ತುಂಗಭದ್ರಾ ನೀರು ಹಸಿರು ಬಣ್ಣಕ್ಕೆ ತಿರುಗಿದ್ಯಾಕೆ? ಜಾಲ ಹಿಡಿದು ಹೊರಟ ಜಿಲ್ಲಾಡಳಿತ

ತುಂಗಭದ್ರಾ ನದಿಯು ಗದಗ ಸೇರಿದಂತೆ ಆರು ಜಿಲ್ಲೆಗಳ ಜೀವನದಿ. ಆದರೆ ಇತ್ತೀಚೆಗೆ ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು, ವಿಜಯನಗರ ಸಕ್ಕರೆ ಕಾರ್ಖಾನೆಯ ತ್ಯಾಜ್ಯದಿಂದಾಗಿ ಎಂಬ ಅನುಮಾನ ವ್ಯಕ್ತವಾಗಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆಗೆ ನೋಟಿಸ್ ನೀಡಿದ್ದು, ಸರ್ಕಾರ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.

ತುಂಗಭದ್ರಾ ನೀರು ಹಸಿರು ಬಣ್ಣಕ್ಕೆ ತಿರುಗಿದ್ಯಾಕೆ? ಜಾಲ ಹಿಡಿದು ಹೊರಟ ಜಿಲ್ಲಾಡಳಿತ
ತುಂಗಭದ್ರಾ ನೀರು ಹಸಿರು ಬಣ್ಣಕ್ಕೆ ತಿರುಗಿದ್ಯಾಕೆ? ಜಾಲ ಹಿಡಿದು ಹೊರಟ ಜಿಲ್ಲಾಡಳಿತ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 23, 2025 | 9:06 PM

ಗದಗ, ಜನವರಿ 23: ಆರು ಜಿಲ್ಲೆಯ ಜೀವನದಿ ತುಂಗಭದ್ರಾ (Tungabhadra) ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಆದರೆ ನದಿಯ ಬಣ್ಣ ಮೂರು ಜಿಲ್ಲೆಯ ಜನರನ್ನು ಕಂಗಾಲಾಗಿಸಿದೆ. ಈ ವಿಷಯ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ನದಿ ಹಸಿರು ಬಣ್ಣಕ್ಕೆ ತಿರುಗಲು ವಿಜಯನಗರ ಶುಗರ್ ಫ್ಯಾಕ್ಟರಿಯೇ ಕಾರಣವೆಂಬ ಬಲವಾದ ಅನುಮಾನ ಕಾಡಿದೆ. ಹೀಗಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಖಾರ್ಕಾನೆಗೆ ನೋಟಿಸ್ ಕೊಟ್ಟಿದೆ. ಹೀಗಾಗಿ ಕದ್ದುಮುಚ್ಚಿ ತ್ಯಾಜ್ಯ ಬೇಕಾಬಿಟ್ಟಿ ಹರಿಬಿಟ್ಟ ಕಾರ್ಖಾನೆ ಆಡಳಿತ ಮಂಡಳಿಗೆ ಢವಢವ ಶುರುವಾಗಿದೆ. ಅಷ್ಟೇ ಅಲ್ಲ ಕಾರ್ಖಾನೆ ವಿರುದ್ಧ ಸಮರ ಸಾರಲು ಜಿಲ್ಲಾಡಳಿತ ಸನ್ನದ್ಧವಾಗಿದೆ.

ರುಚಿಕಟ್ಟಾಗಿದ್ದ ತುಂಗಭದ್ರೆ ನೀರು ಈಗ ಸಂಪೂರ್ಣ ಕಲುಷಿತವಾಗಿದೆ. ಇಡೀ ನದಿ ಹಸಿರು ಬಣಕ್ಕೆ ತಿರುಗಿದೆ. ಕಳೆದ 20 ದಿನಗಳಿಂದ ಹಸಿರು ಬಣ್ಣಕ್ಕೆ ತಿರುಗಿದ ನದಿ ನೀರು ನೋಡಿ ನದಿ ತೀರದ ಜನ್ರು ಕಂಗಾಲಾಗಿದ್ದಾರೆ. ಟಿವಿ9 ವರದಿ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ಈ ವಿಷಯ ಗಂಭೀರವಾಗಿ ಪರಿಗಣಿಸಿದೆ ಅಂತ ಕಾನೂನು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ನದಿ ನೀರು ಕುಡಿಯಲು ಯೋಗ್ಯವಲ್ಲ: ಸ್ಫೋಟಕ ವರದಿ ಬಹಿರಂಗ

ಹೊಲ, ಗದ್ದೆಗಳು, ಕುಡಿಯವ ನೀರಿನ ಟ್ಯಾಂಕ್​, ಪೈಪ್​ಗಳಲ್ಲೂ ಹಸಿರು ಬಣ್ಣದ ನೀರು ನೋಡಿ ಜನರು, ಅಧಿಕಾರಿಗಳು ಬೆಚ್ಚಿ ಹೋಗಿದ್ದಾರೆ. ಶುದ್ಧವಾದ ನದಿ ನೀರು ಕಲುಷಿತವಾಗಲು ಸಕ್ಕರೆ ಕಾರ್ಖಾನೆ ತ್ಯಜ್ಯವೇ ಕಾರಣ ಅನ್ನೋ ಬಲವಾದ ಅನುಮಾನ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿಗಳಿಗೆ ಅನುಮಾನ ಮೂಡಿದೆ. ಹೀಗಾಗಿ ಇದೇ 20 ರಂದು ಮಾಲಿನ್ಯ ನಿಯಂತ್ರಣ ಮಂಡಳಿ ಖಾರ್ಕಾನೆಗೆ ನೋಟಿಸ್ ಕೊಟ್ಟಿದೆ ಅಂತ ಕಾನೂನು ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ. ಹೀಗಾಗಿ ಯಾರೇ ಇರಲಿ ಜಲಸಂಪನ್ಮೂಲ ಮಲೀನ ಮಾಡಿದರೆ ಸರ್ಕಾರ ಸುಮ್ಮನಿರಲ್ಲ. ಹೀಗಾಗಿ ಈ ವಿಷಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಅಂತ ಸಚಿವರು ಹೇಳಿದ್ದಾರೆ.

ಅಸ್ತ್ರ ಪ್ರಯೋಗ

ಈಗಾಗಲೇ ವಿಜಯನಗರ ಶುಗರ್ ಪ್ರೈವೆಟ್ ಲಿಮಿಟೆಡ್​ನ ಫ್ಯಾಕ್ಟರಿಗೆ ತ್ಯಾಜ್ಯ ನೀರು ಬಿಡುಗಡೆ ಮಾಡದಂತೆ ನಿರ್ಬಂಧ ಹೇರಲಾಗಿದೆ. ಕಾರ್ಖಾನೆ ಅವೈಜ್ಞಾನಿಕವಾಗಿ ತ್ಯಾಜ್ಯ ನೀರು ಬಿಡುತ್ತಿದೆ. ನಾಲಾ, ಹಳ್ಳಕೊಳ್ಳ, ಕರೆಯಲ್ಲಿ ತ್ಯಾಜ್ಯ ಬಿಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಸರ್ಕಾರ ಕಾರ್ಖಾನೆ ವಿರುದ್ಧ ಉಗ್ರ ಅಸ್ತ್ರ ಪ್ರಯೋಗ ಮಾಡಿದೆ. ಹೀಗಾಗಿ ಇದೇ 21/1 ರಂದು ಕಂದಾಯ ಇಲಾಖೆಗೆ ಅಧಿಕಾರಿಗಳ ಮೂಲಕ ನೋಟಿಸ್ ನೀಡಲಾಗಿದೆ. ಸಕ್ಕರೆ ಕಾರ್ಖಾನೆಗೆ ಹೋಗಿ ಪ್ರತಿಯೊಂದು ರೀತಿಯಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ತ್ಯಾಜ್ಯ ಬಿಡದಂತೆ ನೋಡಿಕೊಳ್ಳಲು ಅಧಿಕಾರಿಗಳ ತಂಡ ರಚನೆ ಮಾಡಿ ಕಾರ್ಖಾನ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಮಾತ್ರವಲ್ಲ ಕಾರ್ಖಾನೆ ವಿರುದ್ಧ ತನಿಖೆಗೆ ಉನ್ನತ ಮಟ್ಟದ ಸಮಿತಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದಾರೆ. ನಾಳೆಯಿಂದಲೇ ಈ ಸಮಿತಿ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದೆ. ಹಸಿರು ನೀರು ಕುಡಿಯಲು ಸರ್ವತಾ ಯೋಗ್ಯ ಇಲ್ಲ. ಜಿಲ್ಲಾಡಳಿತ ಎಲ್ಲ ರೀತಿಯ ಎಚ್ಚರಿಕೆ ಕ್ರಮ ಕೈಗೊಂಡಿದೆ. ಜಮೀನುಗಳಿಗೆ ನೀರು ಹರಿಸಲು ಯಾವುದೇ ತೊಂದರೆ ಇಲ್ಲ. ಆದ್ರೂ ಈ ಬಗ್ಗೆ ಇನ್ನೊಮ್ಮೆ ಪರಿಶೀಲನೆ ಮಾಡಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಬದಲಾದ ತುಂಗಭದ್ರೆ ನೀರಿನ ಬಣ್ಣ: ಜೀವನಾಡಿ ನದಿಗೆ ಏನಾಯ್ತು?

ಇನ್ನೂ ತುಂಗಭದ್ರಾ ನದಿಯಿಂದಲೇ ಗದಗ-ಬೆಟಗೇರಿ ಅವಳಿ ನಗರ ಹಾಗೂ ಗ್ರಾಮೀಣ ಭಾಗದ ಪ್ರದೇಶಗಳಿಗೆ ಪೂರೈಕೆ ಆಗುತ್ತೆ. ಹೀಗಾಗಿ ಜನರಲ್ಲಿ ಆತಂಕ ಇದೆ. ಆದರೆ ಅವಳಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಗೆ ಹಸಿರು ಬಣ್ಣವಾದ ಪ್ರದೇಶದಿಂದ ನೀರು ಪೂರೈಕೆ ಮಾಡಲ್ಲ. ಕುಡಿಯುವ ನೀರು ಪೂರೈಕೆ ಮಾಡುವ ಹಮ್ಮಿಗಿ ಡ್ಯಾಂನಲ್ಲಿನ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ಜಿಲ್ಲೆಯ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ನೀರು ಕಾಯಿಸಿ ಕುಡಿಯಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಠಿಣ ಕ್ರಮಕ್ಕೆ ಜನರು ಒತ್ತಾಯ

ಸರ್ಕಾರ ಕಾರ್ಖಾನೆ ವಿರುದ್ಧ ತನಿಖೆ ವಿಶೇಷ ಅಧಿಕಾರಿಗಳ ತಂಡ ರಚನೆ ಮಾಡಿದೆ. ಹೀಗಾಗಿ ಇದು ಸಹಜವಾಗಿ ವಿಜಯನಗರ ಶುಗರ್ಸ್ ಕಂಪನಿಯ ಆತಂಕಕ್ಕೆ ಕಾರಣವಾಗಿದೆ. ಯಾಕಂದ್ರೆ ಬೇಕಾಬಿಟ್ಟಿ ಬಯಲು ಪ್ರದೇಶದಲ್ಲಿ ತ್ಯಾಜ್ಯ ನೀರು ಬಿಡುಗಡೆ ಮಾಡಿದ್ದು, ಈಗಾಗಲೇ ಮೇಲ್ನೋಟಕ್ಕೆ ಕಂಡು ಬಂದಿದೆ. ಹೀಗಾಗಿ ಅಧಿಕಾರಿಗಳ ತಂಡ ಕಾರ್ಖಾನೆಗೆ ಎಂಟ್ರಿ ಕೊಟ್ಟರೆ ಎಲ್ಲಿ ಅಸಲಿ ಮುಖ ಬಯಲಾಗುತ್ತೆ ಅನ್ನೋದು ಭಯ ಕಾರ್ಖಾನೆ ಅಧಿಕಾರಿಗಳಿಗೆ ಕಾಡ್ತಾಯಿದೆ. ಏನೇ ಇರಲಿ ಜೀವನದಿ ಮಲೀನಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅನ್ನೋದು ಈ ಭಾಗದ ಜನರ ಒತ್ತಾಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ