AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ‌ದ ನರೇಗಲ್ ಪಟ್ಟಣದಲ್ಲಿ ಇದ್ದೂ ಇಲ್ಲದಂತಾದ ಸರ್ಕಾರಿ ಆಸ್ಪತ್ರೆ: ರೋಗಿಗಳಿಗೆ ತಪ್ಪದ ಪರದಾಟ

ಗದಗ ಜಿಲ್ಲೆಯ ನರೇಗಲ್‌ನಲ್ಲಿ 2 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೈಟೆಕ್ ಆಸ್ಪತ್ರೆ ಇದ್ದರೂ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ. 30 ಹಾಸಿಗೆಗಳ ಈ ಆಸ್ಪತ್ರೆಯಲ್ಲಿ ಸದ್ಯ ಕೇವಲ ಒಬ್ಬರೇ ದಂತ ವೈದ್ಯರಿದ್ದಾರೆ. ಹೀಗಾಗಿ ಉಳಿದ ರೋಗಿಗಳು ಚಿಕಿತ್ಸೆಗೆ ಸಂಕಷ್ಟ ಪಡುವಂತಾಗಿದೆ. ಸಿಬ್ಬಂದಿ ಕೊರತೆಯೂ ಇರುವ ಕಾರಣ ಕಟ್ಟಡ ಪಾಳು ಬೀಳುತ್ತಿದ್ದರೆ, ಯಂತ್ರೋಪಕರಣಗಳು ಧೂಳು ಹಿಡಿಯುತ್ತಿವೆ.

ಗದಗ‌ದ ನರೇಗಲ್ ಪಟ್ಟಣದಲ್ಲಿ ಇದ್ದೂ ಇಲ್ಲದಂತಾದ ಸರ್ಕಾರಿ ಆಸ್ಪತ್ರೆ: ರೋಗಿಗಳಿಗೆ ತಪ್ಪದ ಪರದಾಟ
ನರೇಗಲ್​​ ಆಸ್ಪತ್ರೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jun 16, 2026 | 9:22 AM

Share

ಗದಗ, ಜೂನ್​​ 16: ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಆಸ್ಪತ್ರೆ ನಿರ್ಮಿಸಲಾಗಿದ್ದರೂ ವೈದ್ಯರು ಮತ್ತು ಸಿಬ್ಬಂದಿ ಕೊರತೆಯ ಕಾರಣ ರೋಗಿಗಳು ಪರದಾಟ ನಡೆಸುತ್ತಿರುವ ಸ್ಥಿತಿ ಗದಗ‌ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ಕಂಡುಬಂದಿದೆ. ಕೇಂದ್ರ ಸರ್ಕಾರ ಎನ್ಎಚ್ಎಂ ಯೋಜನೆಯಲ್ಲಿ 2 ಕೋಟಿಗೂ ಅಧಿಕ ಮೊತ್ತದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಭಡ್ತಿ ಪಡೆದಿದೆಯಾದರೂ, ವೈದ್ಯರ ಕೊರತೆಯಿಂದ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಮಾತ್ರ ಮರಿಚೀಕೆಯಾಗಿಯೇ ಉಳಿದಿದೆ.

ಆಸ್ಪತ್ರೆಗೆ ಒಬ್ಬನೇ ವೈದ್ಯ!

ಪ್ರತಿನಿತ್ಯ ನೂರಾರು ಮಂದಿ ರೋಗಿಗಳು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಾರೆಯಾದರೂ ಇಲ್ಲಿ ಲಭ್ಯವಿರೋದು ಮಾತ್ರ ಕೇವಲ ಒಬ್ಬ ವೈದ್ಯರು. ಅವರು ಕೂಡ ದಂತ ವೈದ್ಯರಾಗಿರುವ ಕಾರಣ, ಉಳಿದ ರೋಗಿಗಳ ಪಾಡು ಹೇಳತೀರದಾಗಿದೆ. ಅಲ್ಲದೆ ಕೋಟ್ಯಾಂತರ ಹಣ ಖರ್ಚು ಮಾಡಿ ನಿರ್ಮಿಸಿರುವ ಆಸ್ಪತ್ರೆಯ ನಿರ್ವಹಣೆಗೆ ಸಿಬ್ಬಂದಿಯ ಕೊರತೆಯೂ ಇರುವ ಕಾರಣ ಕಟ್ಟಡ ಪಾಳುಬಿದ್ದ ಬಂಗಲೆಯಂತಾಗಿದ್ದರೆ, ಯಂತ್ರೋಪಕರಣಗಳು ಉಪಯೋಗವಿಲ್ಲದೆ ಧೂಳು ಹಿಡಿಯುತ್ತಿವೆ. 30 ಹಾಸಿಗೆ ಸಾಮರ್ಥ್​ಯವಿರುವ ಈ ಆಸ್ಪತ್ರೆಗೆ 6 ವೈದ್ಯರ ಅಗತ್ಯವಿದೆ. ನರ್ಸ್​​ಗಳು ಸೇರಿದಂತೆ 30 ಸಿಬ್ಬಂದಿ ಬೇಕಿದೆ. ಹೀಗಿದ್ದರೂ ಆಡಳಿತ ನಡೆಸುತ್ತಿರುವವರು ಮಾತ್ರ ಇತ್ತ ಗಮನಹರಿಸಲ್ಲ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: 33 ದಿನ ಅನ್ನ, ನೀರಿಲ್ಲದೇ ಸ್ವಾಮೀಜಿಯಿಂದ ಶಿವಯೋಗ ಸಮಾಧಿ; ಇಟ್ಟಿಗೆಯಿಂದ ಗರ್ಭಗುಡಿ ಬಂದ್​​

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗದಗ ಡಿಎಚ್ಒ ಎಸ್. ಎಸ್. ನಿಲಗುಂದ, ಆಸ್ಪತ್ರೆಗೆ ಬೇಕಿರುವ ವೈದ್ಯರು, ಸಿಬ್ಬಂದಿ ನೇಮಕಾತಿ ಹಾಗೂ ಅಗತ್ಯ ವೈದ್ಯಕೀಯ ಸಾಮಗ್ರಿಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಅದೇನೇ ಇದ್ದರೂ ಶೀಘ್ರವೇ ಆಸ್ಪತ್ರೆಗೆ ಅಗತ್ಯ ವೈದ್ಯರ ನೇಮಕ ಆಗಬೇಕು. ಬಡ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯಬೇಕು ಎಂಬ ಆಗ್ರಹ ಸ್ಥಳೀಯರಿಂದ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ