
ಬೆಂಗಳೂರು, ಆಗಸ್ಟ್ 22: ಗೌರಿ- ಗಣೇಶ ಹಬ್ಬ (Gauri-Ganesha Festival) ಅಂತ ಬೆಂಗಳೂರಿನಿಂದ (Bengaluru) ಅನೇಕ ಜನರು ತಮ್ಮ ಊರಿಗೆ ಹೋಗಲು ಸಜ್ಜಾಗಿದ್ದಾರೆ. ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಆಗಸ್ಟ್ 25 ರಿಂದ 31ರವರೆಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆಯನ್ನು ಮಾಡಿದೆ. ಸೋಮವಾರ (ಆಗಸ್ಟ್ 25) ರಿಂದ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ 1500 ಬಸ್ಗಳನ್ನು ಓಡಿಸಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಆಗಸ್ಟ್ 26 ಮಂಗಳವಾರ ಸ್ವರ್ಣಗೌರಿ ಹಬ್ಬ, 27 ಎಂದು ಬುಧವಾರ ಗಣೇಶ ಚತುರ್ಥಿ ಹಬ್ಬ ಇರುವುದರಿಂದ ರಜೆ ಇರುತ್ತದೆ. ಬೆಂಗಳೂರು, ಮಂಗಳೂರು, ಪುಣೆ, ಮುಂಬೈ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ತೆರಳುತ್ತಾರೆ. ಬೆಂಗಳೂರಿಗೆ ವಾಪಸ್ಸು ಬರಲು 27 ಬುಧವಾರ ದಿಂದ 31 ಭಾನುವಾರದವರೆಗೆ ವಿಶೇಷ ವಾಹನಗಳನ್ನು ಓಡಿಸಲಾಗುತ್ತದೆ.
ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ಗಳು ತೆರಳುತ್ತವೆ.
ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗವಾಗಿ ತೆರಳುತ್ತವೆ.
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕಲ್ಲಿಕೋಟೆಗೆ ತೆರಳುತ್ತವೆ.
ಇದನ್ನೂ ಓದಿ: BMTC ಬಸ್ ಚಾಲಕರಿಗೆ ಹೊಸ ನಿಯಮ: 2 ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.
Published On - 5:46 pm, Fri, 22 August 25