
ಗದಗ, (ಮೇ 01): ಯುವಕನೋರ್ವ ಪ್ರೀತಿಯ (Love) ನಾಟಕವಾಡಿ ಅಪ್ರಾಪ್ತೆ ಹುಡುಗಿಯನ್ನು ಬಲೆಗೆ ಬೀಳಿಸಿಕೊಂಡು ಅತ್ಯಾಚಾರ ಎಸಗಿರುವ ಘಟನೆ ಗದಗ (Gadag) ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರ ತಾನು ಮಾತ್ರವಲ್ಲದೇ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಏಪ್ರಿಲ್ 19 ರಂದು ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಇಬ್ಬರು ಸ್ನೇಹಿತರು ಒಬ್ಬರಾದ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಸ್ನೇಹಿತ ಬಾಲಕಿ ಮೇಲೆ ಅತ್ಯಾಚಾರ ಎಸಗುವ ದೃಶ್ಯವನ್ನು ಮತ್ತೋರ್ವ ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬಯಲಿಗೆ ಬಂದಿದ್ದು, ಸದ್ಯ ಪೊಲೀಸರು, ಆರೋಪಿಗಳಾದ ಸಮೀರ್, ಉಮರ್ ಹಾಗೂ ಲಾಡ್ಜ್ ಬುಕ್ ಮಾಡಿ ಸಹಕರಿಸಿದ್ದ ಜಾಕೀರ್ ಹುಸೇನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರದ ದೃಶ್ಯಗಳು ಸೆರೆ ಹಿಡಿದು ವೈರಲ್ ಮಾಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವುದು ಬಾಲಕಿ ಕುಟುಂಬಸ್ಥರಿಗೆ ಗೊತ್ತಾಗಿದೆ. ಇದರಿಂದ ಆತಂಕಗೊಂಡ ಪೋಷಕರು ಕೂಡಲೇ ಗದಗ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನು ಈ ಸಂಬಂಧ ಗದಗ ಎಸ್ಪಿ ಬಿ ಎಸ್ ನೇಮಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಈ ಪ್ರಕರಣದ ಮಾಹಿತಿ ನೀಡಿದ್ದಾರೆ. ಅಪ್ರಾಪ್ತೆ ಹುಡುಗಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಸಮೀರ್, ಏಪ್ರಿಲ್ 19ರಂದು ಆಕೆಯನ್ನಜು ಪುಸಲಾಯಿಸಿ ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಇದೇ ವೇಳೆ ಸಮೀರ್ನ ಗೆಳೆಯ ಉಮರ್ ಸಹ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇನ್ನು ಜಾಕೀರ್ ಹುಸೇನ್ ಎನ್ನುವಾತ ಅತ್ಯಾಚಾರಿಗಳಾದ ಸಮೀರ್, ಉಮರ್ಗೆ ಲಾಡ್ಜ್ ಬುಕ್ ಮಾಡಿ ಸಹಕರಿಸಿದ್ದ. ಸದ್ಯ ಪೋಕ್ಸೋ ಕಾಯ್ದೆಯಡಿ ಮೂವರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
Published On - 4:53 pm, Thu, 1 May 25