AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಂಟದಾರ್ಯ ಮಠ v/s ಶಿರಹಟ್ಟಿ ಫಕೀರೇಶ್ವರ ಮಠ; ಸಿದ್ದಲಿಂಗ ಸ್ವಾಮೀಜಿ ಜಯಂತಿಯಂದು ಕರಾಳ ದಿನ ಆಚರಿಸುವ ಎಚ್ಚರಿಕೆ ಕೊಟ್ಟ ಫಕೀರ ದಿಂಗಾಲೇಶ್ವರ ಶ್ರೀ

ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿಯನ್ನ ಭಾವೈಕ್ಯತಾ ದಿನವನ್ನಾಗಿ ಆಚರಿಸುತ್ತಿರುವುದಕ್ಕೆ ಶುರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಭಾವೈಕ್ಯತಾ ದಿನವನ್ನು ಆಚರಿಸಿದರೆ ನಾವು ಕರಾಳ ದಿನವನ್ನು ಆಚರಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ತೋಂಟದಾರ್ಯ ಮಠ v/s ಶಿರಹಟ್ಟಿ ಫಕೀರೇಶ್ವರ ಮಠ; ಸಿದ್ದಲಿಂಗ ಸ್ವಾಮೀಜಿ ಜಯಂತಿಯಂದು ಕರಾಳ ದಿನ ಆಚರಿಸುವ ಎಚ್ಚರಿಕೆ ಕೊಟ್ಟ ಫಕೀರ ದಿಂಗಾಲೇಶ್ವರ ಶ್ರೀ
ಫಕೀರ ದಿಂಗಾಲೇಶ್ವರ ಶ್ರೀಗಳು
TV9 Web
| Edited By: |

Updated on:Feb 19, 2024 | 2:21 PM

Share

ಗದಗ, ಫೆ.19: ಗದಗ ಜಿಲ್ಲೆಯ ಎರಡು ಪ್ರಮುಖ ಮಠಗಳ ನಡುವೆ ಸಂಘರ್ಷ ಉಂಟಾಗಿದೆ. ಗದಗ ತೋಂಟದಾರ್ಯ ಮಠ (Tontadarya Matha) ಹಾಗೂ ಶಿರಹಟ್ಟಿ ಫಕೀರೇಶ್ವರ ಮಠದ (Shirahatti Fakkireshwar Mutt) ನಡುವೆ ಸಂಘರ್ಷ ಉಂಟಾಗಿದ್ದು ಒಂದು ಮಠದ ಆಚರಣೆ ವಿರುದ್ಧ ಮತ್ತೊಂದು ಮಠ ವಿರೋಧ ವ್ಯಕ್ತಪಡಿಸಿದೆ. ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿಯನ್ನ ಭಾವೈಕ್ಯತಾ ದಿನವನ್ನಾಗಿ ಆಚರಿಸುತ್ತಿರುವುದಕ್ಕೆ ಶುರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಗದಗದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀಗಳು, ಭಾವೈಕ್ಯತಾ ದಿನ, ಭಾವೈಕ್ಯತಾ ಯಾತ್ರೆ ಪದ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 21ನೇ ತಾರೀಖು ಸಿದ್ದಲಿಂಗ ಸ್ವಾಮೀಜಿ 75ನೇ ಜಯಂತಿಯನ್ನು ಭಾವೈಕ್ಯತಾ ದಿನವನ್ನಾಗಿ ಆಚರಣೆ ಮಾಡಲು ತಯಾರಿ ನಡೆದಿದ್ದು ಭಾವೈಕ್ಯತಾ ದಿನ ಆಚರಿಸಿದರೆ ಶಿರಹಟ್ಟಿ ಮಠದ ಭಕ್ತರು ಕರಾಳ ದಿನ ಆಚರಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕಾದಂಬರಿಕಾರ, ಭಾಷಾತಜ್ಞ, ಸಾಹಿತಿ ಕೆಟಿ ಗಟ್ಟಿ ನಿಧನ

ಫೆ.21ರಂದು ನಮ್ಮ ಮಠಕ್ಕೆ, ಭಕ್ತರ ಪಾಲಿಗೆ ಕರಾಳ ದಿನ ಎಂದು ಗದಗ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಫಕೀರ ದಿಂಗಾಲೇಶ್ವರ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ. ಭಾವೈಕ್ಯತೆಯ ಪರಂಪರೆ ಶಿರಹಟ್ಟಿಯ ಫಕೀರೇಶ್ವರ ಮಠದ್ದಾಗಿದೆ. ಲಿಂಗೈಕ್ಯ ಡಾ. ಸಿದ್ದಲಿಂಗ ಸ್ವಾಮೀಜಿಯವರಿಗೆ ಭಾವೈಕ್ಯತೆಯ ಹರಿಕಾರ ಅನ್ವಯ ಆಗೋದಿಲ್ಲ. ಹೀಗಾಗಿ ಭಾವೈಕ್ಯತಾ ಹರಿಕಾರ ಎನ್ನುವ ಪದವನ್ನು ಬಳಕೆ ಮಾಡಬಾರದು. ಈಗೀನ ತೋಂಟದಾರ್ಯ ಮಠದ ಶ್ರೀಗಳಾದ ಸಿದ್ದರಾಮ ಸ್ವಾಮೀಜಿ ಮನವಿ ಮಾಡಿದ್ದಾರೆ. ಶಿರಹಟ್ಟಿ ಫಕೀರೇಶ್ವರ ಮಠ ಹಿಂದೂ- ಮುಸ್ಲಿಂ ಭಾವ್ಯಕ್ಯತೆ ಮಠ. ತೋಂಟದಾರ್ಯ ಮಠ ವಿರಕ್ತಮಠ, ಮಠದ ಸಂಪ್ರದಾಯ ಹೊಂದಿದೆ. ಫಕೀರೇಶ್ವರ ಮಠದ ಭಾವೈಕ್ಯತೆಯ ಸಂಪ್ರದಾಯ. ಫಕೀರೇಶ್ವರ ಮಠ ಹಿಂದೂ ಮುಸ್ಲಿಂ ಎರಡೂ ಸಂಪ್ರದಾಯ ಹೊಂದಿರೋ ಮಠ. ಹೀಗಾಗಿ ಭಾವೈಕ್ಯತಾ ದಿನ ಆಚರಣೆ ನಮ್ಮ ವಿರೋಧ ಇದೆ. ನಮ್ಮ ಮನವಿಗೆ ಸ್ಪಂದಿಸದಿದ್ದರೆ ತೋಂಟದಾರ್ಯ ಮಠದ ಬೀದಿಯಲ್ಲಿ ಬೃಹತ್ ಹೋರಾಟ ಮಾಡುತ್ತೇವೆ.

ಸಿಎಂ ಸಿದ್ದರಾಮಯ್ಯ, ಗೃಹ ಸಚಿವರು, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ‌ಯಿಂದ ಭಾವೈಕ್ಯತಾ ದಿನ ಘೋಷಣೆಯಾಗಿತ್ತು. ಆಗ ಹೋರಾಟದ ಫಲವಾಗಿ ಆಗಿನ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ಸುಮ್ಮನಾಗಿದ್ದರು. ಆದರೆ ಈಗ ಶ್ರೀಮಠದ ಆಮಂತ್ರಣ ಪತ್ರಿಕೆಯಲ್ಲಿ ಭಾವೈಕ್ಯತಾ ದಿನ ಪ್ರಸ್ತಾಪವಾಗಿದೆ ಎಂದು ಆಮಂತ್ರಣ ಪತ್ರಿಕೆ ಹಿಡಿದು ಮಾಧ್ಯಮಗೋಷ್ಠಿ‌ ನಡೆಸಿದ ಫಕೀರ ದಿಂಗಾಲೇಶ್ವರ ಶ್ರೀ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:19 pm, Mon, 19 February 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್