ಗದಗ: ಸರ್ಕಾರಿ ಶಾಲೆ ಶಿಕ್ಷಕ ಶಾಲೆಗೆ ಚಕ್ಕರ್ ಹಾಕಿ ಮರಳು ದಂಧೆಯಲ್ಲಿ ಭಾಗಿ ಆರೋಪ! ಮೂರು ತಿಂಗಳಿನಿಂದ ಗಣಿತ ಪಾಠ ಕೇಳದ ಮಕ್ಕಳು

ಎಸ್ ಕೆ ಪಾಟೀಲ್ ಶಿರಹಟ್ಟಿ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿದ್ದಾರೆ. ಆದರೆ 3 ತಿಂಗಳಿಂದ ಶಾಲೆ ಕಡೆ ತಿರುಗಿ ನೋಡಿಲ್ಲ. ನವೆಂಬರ್, ಡಿಸೆಂಬರ್​ನಲ್ಲಿ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಿಲ್ಲ. ಬಳಿಕ 2 ತಿಂಗಳು ಹಾಜರಾದಂತೆ ಸಹಿ ಹಾಕಿದ್ದಾರೆ.

ಗದಗ: ಸರ್ಕಾರಿ ಶಾಲೆ ಶಿಕ್ಷಕ ಶಾಲೆಗೆ ಚಕ್ಕರ್ ಹಾಕಿ ಮರಳು ದಂಧೆಯಲ್ಲಿ ಭಾಗಿ ಆರೋಪ! ಮೂರು ತಿಂಗಳಿನಿಂದ ಗಣಿತ ಪಾಠ ಕೇಳದ ಮಕ್ಕಳು
ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು
Follow us
TV9 Web
| Updated By: sandhya thejappa

Updated on:Jan 31, 2022 | 10:08 AM

ಗದಗ: ಸರ್ಕಾರಿ ಶಾಲೆ ಶಿಕ್ಷಕನೊಬ್ಬ (Teacher) ಶಾಲೆಗೆ ರಜೆ ಹಾಕಿ ಮರಳು ದಂಧೆಯಲ್ಲಿ (Sand Mafia) ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಗದಗ (Gadag) ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎಸ್ ಕೆ ಪಾಟೀಲ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಶಿಕ್ಷಕನ ವಿರುದ್ಧ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕ ಮನಸ್ಸಿಗೆ ಬಂದಾಗ ಶಾಲೆಗೆ ಬಂದು ಹಾಜರಿ ಪುಸ್ತಕಕ್ಕೆ ಸಹಿ ಹಾಕಿ ನಂತರ ಶಾಲೆಯಿಂದ ಹೋಗುತ್ತಿದ್ದಾರಂತೆ. ಸರ್ಕಾರಿ ಸಂಬಳ ಪಡೆದರೂ ಮಕ್ಕಳಿಗೆ ಪಾಠ ಮಾಡುತ್ತಿರಲಿಲ್ಲ. ಪಾಠ ಮಾಡುವ ಬದಲು ಶಾಲೆಗೆ ರಜೆ ಹಾಕಿ ಮರಳು ದಂಧೆಯಲ್ಲಿ ಭಾಗಿಯಾಗುತ್ತಿದ್ದಾರೆ ಅಂತ ಗ್ರಾಮಸ್ಥರು ಕಿಡಿಕಾರಿದ್ದಾರೆ.

ಗಣಿತ ಪಾಠ ಕೇಳದ ಮಕ್ಕಳು: ಎಸ್ ಕೆ ಪಾಟೀಲ್ ಶಿರಹಟ್ಟಿ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿದ್ದಾರೆ. ಆದರೆ 3 ತಿಂಗಳಿಂದ ಶಾಲೆ ಕಡೆ ತಿರುಗಿ ನೋಡಿಲ್ಲ. ನವೆಂಬರ್, ಡಿಸೆಂಬರ್​ನಲ್ಲಿ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಿಲ್ಲ. ಬಳಿಕ 2 ತಿಂಗಳು ಹಾಜರಾದಂತೆ ಸಹಿ ಹಾಕಿದ್ದಾರೆ. ಒಂದೇ ದಿನ ಹಾಜರಾತಿ ಪುಸ್ತಕಕ್ಕೆ ಸಹಿ ಮಾಡಿದ್ದಾರೆ. 2 ತಿಂಗಳಿಗೆ ಒಟ್ಟಿಗೆ ಸಹಿ ಮಾಡಿ ಮತ್ತೆ ಶಾಲೆಗೆ ರಜೆ ಹಾಕಿದ್ದಾರಂತೆ. ಎಸ್ ಕೆ ಪಾಟೀಲ್ ಗಣಿತ ಪಾಠ ಮಾಡುವ ಶಿಕ್ಷಕನಾಗಿದ್ದು, ಶಾಲೆಗೆ ಗೈರಾದ ಹಿನ್ನೆಲೆ ಗಣಿತ ಪಾಠ ಹಿಂದುಳಿದಿದೆ.

ಇನ್ನು ಶಿಕ್ಷಕ ಎಸ್ ಕೆ ಪಾಟೀಲ್ರನ್ನು ನಾವು ನೋಡೇ ಇಲ್ಲ ಅಂತ ಮಕ್ಕಳು ಹೇಳುತ್ತಿದ್ದಾರೆ. ಶಿಕ್ಷಕನ ವಿರುದ್ಧ ಕ್ರಮಕ್ಕೆ ಮುಖ್ಯ ಶಿಕ್ಷಕ ಮುಂದಾಗಿದ್ದಾರೆ. ಮರಳು ದಂಧೆ ಮಾಡುವ ಶಿಕ್ಷಕನಿಗೆ ಅಧಿಕಾರಿಗಳೂ ಸಾಥ್ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 3 ತಿಂಗಳಿಂದ ಶಾಲೆಗೆ ಬರದಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಅಂತ ಗ್ರಾಮಸ್ಥರು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿ ಟಿವಿ9 ಜೊತೆ ಮಾತನಾಡಿದ ಬಿಇಓ ಆರ್ ಎಸ್ ಬುರಡಿ, ಶಿಕ್ಷಕನ ಕಳ್ಳಾಟಕ್ಕೆ ನಾನು ಸಾಥ್ ನೀಡಿಲ್ಲ. ಶಿಕ್ಷಕನ ಎಸ್​ಕೆ ಪಾಟೀಲ್ ಕಳ್ಳಾಟದ ಬಗ್ಗೆ ಟಿವಿ9 ವರದಿ ಬಳಿಕ ಗೊತ್ತಾಗಿದೆ. ನನಗೆ ಈ ಬಗ್ಗೆ ಯಾರೂ ದೂರು ನೀಡಿಲ್ಲ. ಮುಖ್ಯ ಶಿಕ್ಷಕ, ಸಿಆರ್​ಸಿಗಳು ನನಗೆ ಯಾರೂ ಮಾಹಿತಿ ನೀಡಿಲ್ಲ. ತಕ್ಷಣ ಶಾಲೆಗೆ ಭೇಟಿ ನೀಡಿ, ಪರಿಶೀಲಿಸಿ ಮೇಲಾಧಿಕಾರಿಗಳಿಗೆ ವರದಿ ನೀಡುತ್ತೇನೆ ಅಂತ ತಿಳಿಸಿದರು.

ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಅರೆಸ್ಟ್: ಬೆಂಗಳೂರು: ಬೈಕ್ ಕದಿಯುತ್ತಿದ್ದ ಮೂವರು ಆರೋಪಿಗಳನ್ನ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ.  ಬಂಧಿತರಿಂದ 3 ಲಕ್ಷ ಮೌಲ್ಯದ 6 ಬೈಕ್​ಗಳು ಮತ್ತು 6 ಮೊಬೈಲ್​ಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ಅನ್ನಪೂರ್ಣೇಶ್ವರಿ ನಗರ, ವಿಜಯನಗರ, ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ

ನಿರ್ಬಂಧಿತ ಬದುಕಿಗೆ ಕಡೆಗೂ ಸಿಕ್ತು ಬಿಗ್ ರಿಲೀಫ್; ಕೆಲವೆಡೆ ಆಕ್ರೋಶ, ಶಾಲೆಗಳತ್ತ ವಿದ್ಯಾರ್ಥಿಗಳು

Ganesh Jayanti: ಇಂದು ಗಣೇಶ ಜಯಂತಿ! ಉತ್ತರ ಕರ್ನಾಟಕದಲ್ಲಿ ಶ್ರದ್ಧಾ ಭಕ್ತಿ ಸಡಗರದ ಮಾಘ ಶುಕ್ಲ ಗಣೇಶ ಚತುರ್ಥಿ

Published On - 8:56 am, Mon, 31 January 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?