗೊಂಡಿರುವ ಈ ಮೂರು ದೇಗುಲಗಳನ್ನು ಮೃದು ಕಲ್ಲಿನಲ್ಲಿ ನಿರ್ಮಾಣವಾಗಿದೆ. ಇದರ ಕೆತ್ತನೆ ಅಂದಿನ ಕಲೆ- ಸಂಸ್ಕೃತಿ ಮತ್ತು ಪರಂಪರೆಗೆ ಹಿಡಿದ ಕನ್ನಡಿಯಂತಿದೆ. ಇದೀಗ ಈ ಕಲೆ- ಪರಂಪರೆ ಜಾಗತಿಕ ಮಟ್ಟಕ್ಕೆ ತಲುಪಲಿದ್ದು, ಇದರಿಂದ ಈ ಮೂರೂ ದೇಗುಲಗಳು ಜಾಗತಿಕ ಪ್ರವಾಸಿ ತಾಣವಾಗಲಿದೆ. ಈ ಮೂರು ದೇಗುಲಗಳಿಗೆ ಯೂನೆಸ್ಕೋ ಸ್ಥಾನಮಾನ ದೊರತಿರುವ ಪರಿಣಾಮ ಜಾಗತಿಕ ಮಟ್ಟದ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಯೋಜನಾಬದ್ಧ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಲಿದೆ. ಈ ಬೆಳವಣಿಗೆಯಿಂದ ಸ್ಥಳೀಯರಿಗೂ ಹೆಚ್ಚಿನ ಅನುಕೂಲ ಆಗಲಿದೆ ಎಂದರು.

ಕನ್ನಡ ನಾಡಿನ ಕಲೆ- ಸಂಸ್ಕೃತಿ, ಪರಂಪರೆಯನ್ನು ನಾಡಿನಾದ್ಯಂತ ಬಿಂಬಿಸುವಲ್ಲಿ ಬೇಲೂರು, ಹಳೆಬೀಡು, ಸೋಮನಾಥಪುರ ದೇಗುಲಗಳ ಪಾತ್ರ ಪ್ರಮುಖವಾದುದು, ಈ ದೇಗುಲಗಳಿಗೆ ಈ ಹಿಂದೆಯೇ ಜಾಗತಿಕ ಮಟ್ಟದ ಹಿರಿಮೆ ಸಿಗಬೇಕಿತ್ತು. ತಡವಾಗಿಯಾದರೂ ಈಗ ಯೂನೆಸ್ಕೋ ಈ ದೇಗುಲಗಳ ಹಿರಿಮೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನ ನಡೆಸಿರುವುದು ಶ್ಲಾಘನೀಯ, ಇದಕ್ಕೆ ಕಾರಣರಾದ ಪ್ರವಾಸೋದ್ಯಮ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ಕಪಿಲ್ ಮೋಹನ್, ಪ್ರವಾಸೊದ್ಯಮ ಇಲಾಖೆ ನಿರ್ದೆಶಕರಾದ ರಾಮಪ್ರಸಾದ ಮನೋಹರ, ಪುರಾತತ್ವ ಇಲಾಖೆ ಆಯುಕ್ತರಾದ ದೇವರಾಜ ಇವರ ನೇತೃತ್ವದ ಅಧಿಕಾರಿಗಳ ಪರಿಶ್ರಮದ ಫಲವಾಗಿದೆ ಎಂದು ಹೇಳಿದರು.

ಇದನ್ನೂ ಓದಿ:World Heritage Day 2022: ಭಾರತದ 5 ಪ್ರಮುಖ ವಿಶ್ವ ಪಾರಂಪರಿಕ ತಾಣಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ

ಈ ಜಾಗತಿಕ ಮನ್ನಣೆಗೆ ಶ್ರಮಿಸಿದ ಅಧಿಕಾರಿಗಳಿಗೆ, ಯುನೆಸ್ಕೋಗೆ ಹಾಗೂ ರಾಜ್ಯದ ಜನತೆಗೆ ಅಭಿನಂದನೆಗಳು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ