AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು ಸುವ್ಯವಸ್ಥೆಗೆ ಥರ್ಡ ಐ ಯೋಜನೆ ಶೀಘ್ರ ಜಾರಿ: ಸಚಿವ ಎಚ್​ಕೆ ಪಾಟೀಲ್

ಕಾನೂನು ವ್ಯವಸ್ಥೆ ಅತ್ಯಂತ ಸುವ್ಯವಸ್ಥಿತವಾಗಿ ಜಾರಿಗೊಳಿಸುವ ಉದ್ದೇಶದಿಂದ ಥರ್ಡ ಐ ಎಂಬ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್​ ಹೇಳಿದರು. ಥರ್ಡ ಐ ಯೋಜನೆ ಬೆಂಗಳೂರು ಹೊರತುಪಡಿಸಿದರೆ ಗದಗನಲ್ಲಿಯೇ ಆರಂಭಿಸುತ್ತಿರುವುದು ವಿಶೇಷ.

ಕಾನೂನು ಸುವ್ಯವಸ್ಥೆಗೆ ಥರ್ಡ ಐ ಯೋಜನೆ ಶೀಘ್ರ ಜಾರಿ: ಸಚಿವ ಎಚ್​ಕೆ ಪಾಟೀಲ್
ಸೆಗ್‌ ವೇ ಇಲೆಕ್ಟ್ರಿಕ್ ಬೈಕ್‌ಗಳಿಗೆ ಸಚಿವ ಹೆಚ್​ಕೆ ಪಾಟೀಲ್​ ಪ್ರಾಯೋಗಿಕ ಚಾಲನೆ ನೀಡಿದರು.
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jul 01, 2023 | 4:33 PM

Share

ಗದಗ: ನಗರದಲ್ಲಿ ಕಾನೂನು ವ್ಯವಸ್ಥೆ ಅತ್ಯಂತ ಸುವ್ಯವಸ್ಥಿತವಾಗಿ ಜಾರಿಗೊಳಿಸುವ ಉದ್ದೇಶದಿಂದ ಥರ್ಡ ಐ ಎಂಬ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ್ (HK Patil)​ ಹೇಳಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸೆಗ್‌ವೇ ಇಲೆಕ್ಟ್ರಿಕ್ ಬೈಕ್‌ಗಳ ಪ್ರಾಯೋಗಿಕ ಚಾಲನೆ ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್​ ಥರ್ಡ ಐ ಯೋಜನೆಯಲ್ಲಿ ಸೆಗ್ ವೇ ಎಲೆಕ್ಟ್ರಿಕ್ ಬೈಕ್‌ಗಳು ಸಹ ಪೊಲೀಸ ಇಲಾಖೆಗೆ ಸಹಕಾರಿಯಾಗಿವೆ. ಕಲೆ, ಸಂಸ್ಕೃತಿ, ಇತಿಹಾಸ, ಪರಂಪರೆಗೆ ಹೆಸರುವಾಸಿಯಾದ ನಗರ ಗದಗ ಪ್ರವಾಸಿಗರನ್ನು ಕೈ ಬೀಸಿ ಕರೆಯುವ ನೆಲ. ಈ ಸ್ಥಳದಲ್ಲಿ ಕಾನೂನುವ್ಯವಸ್ಥೆ ಉನ್ನತಮಟ್ಟದಲ್ಲಿ ಇರಬೇಕೆಂಬ ಸದುದ್ದೇಶದಿಂದ ಹಾಗೂ ಜನಸಾಮಾನ್ಯರಿಗೆ ಅನುಕೂಲ ಹಾಗೂ ಸಂರಕ್ಷಣೆಗಾಗಿ ಸಂಚಾರಿ ನಿಯಮಗಳ ಕಟ್ಟುನಿಟ್ಟಿನ ಪಾಲನೆಗಾಗಿ ಥರ್ಡ ಐ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಡಾ ಪಂಡಿತ ಪುಟ್ಟರಾಜ ಗವಾಯಿ ಸ್ಮಾರಕ ಭವನ 6-9 ತಿಂಗಳಲ್ಲಿ ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಚಿವ ಎಚ್​ಕೆ ಪಾಟೀಲ್

ಶಾಂತಿಯುತ, ಸುರಕ್ಷಿತ ಗದಗಗಾಗಿ ಥರ್ಡ ಐ ಸ್ಮಾರ್ಟ ಪೊಲೀಸ್ ಫಾರ್ ಸೇಫ್ ಗದಗ ಬೆಟಗೇರಿ ಯೋಜನೆಯ ಕಾಮಗಾರಿ ಈಗಾಗಲೇ ಆರಂಭಿಸಲಾಗಿದೆ. ಹಂತ ಹಂತವಾಗಿ ಈ ಯೋಜನೆಯನ್ನು ಪೂರ್ಣಗೊಳಿಸಿ ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಪೊಲೀಸ್ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಕಮಾಂಡ್ ಸೆಂಟರ್, ಟ್ರಾಫಿಕ್ ಮ್ಯಾನ್ಭೆಜ್‌ಮೆಂಟ್, ಕ್ರೈಂ ಮುಂಜಾಗ್ರತೆ ಕ್ರಮವಹಿಸಿದೆ.

ಗದಗ ಬೆಟಗೇರಿ ನಗರದ ಪ್ರಮುಖ 44 ಸ್ಥಳಗಳಲ್ಲಿ ಬುಲೆಟ್ ಕ್ಯಾಮರಾ ಅಳವಡಿಸಲಾಗಿದೆ. 40 ಕಿ.ಮೀ ಆಪ್ಟಿಕಲ್ ಫೈಬರ್ ಅಳವಡಿಸಿದ್ದು, 15 ಎಎಂಪಿಆರ್ ಸಿಸಿ ಟಿವಿ ಜೋಡಿಸಲಾಗಿದೆ. ಇದರಿಂದ ಒಟ್ಟಾರೆ 45 ಸ್ಥಳಗಳನ್ನು ಕುಳಿತಲ್ಲಿಯೇ ನಿಗಾವಹಿಸಲಾಗುತ್ತಿದೆ. ಗದಗ ಬೆಟಗೇರಿ ನಗರಕ್ಕೆ ಬರುವ ಪ್ರತಿ ವಾಹನದ ಚಲನವಲನಗಳನ್ನು, ಮಾರ್ಗಗಳನ್ನು ವೀಕ್ಷಣೆ ಮಾಡಲು ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು ಇವುಗಳು 360 ಡಿಗ್ರಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಇನ್ನೂ ಸೂಕ್ಷ್ಮ, ಅತಿಸೂಕ್ಷ್ಮ ಸ್ಥಳಗಳನ್ನು ಗುರುತಿಸಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಇದನ್ನೂ ಓದಿ: ಗದಗ: ವಿಷಕಾರಿ ಹಾವು ಕಚ್ಚಿ ಆಸ್ಪತ್ರೆಯಲ್ಲಿ ಹೋರಾಟ; ಸಾವನ್ನಪ್ಪಿದ ಎನ್ನುವಾಗಲೇ ಬದುಕಿಸಿದ ಗರುಡರೇಖೆ!

ನಗರೋತ್ತಾನ, ಶಾಸಕರ ಅನುದಾನ, ಪ್ರವಾಸೋದ್ಯಮ ಇಲಾಖೆ, ನಗರಸಭೆಯಿಂದ ಅಗತ್ಯದ ಹಣಕಾಸು ಒದಗಿಸಲಾಗುವುದು. ಈಗಾಗಲೇ ಈ ಯೋಜನೆಗೆ 1.50 ಕೋಟಿ ವ್ಯಯಿಸಲಾಗಿದೆ. ಹೆಚ್ಚುವರಿಯಾಗಿ ಅಗತ್ಯವಿರುವ 1.50 ಕೋಟಿ ರೂ. ಅನುದಾನವನ್ನು ಶೀಘ್ರವೇ ನೀಡಿ ಕಾಮಗಾರಿ ಪೂರ್ಣ ಗೊಳಿಸಲಾಗುವುದು. ಇದರಿಂದ ನಗರದಲ್ಲಿ ಶಾಂತಿ ಸುವ್ಯವಸ್ಥೆ, ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಎಂದು ಹೇಳಿದರು.

ಥರ್ಡ ಐ ಯೋಜನೆಯನ್ನು ಬೆಂಗಳೂರು ಹೊರತುಪಡಿಸಿದರೆ ಗದಗನಲ್ಲಿಯೇ ಆರಂಭಿಸುತ್ತಿರುವುದು ವಿಶೇಷ. ಈ ಯೋಜನೆಯ ಅನುಷ್ಟಾನಗೊಳಿಸುವಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಅವರ ಶ್ರಮ ಹಾಗೂ ಸಹಕಾರ ನಿರಂತರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?