AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janardhan Reddy: ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್, ಶಾಸಕ ಸ್ಥಾನದಿಂದ ಅನರ್ಹ

ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್​​ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರಿಂದ ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ. ಏಳು ವರ್ಷ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಗೊಂಡಿದ್ದಾರೆ. ಇದರಿಂದ ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.

Janardhan Reddy: ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್,  ಶಾಸಕ ಸ್ಥಾನದಿಂದ ಅನರ್ಹ
Janardhan Reddy
ರಮೇಶ್ ಬಿ. ಜವಳಗೇರಾ
|

Updated on:May 08, 2025 | 10:32 PM

Share

ಬೆಂಗಳೂರು, (ಮೇ 08): ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ(Obulapuram mining case) ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (janardhan reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಹೇಗಾದರೂ ಮಾಡಿ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ ಮುಂದೆ ಅಂಗಲಾಚಿ ಬೇಡಿಕೊಂಡಿದ್ದರು. ಆದ್ರೆ, ಕೋರ್ಟ್​ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಇದನ್ನೂ ಓದಿ: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ಮತ್ತೊಮ್ಮೆ ಚಂಚಲಗೂಡ ಜೈಲಿಗೆ ಶಿಫ್ಟ್​

ಗಂಗಾವತಿ ಕ್ಷೇತ್ರಕ್ಕೆ ಬೈ ಎಲೆಕ್ಷನ್

ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಕೋರ್ಟ್​, ಜನಾರ್ದನ ರೆಡ್ಡಿ ಅನುಮಾತಿ ಕೊಟ್ಟಿರಲಿಲ್ಲ. ಹೀಗಾಗಿ ರೆಡ್ಡಿ ಕೆಆರ್​ಎಸ್​ ಪಕ್ಷವನ್ನು ಕಟ್ಟಿ ಅದರಿಂದಲೇ ​ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ತಮ್ಮ ಸಮೀಪ ಸ್ಪರ್ಧಿ ಕಾಂಗ್ರೆಸ್​ನ ಇಕ್ಬಾಲ್​ ಅನ್ಸಾರಿ ಅವರನ್ನು ಸೋಲಿಸಿ ಮತ್ತೆ ರಾಜಕೀಯ ಪುನರ್ಜನ್ಮ ಪಡೆದುಕೊಂಡಿದ್ದರು. ಆದರೆ, ಇದೀಗ ರೆಡ್ಡಿ ತಮ್ಮ ಶಾಸಕ ಸ್ಥಾನ ಕಳೆದುಕೊಂಡಿದ್ದರಿಂದ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.

ಇದನ್ನೂ ಓದಿ
Image
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
Image
ಅಂಗಲಾಚಿದರೂ ಕೇಳದ ಕೋರ್ಟ್:ರೆಡ್ಡಿ ಮತ್ತೆ ಜೈಲಿಗೆ, ಶಾಸಕ ಸ್ಥಾನಕ್ಕೆ ಕುತ್ತು
Image
ರಾಜಕಾರಣ ಮತ್ತು ಪಕ್ಷದ ಬಗ್ಗೆ ಮಾತಾಡಲ್ಲವೆಂದ ಜನಾರ್ಧನ ರೆಡ್ಡಿ
Image
ಬಿಡುಗಡೆಯಾಗದ ಆನೆಗೊಂದಿ ಉತ್ಸವ ಹಣ: ತಂಗಡಗಿ, ರೆಡ್ಡಿ ನಡುವೆ ಟಾಕ್ ಪೈಟ್​​

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 pm, Thu, 8 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ