Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಮೊಹರಂ ಹಬ್ಬ ಆಚರಣೆ ವೇಳೆ ಹೃದಯಾಘಾತದಿಂದ ಇಬ್ಬರು ಸಾವು

ಗದಗ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆ ವೇಳೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೊಹರಂ ಹಬ್ಬದ ಅಂಗವಾಗಿ ಅಲಿ ದೇವರು ಹೊತ್ತಿದ್ದ ಮತ್ತು ಹೆಜ್ಜೆ ಮಜಲು ಆಡುತ್ತಿದ್ದ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Gadag News: ಮೊಹರಂ ಹಬ್ಬ ಆಚರಣೆ ವೇಳೆ ಹೃದಯಾಘಾತದಿಂದ ಇಬ್ಬರು ಸಾವು
ಮೃತರು
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 29, 2023 | 9:46 PM

ಗದಗ, ಜುಲೈ 29: ಜಿಲ್ಲೆಯಲ್ಲಿ ಮೊಹರಂ (Muharram) ಹಬ್ಬ ಆಚರಣೆ ವೇಳೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೊಹರಂ ಹಬ್ಬದ ಅಂಗವಾಗಿ ಅಲಿ ದೇವರು ಹೊತ್ತಿದ್ದ ಮತ್ತು ಹೆಜ್ಜೆ ಮಜಲು ಆಡುತ್ತಿದ್ದ ಇಬ್ಬರು  ವ್ಯಕ್ತಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಇಮಾಮ್ ಸಾಬ್(55), ಹರ್ಲಾಪೂರ ಗ್ರಾಮದ ಶರೀಫ್ ಮೂಲಿಮನಿ(40) ಮೃತರು. ಸದ್ಯ ಸಂಭ್ರಮದಲ್ಲಿದ್ದ ಗ್ರಾಮಗಳಲ್ಲಿ ಸೂತಕದ ಛಾಯೆ ಆವರಿಸಿದ್ದು, ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣ; ಸ್ಥಳ ಮಹಜರು ಪ್ರಕ್ರಿಯೆ ನಡೆಸಿರುವ NIA ಅಧಿಕಾರಿಗಳು

ಜೋಕಾಲಿ ಆಡಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕಿ

ಹಾಸನ: ಜೋಕಾಲಿ ಆಡುವ ವೇಳೆ ಜೋಕಾಲಿಯ ಸೀರೆ ಕುತ್ತಿಗೆಗೆ ಸಿಲುಕಿ 9 ವರ್ಷದ ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಣಿಕೇರಿ ಗ್ರಾಮದಲ್ಲಿ ನಡೆದಿದೆ. ಬಸವರಾಜು, ಬೇಬಿ ದಂಪತಿಯ ಪುತ್ರಿ ಸಾನಿತಾ(9) ಮೃತ ಬಾಲಕಿ. ಮನೆಯೊಳಗೆ ಜೋಕಾಲಿ ಆಡಲು ಪೋಷಕರು ಸೀರೆ ಕಟ್ಟಿದ್ದರು. ಆಟವಾಡುವಾಗ ಆಯತಪ್ಪಿ ಕುತ್ತಿಗೆಗೆ ಸೀರೆ ಬಿಗಿದು ಸಾನಿತಾ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರ ಬಂಧನ

ಮಂಗಳೂರು: ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಬಾಳೇಪುನಿ ನಿವಾಸಿ ಅಬ್ಬಾಸ್(61), ಕುತ್ತಾರು ನಿವಾಸಿ ಯಶವಂತ ಕುಮಾರ್(45) ಬಂಧಿತರು. 1 ಪಿಸ್ತೂಲ್, 2 ಮೊಬೈಲ್ ಮತ್ತು 2 ಬೈಕ್​ನ್ನು​ ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Ramanagara News: ಜಡ್ಜ್ ಮನೆಯಲ್ಲೇ‌ ಕಳ್ಳತನ ಮಾಡಿದ್ದ ಖದೀಮನನ್ನು ಬಂಧಿಸಿದ ಪೊಲೀಸ್

ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್ ವಿಧಿವಶ

ಮೈಸೂರು: ಅನಾರೋಗ್ಯದಿಂದ ಭಾರತೀಯ ಸೇನೆಯ ನಿವೃತ್ತ ಕ್ಯಾಪ್ಟನ್​ ಜೆಎಸ್​ಎಸ್​ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ. ಕುಶಾಲಪ್ಪ (62) ಮೃತ ಸೇನಾನಿ. ಮದ್ರಾಸ್ ರಿಜಿಮೆಂಟ್‌ನಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸಿದ್ದರು. ಮೈಸೂರಿನ ಹಿನಕಲ್ ನಿವಾಸದಲ್ಲಿ ಎಕ್ಸ್ ಸರ್ವಿಸ್ ಮೆನ್ ಸಂಸ್ಥೆಯಿಂದ 40 ಜನರಿಂದ ಪೆರೇಡ್ ಮಾಡುವ ಮೂಲಕ ಅಂತಿಮ‌ ನಮನ ಸಲ್ಲಿಸಲಾಯಿತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:40 pm, Sat, 29 July 23

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ