ಗದಗ: ನಾಗರ ಪಂಚಮಿ ಹಬ್ಬದಂದು ಎರಡು ಹಾವು ಪ್ರತ್ಯಕ್ಷ: ನೀರು ಕುಡಿಸಿ ಸೆರೆ ಹಿಡಿದ ಸ್ನೇಕ ಸಾಗರ

Gadag News: ನಾಡಿಗೆ ದೊಡ್ಡ ನಾಗರಪಂಚಮಿ ಹಬ್ಬದ ದಿನ ಎಲ್ಲೆಡೆ ಕಲ್ಲ ನಾಗರ ಮೂರ್ತಿಗೆ ಹಾಲೆರೆಯುವದು ಸಾಮಾನ್ಯ. ಆದರೆ ನಾಗರಪಂಚಮಿ ದಿನವೇ ಎರಡು ಕಡೆ ಪ್ರತ್ಯಕ್ಷವಾದ ನಾಗರ ಹಾವಿಗೆ ನೀರು ಕುಡಿಸುವ ಮೂಲಕ ಸಾಗರ ಧರಣಿ ಎನ್ನುವವರು ಹಾವುಗಳನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟು ಬಂದು ಎಲ್ಲ ಪ್ರೀತಿಗೆ ಪಾತ್ರನಾಗಿದ್ದಾರೆ.

ಗದಗ: ನಾಗರ ಪಂಚಮಿ ಹಬ್ಬದಂದು ಎರಡು ಹಾವು ಪ್ರತ್ಯಕ್ಷ: ನೀರು ಕುಡಿಸಿ ಸೆರೆ ಹಿಡಿದ ಸ್ನೇಕ ಸಾಗರ
ಹಾವಿಗೆ ನೀರು ಕುಡಿಸಿದ ಸ್ನೇಕ್ ಸಾಗರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Aug 20, 2023 | 9:52 PM

ಗದಗ, ಆಗಸ್ಟ್​ 20: ನಾಡಿಗೆ ದೊಡ್ಡ ನಾಗರಪಂಚಮಿ (Nagara Panchami) ಹಬ್ಬದ ದಿನ ಎಲ್ಲೆಡೆ ಕಲ್ಲ ನಾಗರ ಮೂರ್ತಿಗೆ ಹಾಲೆರೆಯುವದು ಸಾಮಾನ್ಯ. ಪ್ರತ್ಯಕ್ಷಾಗಿ ಕಂಡರೆ ಜೀವಭಯದಲ್ಲಿ ಮಾರುದ್ಧ ಜಿಗಿಯುವರೇ ಹೆಚ್ಚು. ನಾಗದೇವರೆಂದು ಪೂಜಿಸಿ ಕೈಮುಗಿದು ದೂರ ಸರಿಯುತ್ತಾರೆ. ಆದರೆ ನಾಗರಪಂಚಮಿ ದಿನವೇ ಎರಡು ಕಡೆ ಪ್ರತ್ಯಕ್ಷವಾದ ನಾಗರ ಹಾವಿಗೆ ನೀರು ಕುಡಿಸುವ ಮೂಲಕ ಸಾಗರ ಧರಣಿ ಎನ್ನುವವರ ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟು ಬಂದು ಎಲ್ಲ ಪ್ರೀತಿಗೆ ಪಾತ್ರನಾಗಿದ್ದಾನೆ.

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಜಂತ್ಲಿ ಬಸವೇಶ್ವರ ದೇವಸ್ಥಾನದ ಹೊಸಮನಿ ಎಂಬುವರ ಮನೆಯಲ್ಲಿ ಸುಮಾರು 5/6 ಅಡಿ ಉದ್ದದ ನಾಗರ ಹಾವು ಪ್ರತ್ಯಕ್ಷವಾಗಿದೆ. ಹಾವು ನೋಡಿದ ಮನೆಯವರು ಗಾಬರಿಗೊಂಡಿದ್ದಾರೆ. ದೂರದಿಂದಲೇ ಭಕ್ತಿಯಿಂದ ಪೂಜೆ ಮಾಡಿ ಹೊರ ಹೋಗುವಂತೆ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ವಿಧಾನಸೌಧಕ್ಕೆ ಎಂಟ್ರಿಕೊಟ್ಟ ಹಾವು, ಸಿಬ್ಬಂದಿಗಳು ಶಾಕ್​! ವಿಡಿಯೋ ಇಲ್ಲಿದೆ

ಕೂಡಲೇ ಸಾಗರ ಅವರಿಗೆ ಪೋನ್ ಮುಖಾಂತರ ತಿಳಿಸಿದಾಗ ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಸಾಗರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಸೆಪ್ಟಿಕಲ್ ಕೋಬ್ರಾ ಎನ್ನಲಾಗುವ ನಾಗರಹಾವನ್ನು ತಮ್ಮ ಚಾಣಾಕ್ಷತದಿಂದ ತನ್ನ ಹಿಡಿತಕ್ಕೆ ತೆಗೆದುಕೊಂಡು ಕೆಲಹೊತ್ತು ಆಟವಾಡಿಸಿ ಬಾಟಲಿಯಿಂದ ನೀರು ಕುಡಿಸಿ ಬಳಿಕ ಸುರಕ್ಷಿತವಾಗಿ ಬಿಟ್ಟು ಬಂದಿದ್ದಾನೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಈಶಾ ಫೌಂಡೇಶನ್‌ನ ಸದ್ಗುರು ಸನ್ನಿಧಿಯಲ್ಲಿ ನಾಳೆ ವಿಶೇಷ ನಾಗಾರಾಧನೆ! ಇಲ್ಲಿದೆ ಕಂಪ್ಲೀಟ್​ ಡೀಟೆಲ್ಸ್​

ಕೆಲ ಹೊತ್ತಿನ ಬಳಿಕ ಕುಂದ್ರಳ್ಳಿ ತಾಂಡಾದ ಮನೆಯಲ್ಲಿ ನಾಗರ ಹಾವು ಬಂದಿದೆ ಎಂಬ ಸುದ್ದಿ ತಿಳಿದು ಅಲ್ಲಿಗೂ ತೆರಳಿದ ಸಾಗರ ಧರಣಿ ಅದನ್ನು ಸಹ ಕ್ಷಣಾರ್ಧದಲ್ಲಿಯೇ ಹಿಡಿದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದಿದ್ದಾನೆ. ಯುವಕನ ಧೈರ್ಯ ಮತ್ತು ಬುದ್ದಿವಂತಿಕೆಯಿಂದ ಹಾವನ್ನು ಹಿಡಿಯುತ್ತಿರುವದನ್ನು ನೋಡಿದ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದುವರೆಗೂ ಹತ್ತಾರು ಜಾತಿಯ ಅನೇಕ ಹಾವುಗಳನ್ನು ಹಿಡಿದು ಹಲವಾರು ಕುಟುಂಬಗಳ ನೆಮ್ಮದಿಗೆ ಕಾರಣವಾಗಿರುವ ಸಾಗರ ಧರಣಿ ಸ್ನೇಕ ಸಾಗರ ಎಂದೇ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ನಾಗದೇವತೆಗಳನ್ನು ಆತನನ್ನು ಕಾಪಾಡಲಿ ಎಂಬುದು ಎಲ್ಲರ ಹಾರೈಕೆ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:49 pm, Sun, 20 August 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!