Gadag: 2 ಬೈಕ್​ಗೆ ಕಾರು ಡಿಕ್ಕಿ: ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸಾವು

ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವಂತಹ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ. 

Gadag: 2 ಬೈಕ್​ಗೆ ಕಾರು ಡಿಕ್ಕಿ: ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸಾವು
ಸಾಂದರ್ಭಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:May 15, 2023 | 3:59 PM

ಗದಗ: 2 ಬೈಕ್​ಗೆ ಕಾರು ಡಿಕ್ಕಿ (accident) ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವಂತಹ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ. ಶಿಂಗಟಾರಯನಕೇರಿ ತಾಂಡಾ ನಿವಾಸಿ ಶಿವಪ್ಪ ನಾಯ್ಕ್(50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾಣಿ(33) ಮತ್ತು ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್(31) ಮೃತರು. ಅಪಘಾತ ಸ್ಥಳದಲ್ಲಿ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಬೈಕ್​ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದ್ದು, ಚಾಲಕ ಪರಾರಿ ಆಗಿದ್ದಾನೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ತುಳಿದು ಯುವಕ ಸಾವು

ಕೋಲಾರ: ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಮಾಗೊಂದಿ ಗ್ರಾಮದಲ್ಲಿ ನಡೆದಿದೆ. ಮಾಗೊಂದಿ ಗ್ರಾಮದ ಸುದರ್ಶನ್ (23) ಮೃತ ಯುವಕ. ತಮ್ಮದೆ ತೋಟದಲ್ಲಿ ಮೋಟರ್​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ವಿದ್ಯುತ್ ಸ್ಪರ್ಶಿಸಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಯುವಕ ಕೊನೆಯುಸಿರೆಳೆದಿದ್ದಾನೆ. ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಗಂಡನಿಂದ ದೂರು, ಉದ್ಯಮಿ ಪರಾರಿ

ಬಿಜೆಪಿ ಮುಖಂಡನ ಮೇಲೆ ಹಲ್ಲೆ

ಕಾರವಾರ: ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸುತ್ತಿದ್ದಂತೆ, ಕೇಸರಿ ಧ್ವಜದ ಪಕ್ಕ ಮುಸ್ಲಿಂ ಧ್ವಜ ಹಾರಾಟ ನಡೆಸಲಾಯಿತು. ಇದೀಗ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ. ಉತ್ತರಕನ್ನಡ‌ ಜಿಲ್ಲೆಯ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುತ್ತಿದ್ದಂತೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: ಇತ್ತಂಡಗಳ ನಡುವೆ ಗಲಾಟೆ: ಮಣಿಪಾಲದ ಹೆಸರಾಂತ ಬಾರ್​ನಲ್ಲಿ ಮಾರಾಮಾರಿ

ಭೀಕರ ರಸ್ತೆ ಅಪಘಾತ, 2 ಬಸ್​ಗಳ ನಡುವೆ ಡಿಕ್ಕಿ: ಇಬ್ಬರು ದುರ್ಮರಣ

ಶಿವಮೊಗ್ಗ: ಎರಡು ಬಸ್​ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿಯ ಕುಮಧ್ವತಿ ಸೇತುವೆ‌ ಮೇಲೆ ನಡೆದಿತ್ತು. ಹೊಸದುರ್ಗ ನಿವಾಸಿ ತಿಪ್ಪೇಸ್ವಾಮಿ, ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದರು. 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಪಘಾತ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ಬಸ್ ಎಲ್ಲಿಂದ ಎಲ್ಲಿಗೆ ಹೊರಟಿತ್ತು ಎಂಬ ಮಾಹಿತಿ ದೊರೆತಿಲ್ಲ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಆ್ಯಂಬ್ಯುಲೆನ್ಸ್​ಗಳು ಮತ್ತು ಅಗ್ನಿಶಾಮಕ ದಳ ದಾವಿಸಿದ್ದರು. ಎರಡು ಬಸ್​ಗಳು ಶಿಕಾರಿಪುರದ ಲೈನ್ ಬಸ್​ಗಳು ಎಂದು ತಿಳಿದು ಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:39 pm, Mon, 15 May 23

ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​