AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಕ್ಯಾಂಟರ್ ಪಲ್ಟಿ, ಮೂವರು ದುರ್ಮರಣ, ಇನ್ನೂ ಮೂವರಿಗೆ ಗಾಯ

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಕ್ಯಾಂಟರ್ ವಾಹನ​ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದು, ಇನ್ನೂ ಮೂವರಿಗೆ ಗಾಯಗಳಾಗಿವೆ. ಕುಂದಗೋಳದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿ ಹೋಗುತ್ತಿದ್ದಾಗ ಈ ದುರ್ಘಟನ ಸಂಭವಿಸಿದ್ದು, ಮೃತರು ಧಾರವಾಡ ಮೂಲದವರು ಎಂದು ತಿಳಿದುಬಂದಿದೆ.

ಗದಗ: ಕ್ಯಾಂಟರ್ ಪಲ್ಟಿ, ಮೂವರು ದುರ್ಮರಣ, ಇನ್ನೂ ಮೂವರಿಗೆ ಗಾಯ
ಕ್ಯಾಂಟರ್ ಪಲ್ಟಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 06, 2024 | 5:23 PM

ಗದಗ, (ಮಾರ್ಚ್ 06): ಕ್ಯಾಂಟರ್ ಪಲ್ಟಿಯಾಗಿ ( canter overturned) ಮೂವರು ಸಾವನ್ನಪ್ಪಿರುವ ಘಟನೆ ಗದಗ (Gadag) ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನವೀನ್ ಕುಂಬಾರ್ 23 ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ (22) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದವರು ಎಂದು ತಿಳಿದುಬಂದಿದೆ. ಕುಂದಗೋಳದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿ ಹೋಗುತ್ತಿದ್ದಾಗ ಈ ದುರ್ಘಟನ ನಡೆದಿದ್ದು, ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ.

ಕಾರು ಪಲ್ಟಿಯಾಗಿ ವಕೀಲ ಮುಬಾರಕ್ ಪಾಷಾ ಸಾವು

ಕೋಲಾರ: ಶ್ರೀನಿವಾಸಪುರ ತಾಲೂಕಿನ ಅವಗಾನಪಲ್ಲಿ ಬಳಿ ತಿರುವಿನಲ್ಲಿ ಚರಂಡಿಗೆ ಕಾರು ಪಲ್ಟಿಯಾಗಿ ವಕೀಲರೊಬ್ಬರು ಕೊನೆಯುಸಿರೆಳೆದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದ ನಿವಾಸಿಯಾಗಿದ್ದ ವಕೀಲ ಮುಬಾರಕ್ ಪಾಷಾ(40) ಮೃತ ರ್ದುದೈವಿ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಕಾರು ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾದರೂ, ಚಿಕಿತ್ಸೆ ಫಲಿಸಿದೇ ಸಾವನ್ನಪ್ಪಿದ್ದಾರೆ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಟಿಪ್ಪರ್‌ ಚಕ್ರದಡಿ ಸಿಲುಕಿ 4 ವರ್ಷದ ಮಗು ಸಾವು

ಚಿಕ್ಕೋಡಿ: ನಾಲ್ಕು ವರ್ಷದ ಪುಟ್ಟ ಮಗುವೊಂದು (Four year old Child) ಟಿಪ್ಪರ್ ವಾಹನದಡಿ (Tipper accident) ಸಿಲುಕಿ ದಾರುಣವಾಗಿ ಪ್ರಾಣ ಕಳೆದುಕೊಂಡ (Child death) ಘಟನೆ ಬೆಳಗಾವಿ ಜಿಲ್ಲೆಯ (Belagavi news) ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ. ಅದ್ವೈತ್ ಅಕ್ಷಯ್ ನಾಶಿಪುಡಿ (4) ಚಕ್ರದಡಿ ಸಿಲುಕಿ ಮೃತಪಟ್ಟ ಪುಟ್ಟ ಮಗು. ರಸ್ತೆ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಒಮ್ಮೆಗೇ ವಾಹನದ ಹಿಂಬದಿ ಚಕ್ರಕ್ಕೆ ಸಿಲುಕಿ ಮಗು ಮೃತಪಟ್ಟಿದೆ. ಇಸ್ಲಾಂಪುರ ಗ್ರಾಮದ ಶಾಬಂದರ್ ವಂಟಮೂರಿ ರಸ್ತೆಯಲ್ಲಿ ವೇಗವಾಗಿ ಬಂದ ಟಿಪ್ಪರ್‌ ಮಗುವನ್ನು ಬಲಿ ಪಡೆದುಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್