ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹೋಗುವಾಗ ಮತ್ತೊಂದು ದುರ್ಘಟನೆ! ಯುವಕನ ಸ್ಥಿತಿ ಗಂಭೀರ

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಗ್ರಾಮಕ್ಕೆ ಭೇಟಿ ನೀಡಿದ ನಂತರ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳು ಆರೋಗ್ಯ ವಿಚಾರಿಸಿ ಯಶ್ ಹಿಂದಿರುಗುವಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ.

ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹೋಗುವಾಗ ಮತ್ತೊಂದು ದುರ್ಘಟನೆ! ಯುವಕನ ಸ್ಥಿತಿ ಗಂಭೀರ
ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹೋಗುವಾಗ ಬೆಂಗಾವಲು ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಯುವಕನ ಸ್ಥಿತಿ ಗಂಭೀರ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Rakesh Nayak Manchi

Updated on:Jan 08, 2024 | 9:45 PM

ಗದಗ, ಜ.8: ರಾಕಿಂಗ್ ಸ್ಟಾರ್ ಯಶ್ (Yash) ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಗ್ರಾಮಕ್ಕೆ ಭೇಟಿ ನೀಡಿದ ನಂತರ ಹುಬ್ಬಳ್ಳಿಯ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳು ಆರೋಗ್ಯ ವಿಚಾರಿಸಿ ಯಶ್ ಹಿಂದಿರುಗುವಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ.

ಇದನ್ನೂ ಓದಿ: ‘ಅಷ್ಟು ಇಷ್ಟು ಅಂತ ಹೇಳಿಲ್ಲ’: ಯಶ್​ ಕೊಟ್ಟ ಭರವಸೆ ಬಗ್ಗೆ ಮೃತರ ಕುಟುಂಬದವರ ಮಾತು

ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಸವಾರನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಗಾಯಾಳು ಯುವಕನ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಗಾಯಾಳುವನ್ನು ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (32) ಎಂದು ಗುರುತಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Mon, 8 January 24