ಕರ್ನಾಟಕದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಮತ್ತೆ ಮುನ್ನೆಲೆಗೆ, ಈ ಬಗ್ಗೆ ಧ್ವನಿ ಎತ್ತಿದ ಸ್ವಾಮೀಜಿ

ಕರ್ನಾಟಕದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಮತ್ತೆ ಮುನ್ನೆಲೆಗೆ ಬಂದಿದೆ. ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಅವರು ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಧ್ವನಿ ಎತ್ತಿದ್ದು, ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಕೇಳಿಕೊಳ್ಳುತ್ತೇವೆ ಎಂದಿದ್ದಾರೆ.

ಕರ್ನಾಟಕದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ಮತ್ತೆ ಮುನ್ನೆಲೆಗೆ, ಈ ಬಗ್ಗೆ ಧ್ವನಿ ಎತ್ತಿದ ಸ್ವಾಮೀಜಿ
ಡಾ.ತೋಂಟದ ಸಿದ್ದರಾಮ ಸ್ವಾಮೀಜಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Aug 14, 2023 | 12:10 PM

ಗದಗ, (ಆಗಸ್ಟ್ 14): ಕರ್ನಾಟಕದಲ್ಲಿ ಪ್ರತ್ಯೇಕ ಲಿಂಗಾಯತ (Lingayat) ಧರ್ಮ ಮತ್ತೆ ಮುನ್ನೆಲೆಗೆ ಬಂದಿದೆ. ಮತ್ತೆ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಕೇಳಿಕೊಳ್ಳುತ್ತೇವೆ ಎಂದು ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ. ಗದಗನಲ್ಲಿ ಇಂದು(ಆಗಸ್ಟ್ 14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂಬ ವರದಿ ಯಾವ ಕಾರಣಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ತಿರಸ್ಕಾರಗೊಂಡಿದೆ ಎಂದು ಗಮನಿಸಿ ಅದಕ್ಕೆ ಸಂಬಂಧಿಸಿ ಪಡೆದು ದಾಖಲೆ ಒದಗಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಲಿಂಗಾಯತ ಧರ್ಮ ಒಂದು ಸ್ವತಂತ್ರ ಧರ್ಮ ಎನ್ನುವ ವಿಷಯ ಇಟ್ಟಿಕೊಂಡು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೆವು. ಮುಖ್ಯಮಂತ್ರಿಗಳು(ಸಿದ್ದರಾಮಯ್ಯ) ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದರು. ಸಮಿತಿಯ ಮೂಲಕ ವರದಿ ಪಡೆದುಕೊಂಡು ಲಿಂಗಾಯತ ಧರ್ಮ ಒಂದು ಸ್ವತಂತ್ರ ಧರ್ಮ . 12 ನೇ ಶತಮಾನದಲ್ಲಿ ಮಹಾನ್ ಮಾನವತವಾದಿ ಬಸವಣ್ಣನವರು ಸ್ಥಾಪಿಸಿದ ಧರ್ಮವೆಂದು ಮನಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಆದ್ರೆ, ಕೇಂದ್ರ ಸರ್ಕಾರದವರು ಆ ವರದಿಯನ್ನ ವಿಸ್ತೃತವಾಗಿ ಅಧ್ಯಯನ ಮಾಡಲಾರದೆ ಯಾವುದೊಂದು ಪೂರ್ವಾಗ್ರಹಕ್ಕೆ ಒಳಗಾಗಿ ಇದನ್ನು ಮಾನ್ಯ ಮಾಡಲು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟದಾಯಕವಾಗಿದೆ ಎಂಬ ಮಾತನ್ನು ಹೇಳಿ ಮರಳಿಸಿದ್ದಾರೆಂದು ಕೇಳಿದ್ದೇವೆ. ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂಬ ವರದಿ ಯಾವ ಕಾರಣಕ್ಕೆ ತಿರಸ್ಕಾರಗೊಂಡಿದೆ ಎಂದು ಗಮನಿಸಿ ಅದಕ್ಕೆ ಸಂಬಂಧಿಸಿ ಪಡೆದು ದಾಖಲೆ ಒದಗಿಸುತ್ತೇವೆ ಎಂದರು.

ಇದನ್ನೂ ಓದಿ: ಲಿಂಗಾಯತ ವೇದಿಕೆ ಎನ್ನುವುದು ಒಂದು ಕಾಲ್ಪನಿಕ ಸಂಘಟನೆ: ಸಿಎಂ ಬೊಮ್ಮಾಯಿ

ಮತ್ತೆ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಕೇಳಿಕೊಳ್ಳುತ್ತೇವೆ. ಸಿದ್ದರಾಮಯ್ಯ ನವರು ಬದ್ಧತೆ ಹೆಸರಾದವರು. ಲಿಂಗಾಯತ ಧರ್ಮ ಸ್ವತಂತ್ರ ಎನ್ನುವುದನ್ನ ಮನಗಂಡು ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ ಅವರ ವರದಿಯನ್ನ ವಿಸ್ತೃತವಾಗಿ ಓದಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ನಂತರ ಕೆಲವು ವ್ಯಕ್ತಿಗಳು ಅದರಿಂದ ನಮಗೆ ಚುನಾವಣೆಯಲ್ಲಿ ಹಿನ್ನಡೆ ಆಯಿತು ಎಂಬ ಗುಮಾನಿ ಎಬ್ಬಿಸಿರುವುದನ್ನು ನಾವು ಗಮನಿಸಿದೇವೆ. ವಾಸ್ತವವಾಗಿ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ನೀಡಬೇಕು ಎಂದು ಶಿಫಾರಸು ಮಾಡಿದಕ್ಕೆ ಚುನಾವಣೆಯಲ್ಲಿ ಹಿನ್ನಡೆ ಆಗಲಿಲ್ಲ. ಯಾವುದೇ ಒಂದು ಚುನಾವಣೆಯಲ್ಲಿ ಆಡಳಿತಾರೂಢದ ಪಕ್ಷದ ವಿರೋಧ ಅಲೇ ಇರುತ್ತದೆ. ಈ ಹಿನ್ನಲೆಯಲ್ಲಿ ಆ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ತಿಳಿಸಿದರು.

ಅದೇ ಮಾತನ್ನು ಈಗ ಬಿಜೆಪಿ ಸರ್ಕಾರದ ಚುನಾವಣೆಯಲ್ಲಿ ಹಿನ್ನಡೆ ಅನುಭಿಸಿದಕ್ಕೆ ಲಿಂಗಾಯತ ಸ್ವಧರ್ಮ ಮಾನ್ಯತೆ ಮಾಡಲಿಲ್ಲ ಎನ್ನುವುದಕ್ಕೆ ಹಿನ್ನಡೆ ಆಯಿತು ಎನ್ನುವುದು ತಪ್ಪಾಗುತ್ತದೆ. ಯಾಕೆಂದರೆ ಒಂದು ಸಂದರ್ಭದಲ್ಲಿ ಒಂದೊಂದು ವಿಷಯಗಳು ಬಹು ಮುಖ್ಯವಾಗಿ ಚರ್ಚೆ ಇರುತ್ತದೆ. ಸಿದ್ದರಾಮಯ್ಯನವರಿಗೆ ಸ್ಪಷ್ಟವಾಗಿ ಗೊತ್ತಿದೆ. ಆದರೂ ಎಂತಹ ಸಂದರ್ಭದಲ್ಲೂ ಸಹ ಈ ಕಾರಣಕ್ಕಾಗಿ ಹಿನ್ನಡೆ ಆಗಿತ್ತು ಎಂದು ಎಲ್ಲಿಯೂ ಸಿದ್ದರಾಮಯ್ಯನವರು ಹೇಳಿಕೊಂಡಿಲ್ಲ ಎಂದರು ಹೇಳಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:04 pm, Mon, 14 August 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!