AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣ: ತಂದೆ ಮಗ ಅರೆಸ್ಟ್

ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ತಂದೆ, ಮಗನನ್ನು ಬಂಧಿಸಿದ್ದಾರೆ.

ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣ: ತಂದೆ ಮಗ ಅರೆಸ್ಟ್
ಮಾರುತಿ ಸೋನಾವನೆ ಮತ್ತು ಅವರ ಮಗ ಸಮೀತ ಕುಮಾರ್
TV9 Web
| Edited By: |

Updated on:Aug 21, 2022 | 10:08 PM

Share

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ತಂದೆ, ಮಗನನ್ನು ಬಂಧಿಸಿದ್ದಾರೆ. ಮುನ್ಸಿಪಲ್ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ ಮತ್ತು ಅವರ ಪುತ್ರ ಸಮಿತ್ ಕುಮಾರ್‌ನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಿಗೆ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪೇಪರ್ ಲೀಕ್ ಮಾಡಿದ ತಂದೆ-ಮಗ

ಕಲಬುರಗಿಯಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿತ್ತು(PSI Recruitment Scam). ಅದೇ ರೀತಿ ಈಗ ರಾಜ್ಯದಲ್ಲಿ ಮತ್ತೊಂದು ಭಾರೀ ಪರೀಕ್ಷಾ ಅಕ್ರಮ ಬಯಲಾಗಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ(KPTCL Junior Assistant) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಲೀಕ್ ಆಗಿದೆ.

ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು. ಆದ್ರೆ ಗದಗದಲ್ಲಿಯೇ ಈ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆ. ತಂದೆ-ಮಗನ ಸೇರಿಕೊಂಡು ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಮಗ ಸಮಿತ್ ಕುಮಾರ್‌ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ.

ಮಗ ಸಮೀತಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಮೊಬೈಲ್ ಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. 2022, ಆಗಸ್ಟ್ 7ರ ಭಾನುವಾರದಂದು ಗದಗ-ಬೆಟಗೇರಿ ಅವಳಿ ನಗರದಲ್ಲಿ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆ ಪೈಕಿ ಮುನ್ಸಿಪಲ್ ಕಾಲೇಜ್ ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ.

Published On - 10:03 pm, Sun, 21 August 22

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ