ಟಿವಿ9 ವರದಿ ಇಂಪ್ಯಾಕ್ಟ್​: ಗದಗ ನಗರದಲ್ಲಿನ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಮಾಫಿಯಾ ಬಂದ್​​

ಗದಗ-ಬೆಟಗೇರಿ ಅವಳಿ ನಗರದಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಮಾಫಿಯಾ ಭರ್ಜರಿಯಾಗಿ ನಡೆದಿತ್ತು. ಯಾರ ಭಯವೂ ಇಲ್ದೇ ಜನರ ಮಧ್ಯೆ ಎಗ್ಗಿಲ್ಲದೇ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ದಂಧೆ ಬಗ್ಗೆ ಟಿವಿ9 ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಅಕ್ರಮ ಗ್ಯಾಸ್ ರೀಫಿಲಿಂಗ್ ಅಡ್ಡೆಗಳ ಮೇಲೆ ದಾಳಿ ಮಾಡಿದೆ. ಈ ಕುರಿತು ವರದಿ ಇಲ್ಲಿದೆ.

ಟಿವಿ9 ವರದಿ ಇಂಪ್ಯಾಕ್ಟ್​: ಗದಗ ನಗರದಲ್ಲಿನ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಮಾಫಿಯಾ ಬಂದ್​​
ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ
Follow us
| Updated By: ವಿವೇಕ ಬಿರಾದಾರ

Updated on: Sep 03, 2024 | 3:32 PM

ಗದಗ, ಸೆಪ್ಟೆಂಬರ್​ 03: ಗದಗ-ಬೆಟಗೇರಿ (Gadag-Betageri) ಅವಳಿ ನಗರದಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ (Gas Refilling) ಮಾಫಿಯಾ ಭರ್ಜರಿಯಾಗಿ ನಡೆದಿತ್ತು. ಯಾರ ಭಯವೂ ಇಲ್ದೇ ಜನರ ಮಧ್ಯೆ ಎಗ್ಗಿಲ್ಲದೇ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು. ಹೀಗಾಗಿ ಜನರು ಯಾವಾಗ ಏನ್ ಅನಾಹುತ ಆಗುತ್ತೆ ಅನ್ನೋ ಭಯದಲ್ಲೇ ಬದುಕುವಂತಾಗಿತ್ತು. ಪೊಲೀಸ್, ಆಹಾರ ಇಲಾಖೆ ಗಮನಕ್ಕೆ ತಂದರೂ ಡೋಂಟ್ ಕೇರ್ ಎಂದಿದ್ದರು. ಈ ಕುರಿತು ಟವಿ9 ರಹಸ್ಯ ಕಾರ್ಯಾಚರಣೆ ಮಾಡಿ ಗ್ಯಾಸ್ ರೀಫಿಲ್ಲಿಂಗ್ ದಂಧೆ ಬಯಲು ಮಾಡಿತ್ತು. ಟಿವಿ9 ವರದಿಗೆ ಸ್ಪಂದಿಸಿದ ಜಿಲ್ಲಾಡಳಿತ ಗ್ಯಾಸ್ ರೀಫಿಲ್ಲಿಂಗ್ ಮಾಫಿಯಾ ಅಡ್ಡೆಗಳ ಮೇಲೆ ದಾಳಿ ಮಾಡಿತು. ದಂಧೆಕೋರರಿಗೆ ಜಿಲ್ಲಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಗದಗ-ಬೆಟಗೇರಿ ಅವಳಿ ನಗರದಲ್ಲಿ ಭಯಾನಕ ಗ್ಯಾಸ್ ರೀಫಿಲ್ಲಿಂಗ್ ಮಾಫಿಯಾ ಎಗ್ಗಿಲ್ಲದೆ ನಡೆದಿತ್ತು. ಪ್ರತಿ ಕ್ಷಣವೂ ಜನರು ಭಯದಲ್ಲೇ ಬದುಕುವಂತಾಗಿತ್ತು. ಯಾವಾಗ ಬ್ಲಾಸ್ಟ್ ಆಗುತ್ತೋ, ದುರಂತ ಸಂಭವಿಸುತ್ತೋ ಅನ್ನೋ ಆತಂಕದಲ್ಲೇ ಜೀವನ ಮಾಡುತ್ತಿದ್ದರು. ಅಕ್ರಮ ಗ್ಯಾಸ್ ರೀಫಿಲಿಂಗ್ ದಂಧೆ ಅವಳಿ ನಗರದ ಜನರನ್ನು ಬೆಚ್ಚಿಬಿಳಿಸಿತ್ತು. ಈ ಅಕ್ರಮದ ಬಗ್ಗೆ ಆಹಾರ ಹಾಗೂ ಪೊಲೀಸ್ ಇಲಾಖೆಗೆ ಸಾರ್ವಜನಿಕರು ದೂರು ನೀಡಿದರೂ ಕ್ರಮ ಕೈಗೊಂಡಿರಲಿಲ್ಲ.

ಹೀಗಾಗಿ ಅವಳಿ ನಗರದ ಜನರು ಟಿವಿ9ಗೆ ವಿಷಯ ತಿಳಿಸಿದರು. ಟಿವಿ9 ರಹಸ್ಯ ಕಾರ್ಯಾಚರಣೆ ಮಾಡಿ ಅವಳಿ ನಗರದ ಗ್ಯಾಸ್ ರೀಫಿಲಿಂಗ್ ಅಡ್ಡೆಗಳ ಅಸಲಿಯತ್ತು ಬಯಲು ಮಾಡಿತ್ತು. ಜಿಲ್ಲಾ ಕೇಂದ್ರದಲ್ಲೇ ರಾಜಾರೋಷವಾಗಿ ಡೇಂಜರ್ಸ್ ದಂಧೆ ನಡೆಯುತ್ತಿದ್ದರೂ ಆಡಳಿತ ಕುಂಭಕರ್ಣ ನಿದ್ದೆ ಮಾಡುತ್ತಿದೆ ಅಂತ ಅವಳಿ ನಗರದ ಜನರು ಆಕ್ರೋಶ ವ್ಯಕ್ತಪಡಿಸಿದರು. ಅವಳಿ ನಗರದಲ್ಲಿ ಒಂದಲ್ಲ ಎರಡಲ್ಲ ಸುಮಾರು 10ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗಳು ತಲೆ ಎತ್ತಿದ್ವು. ಈ ಭಯಾನಕ, ಕರಾಳ ದಂಧೆ ಪ್ರತಿಯೊಂದು ದೃಶ್ಯಗಳು ಟಿವಿ9 ರಹಸ್ಯ ಕಾರ್ಯಾಚರಣೆಯಲ್ಲಿ ಸೆರೆಯಾಗಿದ್ವು.

ಆಗಸ್ಟ್ 26ರಂದು ಟಿವಿ9 ಡಿಜಿಟಲ್ ನಲ್ಲಿ ವರದಿ ಪ್ರಸಾರ ಮಾಡಿತ್ತು. ಟಿವಿ9 ವರದಿ ಗಮನಿಸಿದ ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ ಮಾಡಿ ಕ್ರಮ ಕೈಗೊಳ್ಳುವಂತೆ ಆಹಾರ, ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಹೀಗಾಗಿ ಈ ಮೂರು ಇಲಾಖೆ ಅಧಿಕಾರಿಗಳು ಜಂಟಿ ದಾಳಿ ಅವಳಿ ನಗರದಲ್ಲಿ ಎಗ್ಗಿಲ್ಲದೆ ನಡೆದ ಗ್ಯಾಸ್ ಅಡ್ಡೆಗಳು ಸೀಜ್ ಮಾಡಿದ್ದಾರೆ. ಟಿವಿ9 ವರದಿ ಬಳಿಕ ಕೆಲವರು ಬೀಗ ಜಡಿದು ಎಸ್ಕೇಪ್ ಆಗಿದ್ದರು.

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಬೀಗ ಮುರಿದು ಅಧಿಕಾರಿಗಳು ರೇಡ್ ಮಾಡಿದ್ದಾರೆ. ಈ ವೇಳೆ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯಲ್ಲಿ ಅಪಾರ ಪ್ರಮಾಣ‌ ಗೃಹ ಬಳಕೆ ಗ್ಯಾಸ್​ಗಳು ಪತ್ತೆಯಾಗಿವೆ. ಸಿಲಿಂಡರ್, ರೀಫಿಲ್ಲಿಂಗ್ ಮಷಿನ್ ಸೇರಿ ಸಾಮಗ್ರಿಗಳ ಇರುವ ಅಡ್ಡೆ ಸೀಜ್ ಮಾಡಿದ್ದಾರೆ. ದಂಧೆಕೋರರ ವಿರುದ್ಧ ಎಕ್ಸಪ್ಲೋಜಿವ್ ಕಾಯ್ದೆ ಅಡಿಯಲ್ಲಿ ದೂರು ದಾಖಲು ಮಾಡಿದ್ದಾರೆ. ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಮಾಫಿಯಾ ಜೋರಾಗಿದೆ‌ ಅಂತ ಟಿವಿ9 ವರದಿ ಬಳಿಕ ವಿಷಯ ಗೋತ್ತಾಗಿದೆ. ಯಾವುದೇ ಮುಲಾಜಿಲ್ಲದೆ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಜೀವಕ್ಕೆ ಹಾನಿ, ಆಸ್ತಿಪಾಸ್ತಿಗಳಿಗೆ ತೊಂದರೆ ಆಗಬಹುದು. ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಮಾಡಿದವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗದಗ ಡಿಸಿ ಗೋವಿಂದರೆಡ್ಡಿ ಅವರು ಟಿವಿ9 ಮೂಲಕ ದಂಧೆಕೋರರಿಗೆ ಎಚ್ಚರಿಕೆ ನೀಡಿದ್ದಾರೆ.

ಅವಳಿ ನಗರದಲ್ಲಿ ಎಗ್ಗಿಲ್ಲದೆ ನಡೆದಿದ್ದ ಗ್ಯಾಸ್ ರೀಫಿಲ್ಲಿಂಗ್ ದಂಧೆಗೆ ಸಧ್ಯಕ್ಕೆ ಬ್ರೇಕ್ ಬಿದ್ದಿದೆ. ಜಿಲ್ಲಾಡಳಿತದ ಕ್ರಮದಿಂದ ಅವಳಿ ನಗರದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಅಧಿಕಾರಿಗಳು ಅನಧಿಕೃತ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ ಮಾಡಿ ಸೀಜ್ ಮಾಡಿದ್ದಾರೆ. ಇದು ಎಕ್ಸಪ್ಲೋಜಿವ್ ಆ್ಯಕ್ಟ್​ನಲ್ಲಿ ಬರುತ್ತೆ. ಗ್ಯಾಸ್ ಅನಧಿಕೃತ ರೀಫಿಲ್ಲಿಂಗ್ ಮಾಡಲು ಅವಕಾಶ ಇರಲ್ಲ. ಯಾರೇ ಭಾಗಿಯಾಗಬಾರದರೂ ಅಂಥವರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳುತ್ತೆ ಅಂತ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ