ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ತಂದೆ, ಮಗನನ್ನು ಬಂಧಿಸಿದ್ದಾರೆ. ಮುನ್ಸಿಪಲ್ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ ಮತ್ತು ಅವರ ಪುತ್ರ ಸಮಿತ್ ಕುಮಾರ್‌ನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಿಗೆ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪೇಪರ್ ಲೀಕ್ ಮಾಡಿದ ತಂದೆ-ಮಗ
ಕಲಬುರಗಿಯಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿತ್ತು(PSI Recruitment Scam). ಅದೇ ರೀತಿ ಈಗ ರಾಜ್ಯದಲ್ಲಿ ಮತ್ತೊಂದು ಭಾರೀ ಪರೀಕ್ಷಾ ಅಕ್ರಮ ಬಯಲಾಗಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ(KPTCL Junior Assistant) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಲೀಕ್ ಆಗಿದೆ.
ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು. ಆದ್ರೆ ಗದಗದಲ್ಲಿಯೇ ಈ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆ. ತಂದೆ-ಮಗನ ಸೇರಿಕೊಂಡು ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಮಗ ಸಮಿತ್ ಕುಮಾರ್ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ.
ಮಗ ಸಮೀತಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಮೊಬೈಲ್ ಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. 2022, ಆಗಸ್ಟ್ 7ರ ಭಾನುವಾರದಂದು ಗದಗ-ಬೆಟಗೇರಿ ಅವಳಿ ನಗರದಲ್ಲಿ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆ ಪೈಕಿ ಮುನ್ಸಿಪಲ್ ಕಾಲೇಜ್ ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ.
Published On - 10:03 pm, Sun, 21 August 22