Gadag: ಜಾನುವಾರಗಳಿಗೆ ನೀರು ಕುಡಿಸಲು ಹೋದ ಇಬ್ಬರು ಬಾಲಕರು ಕಲ್ಲಿನ ಕ್ವಾರಿಯಲ್ಲಿ ಬಿದ್ದು ಸಾವು

ನೀರು ತುಂಬಿದ ಕಲ್ಲಿನ ಕ್ವಾರಿಯಲ್ಲಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ತೋಂಟಗಂಟಿ ಗ್ರಾಮದಲ್ಲಿ ನಡೆದಿದೆ.

Gadag: ಜಾನುವಾರಗಳಿಗೆ ನೀರು ಕುಡಿಸಲು ಹೋದ ಇಬ್ಬರು ಬಾಲಕರು ಕಲ್ಲಿನ ಕ್ವಾರಿಯಲ್ಲಿ ಬಿದ್ದು ಸಾವು
ಮೃತ ಬಾಲಕನಿಗಾಗಿ ಶೋಧ ಕಾರ್ಯ
Edited By:

Updated on: Nov 29, 2022 | 3:35 PM

ಗದಗ: ನೀರು ತುಂಬಿದ ಕಲ್ಲಿನ ಕ್ವಾರಿಯಲ್ಲಿ (Stone quarry) ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಜೇಂದ್ರಗಡ (Gajendragad) ತಾಲೂಕಿನ ತೋಂಟಗಂಟಿ ಗ್ರಾಮದಲ್ಲಿ ನಡೆದಿದೆ. ಸುಮೀತ್ ಹಿರೇಮಠ (10) ಅಂದಾನಗೌಡ (8) ಮೃತ ಬಾಲಕರು. ಬಾಲಕರು ಜಾನುವಾರಗಳಿಗೆ ನೀರು ಕುಡಿಸಲು ಕಲ್ಲಿನ ಕ್ವಾರಿಯ ಕೊಳ್ಳಕ್ಕೆ ಹೋಗಿದ್ದ ವೇಳೆ ಸಾವನ್ನಪ್ಪಿದ್ದಾರೆ. ಸುಮೀತ್ ಹಿರೇಮಠನ ಶವ ಪತ್ತೆಯಾಗಿದೆ. ಘಟನೆ ನಡೆದು 24 ಗಂಟೆಯಾದರೂ ಇನ್ನೊಬ್ಬ ಬಾಲಕ ಅಂದಾನಗೌಡನ ಪತ್ತೆಗಾಗಿ ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದ ಐದು ಮೀನುಗಾರಿಕಾ ಬಂದರುಗಳಲ್ಲಿ ಹೂಳೆತ್ತುವ ಕಾರ್ಯ ಪ್ರಾರಂಭಿಸಲಾಗುವುದು: ಕೋಟ ಶ್ರೀನಿವಾಸ್ ಪೂಜಾರಿ

ಘಟನೆಗೆ ತಾಲೂಕು ಆಡಳಿತ ನಿರ್ಲಕ್ಷ್ಯ ಕಾರಣ ‌ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕ್ವಾರಿಯಲ್ಲಿನ ನೀರು ಖಾಲಿ‌ ಮಾಡುವಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಒತ್ತಾಯಿಸುತ್ತಿದ್ದಾರೆ. ನರೇಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Tue, 29 November 22