Ganesh Chaturthi Guidelines 2021: ಗಣೇಶ ಚತುರ್ಥಿ, ಮೊಹರಂ ಆಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್​ಲೈನ್ಸ್

| Updated By: Digi Tech Desk

Updated on: Aug 13, 2021 | 9:58 AM

Guidelines for Ganesh Chaturthi and Moharrum 2021: ಕೊವಿಡ್ ಕಾಲದಲ್ಲಿ ಗಣೇಶ ಚತುರ್ಥಿ ಮತ್ತು ಮೊಹರಂ ಆಚರಣೆಗೆ ಸರ್ಕಾರ ನಿಯಮಾವಳಿ ಬಿಡುಗಡೆಗೊಳಿಸಿದೆ.

Ganesh Chaturthi Guidelines 2021: ಗಣೇಶ ಚತುರ್ಥಿ, ಮೊಹರಂ ಆಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್​ಲೈನ್ಸ್
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಗಣೇಶ ಚತುರ್ಥಿ ಮತ್ತು ಮೊಹರಂ ( Mohurrum 2021) ಆಚರಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿನ ಹಬ್ಬಗಳಿಗೆ ಗೈಡ್ಲೈನ್ಸ್ ಹೊರಡಿಸಲಾಗಿದ್ದು, ಹಬ್ಬಗಳಲ್ಲಿ ಕೊರೊನಾ ನಿಯಮ ಪಾಲಿಸುವಂತೆ ಆದೇಶಿಸಲಾಗಿದೆ.ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬ (Ganesh Chaturthi Guidelines 2021) ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ನಡೆಸಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇಗುಲಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಹೊರಾಂಗಣದಲ್ಲಿ ಚಪ್ಪರ, ಪೆಂಡಾಲ್ ಹಾಕುವಂತಿಲ್ಲ. ಚಪ್ಪರ, ಪೆಂಡಾಲ್, ಶಾಮಿಯಾನದ ವೇದಿಕೆ ನಿರ್ಮಿಸುವಂತಿಲ್ಲ. ವಿಸರ್ಜನೆ ವೇಳೆ ಮನರಂಜನೆ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ನಿಯಮ ಜಾರಿಗೊಳಿಸಿದೆ.

ಮೊಹರಂ ಆಚರಣೆಗೆ ರಾಜ್ಯ ಸರ್ಕಾರದಿಂದ ರೂಪಿಸಿರುವ ಗೈಡ್​​ಲೈನ್ಸ್ ಇಂತಿದೆ: ​
ಮೊಹರಂ ಪ್ರಾರ್ಥನಾ ಸಭೆ, ಮೆರವಣಿಗೆಗೆ ನಿಷೇಧಿಸಲಾಗಿದೆ. ಸೂಕ್ತ ದೈಹಿಕ ಅಂತರ ಪಾಲಿಸಿ ಕನಿಷ್ಠ ಸಂಖ್ಯೆಯಲ್ಲಿ ಭಾಗಿಯಾಗಬಹುದಾಗಿದೆ.  ಆಲಂ/ಪಂಜಾ, ತಾಜಿಯತ್​​ಗಳನ್ನು ಜನರು ಮುಟ್ಟುವಂತಿಲ್ಲ. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್​ ಧರಿಸುವುದು ಕಡ್ಡಾಯವಾಗಿದೆ. ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ 10 ವರ್ಷದೊಳಗಿನವರು, 60 ವರ್ಷ ಮೇಲ್ಪಟ್ಟವರು ಸೂಚನೆ ನೀಡಲಾಗಿದೆ. ಪ್ರಾರ್ಥನೆ ವೇಳೆ ಕನಿಷ್ಠ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದು ರಾಜ್ಯ ಸರ್ಕಾರ ಪ್ರಕಟಿಸಿರುವ ನಿಯಮಾವಳಿಯಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: 

World Elephant Day 2021: ವಾವ್​! ತಮ್ಮ ದಿನವನ್ನು ಆಚರಿಸಲು 1300 ಕಿ.ಮೀ ನಡೆದು ತವರಿಗೆ ಬಂದ ಆನೆಗಳು

World Elephant Day 2021: ಕಾಡುಗಳಲ್ಲಿ ಅಲೆಯುವಾಗ ಕ್ಯಾಮೆರಾ ಕಣ್ಣಿಗೆ ಸಿಕ್ಕ ಆನೆಗಳು

(Ganesh Chaturthi Guidelines 2021 Issues by Karnataka Government to celebrate mohurrum and Ganesh Festival)

Published On - 6:01 pm, Thu, 12 August 21