1973 ಹಾಗೂ 2023ರ ಐತಿಹಾಸಿಕ ಕಾರ್ಯಕ್ರಮದ ಗುರುತಿಗೆ 31 ಅಡಿ ಎತ್ತರದ ಸ್ಥೂಪ ನಿರ್ಮಾಣ: ಹೆಚ್​ಕೆ ಪಾಟೀಲ

ಸ್ತೂಪ ನಿರ್ಮಾಣ ಮಾಡಬೇಕು ಎನ್ನುವ ಕಲ್ಪನೆ ಹಿಂದಿನ ಕಾಲದಿಂದ ಇದ್ದರೂ, ಅನಾವರಣಗೊಳಿಸಲು ಸಾಧ್ಯವಾಗಿರಲಿಲ್ಲ. ಸ್ತೂಪದಲ್ಲಿ 1973 ಹಾಗೂ 2023ರ ಐತಿಹಾಸಿಕ ಘಟನೆಗಳನ್ನು ಹಾಗೂ ಇತರೆ ಪ್ರಮುಖ ಮಾಹಿತಿಗಳನ್ನು ದಾಖಲಾಗಿರುತ್ತದೆ. ನವೆಂಬರ 3 ರಂದು ಸಿಎಂ ಸಿದ್ದರಾಮಯ್ಯ ಅವರು ಪಂ.ಪುಟ್ಟರಾಜ ಗವಾಯಿಗಳ ವೃತ್ತದಲ್ಲಿನ ಈ ಸ್ಥೂಪವನ್ನು ಅನಾವರಣಗೊಳಿಸಲಿದ್ದಾರೆ ಎಂದರು.

1973 ಹಾಗೂ 2023ರ ಐತಿಹಾಸಿಕ ಕಾರ್ಯಕ್ರಮದ ಗುರುತಿಗೆ 31 ಅಡಿ ಎತ್ತರದ ಸ್ಥೂಪ ನಿರ್ಮಾಣ: ಹೆಚ್​ಕೆ ಪಾಟೀಲ
ಸಚಿವ ಹೆಚ್​ಕೆ ಪಾಟೀಲ್​
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ವಿವೇಕ ಬಿರಾದಾರ

Updated on: Oct 30, 2023 | 9:27 PM

ಗದಗ ಅ.30: ಐತಿಹಾಸಿಕ ಕಾರ್ಯಕ್ರಮ ನಡೆದಾಗ ವಿಶೇಷ ಗುರುತುಗಳನ್ನು ನಿರ್ಮಿಸಬೇಕು. ಆದ್ದರಿಂದ ಕರ್ನಾಟಕ ಸಂಭ್ರಮ-50ರ (Karnataka 50) ಸಂಭ್ರಮವನ್ನು ಅಚ್ಚಳಿಯದ ಹಾಗೆ ನೆನಪಿನಲ್ಲಿಟ್ಟುಕೊಳ್ಳುವಂತಾಗಲು ಗದಗ (Gadag) ಜಿಲ್ಲಾಡಳಿತ ಆಸಕ್ತಿ ವಹಿಸಿ 31 ಅಡಿ ಎತ್ತರದ ಸ್ತೂಪ ನಿರ್ಮಿಸಲು ನಿರ್ಣಯ ಕೈಗೊಂಡಿದೆ ಎಂದು ಕಾನೂನು ಸಚಿವ ಡಾ.ಹೆಚ್.ಕೆ.ಪಾಟೀಲ ಅವರು ತಿಳಿಸಿದರು.

ನಗರದ ದಿ.ಕಾಟನ್ ಸೇಲ್ ಸೋಸೈಟಿಯಲ್ಲಿ, ಮಾತನಾಡಿದ ಅವರು ಸ್ತೂಪ ನಿರ್ಮಾಣ ಮಾಡಬೇಕು ಎನ್ನುವ ಕಲ್ಪನೆ ಹಿಂದಿನ ಕಾಲದಿಂದ ಇದ್ದರೂ, ಅನಾವರಣಗೊಳಿಸಲು ಸಾಧ್ಯವಾಗಿರಲಿಲ್ಲ. ಸ್ತೂಪದಲ್ಲಿ 1973 ಹಾಗೂ 2023ರ ಐತಿಹಾಸಿಕ ಘಟನೆಗಳನ್ನು ಹಾಗೂ ಇತರೆ ಪ್ರಮುಖ ಮಾಹಿತಿಗಳನ್ನು ದಾಖಲಾಗಿರುತ್ತದೆ. ನವೆಂಬರ 3 ರಂದು ಸಿಎಂ ಸಿದ್ದರಾಮಯ್ಯ ಅವರು ಪಂ.ಪುಟ್ಟರಾಜ ಗವಾಯಿಗಳ ವೃತ್ತದಲ್ಲಿನ ಈ ಸ್ಥೂಪವನ್ನು ಅನಾವರಣಗೊಳಿಸಲಿದ್ದಾರೆ ಎಂದರು.

ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ಹೆಸರು ನಾಮಕರಣ ಮಾಡಬೇಕು ಎಂಬ ದಿಸೆಯಲ್ಲಿ ಗದಗ ಭಾಗದವರು ವಿಶೇಷ ಪ್ರಯತ್ನ ಮಾಡಿದ್ದಾರೆ. ಕುಮಾರವ್ಯಾಸ ಅವರು ತಮ್ಮ ಕಾವ್ಯಕ್ಕೆ ಕರ್ನಾಟಕ ಭಾರತ ಕಥಾಮಂಜರಿ ಹೆಸರು ನೀಡಿದ್ದರೆ, ದುರ್ಗಸಿಂಹ ಹಾಗೂ ಅಲೂರು ವೆಂಕಟರಾಯರು ಕರ್ನಾಟಕ ಹೆಸರನ್ನು ಉಲ್ಲೇಖಿಸಿದ್ದಾರೆ. ಜಿಲ್ಲೆಯ ಅಂದಿನ ಪ್ರಮುಖರಾದ ಅಂದಾನಪ್ಪ ದೊಡ್ಡಮೇಟಿ, ಕೆ.ಎಚ್. ಪಾಟೀಲ, ಎಂ.ಎಂ. ಕಣವಿ, ಸೇರಿ ಹಲವರು ಕೆಲಸ ಕರ್ನಾಟಕ ಹೆಸರು ನಾಮಕರಣವಾಗಲು ಶ್ರಮಿಸಿದ್ದಾರೆ. ಅಲ್ಲದೇ, ಇಂದಿರಾ ಗಾಂಧಿ, ರಾಜೀವ ಗಾಂಧಿ ಹಾಗೂ ಸಾಯಿ ಬಾಬಾ ಅವರು ಸಾಕ್ಷಿಯಾಗಿರುವಂತಹ ಸತ್ವಯುತ ದಿ. ಕಾಟನ್ ಸೇಲ್ ಸೊಸೈಟಿ ಆವರಣದ ನೆಲದಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದ್ದು, ಸಾರ್ವಜನಿಕರ ಸಹಭಾಗಿತ್ವ ಪ್ರಾಮುಖ್ಯತೆ ಪಡೆದಿದೆ ಎಂದರು.

ರಾಜ್ಯದ ಒಂದು ಕೊಟಿಗೂ ಅಧಿಕ ಬಡ ಕುಟುಂಬಗಳನ್ನು ಬಡತನ ರೇಖೆಗಿಂತ ಮೇಲೆತ್ತುವ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ ನಂತರ ಪ್ರಥಮವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಜರುಗುತ್ತಿರುವ ಕನ್ನಡ ಜಾತ್ರೆಗೆ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು, ಸಾಹಿತಿಗಳು, ಸಾರ್ವಜನಿಕರು ಭಾಗವಹಿಸುವದರ ಮೂಲಕ ಕನ್ನಡ ಜಾತ್ರೆಯನ್ನು ಯಶಸ್ವಿಗೊಳಸಿವಂತೆ ಸಚಿವ ಎಚ್.ಕೆ.ಪಾಟೀಲ ಮನವಿ ಮಾಡಿದರು.

ಇದನ್ನೂ ಓದಿ: Kannada Rajyotsava 2023: ಈ ಬಾರಿ 10 ಸಂಘ ಸಂಸ್ಥೆಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ

ಕರ್ನಾಟಕ ಸಂಭ್ರಮ-50 ಕಾರ್ಯಕ್ರಮದ ನಂತರ 450 ಹಾಸಿಗೆಯುಳ್ಳ ಜಿಮ್ಸ್ ಕಟ್ಟಡ, ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆಪರೇಷನ್ ಥಿಯೇಟರ್ ಉದ್ಘಾಟನೆ, ಆರ್‍ಡಿಪಿಆರ್ ವಿಶ್ವವಿದ್ಯಾಲಯಕ್ಕೆ ಭೇಟಿ, ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸಂಜೆ 4ಕ್ಕೆ ನಿರ್ಗಮಿಸವರು ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಸ್ಮಾರಕಗಳ ದತ್ತು ಸ್ವೀಕಾರ: ನಾಡಿನ ಸಂಸ್ಕತಿ ಇತಿಹಾಸ ಸಾರುವ 25 ಸಾವಿರ ಸ್ಮಾರಕಗಳಿವೆ. 500 ಕ್ಕೂ ಹೆಚ್ಚು ಸ್ಮಾರಕಗಳನ್ನು ಸರ್ಕಾರ ಘೋಷಿಸಿದ್ದು. 300 ಸ್ಮಾರಕಗಳ ರಕ್ಷಣೆಗೆ ನಿಗಾ ಇರಿಸಲಾಗಿದೆ. 200 ಕ್ಕೂ ಹೆಚ್ಚು ಸ್ಮಾರಕಗಳ ರಕ್ಷಣೆ ಆಗಬೇಕಾಗಿದೆ.  ಇಂತಹ ಇತಿಹಾಸವನ್ನು ಸಾರುವ ಸ್ಮಾರಕಗಳ ರಕ್ಷಣೆಗೆ ನವೆಂಬರನಲ್ಲಿ ಘೋಷಣೆ ಮಾಡಲಿದ್ದೇವೆ ಎಂದರು. ಈಗಾಗಲೇ ಸ್ಮಾರಕ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳು ಚಾಲನೇ ನೀಡಿದ್ದು ರಾಜ್ಯದಲ್ಲಿನ ಸ್ಮಾರಕಗಳ ದತ್ತು ಸ್ವೀಕಾರ ಕುರಿತು ಅನಿವಾಸಿ ಭಾರತಿಯರೊಂದಿಗೆ ಸಭೆ ಜರುಗಿಸಿ ಸ್ಮಾರಕಗಳ ದತ್ತು ಸ್ವೀಕಾರ ಕುರಿತು ಮನವಿ ಮಾಡಿರುತ್ತೇನೆ ಎಂದರು.

ಸ್ಮಾರಕ ಸಂರಕ್ಷಣೆಗಾಗಿ ಪ್ರವಾಸ: ನ.6ರಿಂದ ನಮ್ಮ ಸ್ಮಾರಕ ದರ್ಶನ ಹಾಗೂ ಅವುಗಳ ಸಂರಕ್ಷಣೆಗಾಗಿ ಬಸವಕಲ್ಯಾಣದಿಂದ ಪ್ರವಾಸ ಆರಂಭಿಸಲಿದ್ದೇನೆ. ಬಸವಕಲ್ಯಾಣ, ಬಾಲ್ಕಿ, ಬೀದರ, ಕಲಬುರಗಿಯ ನಾಗಾವಿಯಲ್ಲಿ 10ನೇ ಶತಮಾನದ ವಿಶ್ವವಿದ್ಯಾಲಯವಿದ್ದು, ಅಲ್ಲಿನ ಘಟಿಕೋತ್ಸವ ಸಭಾಂಗಣದ ದರ್ಶನ, ಸ್ವಚ್ಚತೆಯ ಜೊತೆಗೆ ದತ್ತು ಪಡೆಯುವ ಯೋಜನೆ ಆರಂಭವಾಗಲಿದೆ. ಅಲ್ಲಿಂದ ಮಳಖೇಡ, ಸೇಡಂ, ಯಾದಗಿರಿಯ ಸಿರಿವಾಳ ದೇವಾಲಯಗಳ ಸಮುಚ್ಛಾಲಯಕ್ಕೆ ಭೇಟಿ ನೀಡಿ, ಶಹಪೂರ ದ್ವಾರಬಾಗಿಲ ವೀಕ್ಷಣೆ, ಮಲಗಿದ ಬುದ್ದ ವೀಕ್ಷಣೆ, ನಂತರ ಯಾದಗಿರಿಯ ಕೋಟ ವೀಕ್ಷಣೆ ಮಾಡಲಿದ್ದೇನೆ. ಸರಕಾರದ ಜೊತೆಗೆ ಸಾರ್ವಜನಿಕರು ಸ್ಮಾರಕಗಳ ರಕ್ಷಣೆಗೆ ಕೈಜೋಡಿಸಬೇಕಿದೆ. ನಮ್ಮ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಬೇಕಿದೆ ಎಂದು ಹೇಳಿದರು.

ಗಡಿ ವಿಚಾರಣೆ ಮುಂದೂಡಿಕೆ: ಸೂಪ್ರೀಂ ಕೋರ್ಟನಲ್ಲಿ ನವೆಂಬರ 1 ರಂದು ನಡೆಯಬೇಕಿದ್ದ ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಪ್ರಕರಣದ ವಿಚಾರಣೆಯನ್ನು 2024ರ ಜನೆವರಿ ತಿಂಗಳಿನಲ್ಲಿ ಮುಂದೂಡಲಾಗಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿವಿವಾದ ಪ್ರಕರಣದ ವಿಚಾರಣೆಯನ್ನು ಜನೇವರಿ ತಿಂಗಳಿನಲ್ಲಿ ತೆಗೆದುಕೊಳ್ಳಲು ನ್ಯಾಯಾಧೀಶರು ಸೂಚನೆ ಕೊಟ್ಟಿದ್ದಾರೆ ಎಂದು ವಿವರಿಸಿದರು. ಗಡಿ ವಿಚಾರವಾಗಿ ಶಿವರಾಜ ಪಾಟೀಲ ಅವರ ನೇತೃತ್ವದ ಸಮಿತಿ ಇದ್ದು, ನಮ್ಮ ನಿಲುವುಗಳನ್ನು ತೆಗೆದುಕೊಳ್ಳಲು, ಸ್ಪಷ್ಟಪಡಿಸಲು ಸಮಯಾವಕಾಶ ದೊರೆತಂತಾಗಿದೆ. ಕನ್ನಡಪರ ಹೋರಾಟಗಾರರು, ವಿಶೇಷ ಆಸಕ್ತಿಯುವಳ್ಳವರು ಹಾಗೂ ಜ್ಞಾನವನ್ನು ಹೊಂದಿರುವವರ ಜೊತೆಗೆ ಸಮಾಲೋಚನೆ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್