ಗಣೇಶ ಹಬ್ಬದ ಪ್ರಯುಕ್ತ ಬೆಳಗಾವಿ ಯಶವಂತಪುರ ನಡುವೆ ಸಂಚರಿಸಲಿವೆ ವಿಶೇಷ ರೈಲುಗಳು; ಇಲ್ಲಿದೆ ವಿವರ

Special Trains for Ganesh Chaturthi; ಗಣೇಶ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯು ಬೆಳಗಾವಿ ಹಾಗೂ ಯಶವಂತಪುರ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ.ವಿಶೇಷ ರೈಲುಗಳು ಯಾವಾಗ ಯಶವಂತಪುರದಿಂದ ಹೊರಟು ಯಾವಾಗ ಬೆಳಗಾವಿ ತಲುಪಲಿವೆ? ಅದೇ ರೀತಿ ಬೆಳಗಾವಿಯಿಂದ ಹೊರಡುವ ರೈಲು ಯಾವಾಗ ಯಶವಂತಪುರ ತಲುಪಲಿವೆ? ಪೂರ್ಣ ವಿವರ ಇಲ್ಲಿದೆ.

ಗಣೇಶ ಹಬ್ಬದ ಪ್ರಯುಕ್ತ ಬೆಳಗಾವಿ ಯಶವಂತಪುರ ನಡುವೆ ಸಂಚರಿಸಲಿವೆ ವಿಶೇಷ ರೈಲುಗಳು; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
| Edited By: TV9 Digital Desk

Updated on:Sep 19, 2023 | 9:58 AM

ಬೆಳಗಾವಿ, ಸೆಪ್ಟೆಂಬರ್ 14: ಗಣೇಶ ಹಬ್ಬದ (Ganesh Chaturthi) ಪ್ರಯುಕ್ತ ನೈಋತ್ಯ ರೈಲ್ವೆಯು (South Western Railway) ಬೆಳಗಾವಿ ಹಾಗೂ ಯಶವಂತಪುರ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದ್ದು, ಪ್ರಯಾಣಿಕರಿಗೆ ನೆರವಾಗಲಿದೆ. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು ರೈಲ್ವೆ ಇಲಾಖೆಯೊಂದಿಗೆ ಮಾತುಕತೆ ನಡೆಸಿ ಹಬ್ಬದ ಪ್ರಯುಕ್ತ ಹೆಚ್ಚುವರಿ ರೈಲು ಸಂಚಾರ ಒದಗಿಸುವಂತೆ ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿರುವ ಇಲಾಖೆ, ವಿಶೇಷ ರೈಲುಗಳ ವೇಳಾಪಟ್ಟಿ ಪ್ರಕಟಿಸಿದೆ.

ಈರಣ್ಣ ಕಡಾಡಿ ನೀಡಿರುವ ಮಾಹಿತಿಯ ಪ್ರಕಾರ, ಯಶವಂತಪುರ-ಬೆಳಗಾವಿ (07389) ರೈಲು ಸೆಪ್ಟೆಂಬರ್ 15 ರಂದು ಸಂಜೆ 6.15 ಕ್ಕೆ ಯಶವಂತಪುರದಿಂದ ಹೊರಟು ಸೆಪ್ಟೆಂಬರ್ 16 ರಂದು ಬೆಳಿಗ್ಗೆ 6 ಗಂಟೆಗೆ ಬೆಳಗಾವಿ ತಲುಪಲಿದೆ. ಬೆಳಗಾವಿ-ಯಶವಂತಪುರ (07390) ರೈಲು ಸೆಪ್ಟೆಂಬರ್ 16ರಂದು ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಡಲಿದೆ ಮತ್ತು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 4.30 ಕ್ಕೆ ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 07391 ಸೆಪ್ಟೆಂಬರ್ 17 ರಂದು ಸಂಜೆ 6.15 ಕ್ಕೆ ಯಶವಂತಪುರದಿಂದ ಹೊರಟು ಸೆಪ್ಟೆಂಬರ್ 18 ರಂದು ಬೆಳಿಗ್ಗೆ 6 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ. ರೈಲು ಸಂಖ್ಯೆ 07392 ಸೆಪ್ಟೆಂಬರ್ 18 ರಂದು ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಟು 19 ರಂದು ಬೆಳಿಗ್ಗೆ 4.30 ಕ್ಕೆ ಯಶವಂತಪುರ ತಲುಪಲಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಿಂದ ಹಬ್ಬಕ್ಕಾಗಿ ತವರು ಜಿಲ್ಲೆಗೆ ಮರಳುವವರ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ವಿಶೇಷ ರೈಲುಗಳಿಂದ ಪ್ರಯಾಣಿಕರಿಗೆ ಅನುಕೂಲವಾಗಲಿವೆ.

ಇದನ್ನೂ ಓದಿ: Ganesh Chaturthi; ಗಣೇಶ ಚತುರ್ಥಿ ಹಬ್ಬಕ್ಕೆ ಸಿದ್ಧತೆ ಜೋರು; ಬೆಳಗಾವಿಯ ಮಾರುಕಟ್ಟೆಯಲ್ಲಿ ಭರ್ಜರಿ ವಹಿವಾಟು

ಗಣೇಶ ಹಬ್ಬದ ಪ್ರಯುಕ್ತ 1200 ವಿಶೇಷ ಬಸ್​​ಗಳು ರಾಜ್ಯದ ವಿವಿಧ ಕಡೆಗಳಿಗೆ ಕಾರ್ಯಾಚರಣೆ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈಗಾಗಲೇ ತಿಳಿಸಿದೆ.

ಬೆಳಗಾವಿಯಲ್ಲಿ ಗಣೇಶ ಹಬ್ಬಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಬೆಳಗಾವಿ ನಗರದ ನಿವಾಸಿಗಳಲ್ಲದೆ, ಜಿಲ್ಲೆಯ ವಿವಿಧ ಭಾಗಗಳಿಂದ ಮತ್ತು ನೆರೆಯ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಜನರು ಸರಕುಗಳನ್ನು ಖರೀದಿಸಲು ನಗರದ ಮಾರುಕಟ್ಟೆಗೆ ಭೇಟಿ ನೀಡುತ್ತಾರೆ. ಹಬ್ಬ ಹರಿದಿನಗಳ ವಿವಿಧ ಅಲಂಕಾರಿಕ ವಸ್ತುಗಳು ಮತ್ತು ವಿದ್ಯುತ್ ಉಪಕರಣಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ. ಬೆಳಗಾವಿ ನಗರದಲ್ಲಿ 400ಕ್ಕೂ ಹೆಚ್ಚು ಹಾಗೂ ಜಿಲ್ಲೆಯಾದ್ಯಂತ 5,300ಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುವುದು. ಶಾಂತಿ ಸೌಹಾರ್ದತೆಯೊಂದಿಗೆ ಗಣೇಶ ಹಬ್ಬವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಲು ಪೊಲೀಸ್ ಇಲಾಖೆಯು ಗ್ರಾಮ/ಪಟ್ಟಣಕ್ಕೆ ಒಂದೊಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತೆ ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಸ್ಥಳೀಯಾಡಳಿತ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Thu, 14 September 23

ತಾಜಾ ಸುದ್ದಿ
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್