ಗದಗ: ಕಾರು-ಬಸ್ಸು ನಡುವೆ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಗದಗ(Gadag) ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಬಸ್ಸು ನಡುವೆ ಅಪಘಾತವಾಗಿದ್ದು, ಭೀಕರ ಅಪಘಾತ(Accident)ಕ್ಕೆ ಕಾರು ಚಾಲಕನ ಜೊತೆಗೆ ಪಕ್ಕಕ್ಕೆ ಕುಳಿತ ವ್ಯಕ್ತಿ ಸಹ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಗದಗ: ಕಾರು-ಬಸ್ಸು ನಡುವೆ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
ಗದಗ ಬಸ್ಸು, ಕಾರು ಅಪಘಾತ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 28, 2023 | 2:32 PM

ಗದಗ, ಸೆ.28: ಕಾರು ಹಾಗೂ ಬಸ್ಸು ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ(Gadag) ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಭೀಕರ ಅಪಘಾತ(Accident)ಕ್ಕೆ ಕಾರು ಚಾಲಕನ ಜೊತೆಗೆ ಪಕ್ಕಕ್ಕೆ ಕುಳಿತ ವ್ಯಕ್ತಿ ಸಹ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಇದೇ ವೇಳೆ ಸರ್ಕಾರಿ ಬಸ್ ಕೂಡ ಪಲ್ಟಿಯಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಕ್ಕುಂಡಿ ಗ್ರಾಮದಿಂದ ಬಸ್ ಹೆದ್ದಾರಿgಎ ಎಂಟ್ರಿಯಾಗುತ್ತಿದ್ದಂತೆ ಕೊಪ್ಪಳ ಕಡೆಯಿಂದ ಬರುತ್ತಿದ್ದ ಕಾರು ಬಸ್​ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಡಿವೈಡರ್‌ಗೆ ಬೈಕ್ ಡಿಕ್ಕಿ, ಸವಾರರಿಗೆ ಗಂಭೀರ ಗಾಯ

ರಾಮನಗರ: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರಿಗೆ ಗಂಭೀರ ಗಾಯವಾದ ಘಟನೆ ರಾಮನಗರ ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ. ಅಬುತಾಲಿಮ್ (30), ಸಾವುದ್ (27) ಅಪಘಾತದಲ್ಲಿ ಗಾಯಗೊಂಡವರು. ಇನ್ನು ಇವರು ಈದ್ ಮಿಲಾದ್ ಆಚರಣೆ ಹಿನ್ನಲೆ ಬೆಂಗಳೂರಿನ ಶಿವಾಜಿ ನಗರದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬೈಕ್ ಸ್ಪೀಡ್ ಕಂಟ್ರೋಲ್​ಗೆ ಸಿಗದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.  ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಪರ ಜಿಲ್ಲಾ ಪೊಲೀಸ್ ಅಧಿಕಾರಿ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಗೊಂಡ ಯುವಕರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಈ ಕುರಿತು ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಈ ಬಾಲಕನ ಸಮಯಪ್ರಜ್ಞೆಗೊಂದು ಸಲಾಂ, ರೈಲು ಅಪಘಾತ ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಪೋರ

ಮನೆ ಬಾಗಿಲು ಮುರಿದು ಸರಣಿ ಕಳ್ಳತನ

ಕಲಬುರಗಿ: ತಾಲೂಕಿನ ಸಣ್ಣೂರು ಗ್ರಾಮದಲ್ಲಿ ಮೂವರ ಮನೆಗಳಲ್ಲಿ ಸರಣಿ ಕಳ್ಳತನವಾಗಿದೆ. ಹೌದು, ಒಂದೇ ರಾತ್ರಿಯಲ್ಲಿ ಮೂರು ಮನೆಯಲ್ಲಿ 100 ಗ್ರಾಂ ಚಿನ್ನ, 50 ಸಾವಿರ ನಗದು ಕಳ್ಳತನ ಮಾಡಿದ್ದಾರೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದೇ ವೇಳೆ ಬಾಗಿಲು ಮುರಿದು ಮನೆಗೆ ನುಗ್ಗಿದ ಖದೀಮರು, ಕೈ ಚಳಕ ತೋರಿಸಿದ್ದಾರೆ. ಈ ಕುರಿತು ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ