AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಗಂಗಾವತಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 10 ಆರೋಪಿಗಳ ಬಂಧನದ ಬೆನ್ನಲ್ಲೇ ಹೊರಬಂತು ಸತ್ಯ!

ಜಿಲ್ಲೆಯ ಗಂಗಾವತಿ ನಗರವನ್ನು ಬೆಚ್ಚಿಬೀಳಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಮೃತರ ಸ್ನೇಹಿತ ರವಿಯೇ ಆರೊಪಿಯಿರಬಹುದು ಎಂಬ ಶಂಕೆ ಈ ಹಿಂದೆ ವ್ಯಕ್ತವಾಗಿತ್ತು. ಇದೀಗ ದೃಢಪಟ್ಟಿದೆ. ಈ ಪ್ರಕರಣದ ಹಿನ್ನೆಲೆ ಪ್ರಮುಖ ಆರೋಪಿ ರವಿ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.

ಗಂಗಾವತಿ: ಗಂಗಾವತಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 10 ಆರೋಪಿಗಳ ಬಂಧನದ ಬೆನ್ನಲ್ಲೇ ಹೊರಬಂತು ಸತ್ಯ!
ಮಹತ್ತರ ತಿರುವು ಪಡೆದ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ ಪ್ರಕರಣದ ಶಂಕಿತ ಆರೋಪಿ ರವಿ ಸೇರಿ 10 ಆರೋಪಿಗಳ ಬಂಧನ
ಶಿವಕುಮಾರ್ ಪತ್ತಾರ್
| Updated By: ಭಾವನಾ ಹೆಗಡೆ|

Updated on: Oct 27, 2025 | 3:00 PM

Share

ಕೊಪ್ಪಳ, ಅಕ್ಟೋಬರ್ 27: ಜಿಲ್ಲೆಯ ಗಂಗಾವತಿ ನಗರವನ್ನು ಬೆಚ್ಚಿಬೀಳಿಸಿದ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಮೃತರ ಸ್ನೇಹಿತ ರವಿಯೇ ಆರೊಪಿಯಿರಬಹುದು ಎಂಬ ಶಂಕೆ ಈ ಹಿಂದೆ ವ್ಯಕ್ತವಾಗಿತ್ತು. ಇದೀಗ 19 ದಿನಗಳ ನಂತರ ಆತನೇ ಕೊಲೆಗಾರನೆಂದು ದೃಢಪಟ್ಟಿದೆ. ಈ ಪ್ರಕರಣದ ಹಿನ್ನೆಲೆ ಪ್ರಮುಖ ಆರೋಪಿ ರವಿ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.

ವೆಂಕಟೇಶ್ ಹತ್ಯೆಗೆ ಬಳ್ಳಾರಿಯಲ್ಲಿ ಮಾಸ್ಟರ್ ಪ್ಲಾನ್

ಅಕ್ಟೋಬರ್ 8ರ ತಡರಾತ್ರಿ ಗಂಗಾವತಿಯ ರಸ್ತೆಯಲ್ಲಿ ದುಷ್ಕರ್ಮಿಗಳು ಕಾರಿನಲ್ಲಿ ಹಿಂಬಾಲಿಸಿ ವೆಂಕಟೇಶ್ ಅವರನ್ನು ಕೊಚ್ಚಿ ಕೊಲೆ ಮಾಡಿದ್ದರು. ಪ್ರಾಥಮಿಕ ತನಿಖೆಯಲ್ಲಿ ಹಳೆಯ ದ್ವೇಷವೇ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿತ್ತು. ಈಗ ತನಿಖೆಯಿಂದ ಆರೋಪಿಗಳು ಬಳ್ಳಾರಿಯಲ್ಲಿ ಈ ಹತ್ಯೆಗೆ ಸಂಚು ಹಾಕಿದ್ದರು ಎಂಬ ಸ್ಪೋಟಕ ಸತ್ಯ ಹೊರಬಿದ್ದಿದೆ. ಪ್ರಮುಖ ಆರೋಪಿ ರವಿ, ಹಂತಕರಾದ ಗೌಳಿ ಗಂಗಾಧರ ಹಾಗೂ ಇತರರೊಂದಿಗೆ ಸಂಚು ರೂಪಿಸಿದ್ದು, ಅದರಂತೆಯೇ ಗಂಗಾವತಿಯಲ್ಲಿ ಕೊಲೆ ಮಾಡಿದ್ದಾರೆ.

ಕೊಲೆ ಮಾಡಿ ತಲೆಮರಿಸಿಕೊಂಡಿದ್ದ ರವಿ ಪೊಲೀಸರ ವಶಕ್ಕೆ

ಕೊಲೆ ಬಳಿಕ ರವಿ ಮೊಬೈಲ್ ಇಲ್ಲದೆ ತಿರುಪತಿ ಸೇರಿದಂತೆ ನಾನಾ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ. ಮೊಬೈಲ್ ಫೋನ್ ಇಲ್ಲದೆ ಆತನ ಹಾದಿ ಪತ್ತೆ ಹಚ್ಚಲು ಪೊಲೀಸರು ಕಷ್ಟಪಟ್ಟಿದ್ದರು. ರವಿಯು ತನ್ನ ಪತ್ನಿ ಚೈತ್ರಾಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕೆಯಿಂದ ಖರ್ಚಿಗೆ ಹಣ ಪಡೆಯುತ್ತಿದ್ದ ಕಾರಣ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದರು. ಕೊನೆಗೂ ಆಕೆಯ ಬಂಧನದ ನಂತರ ಪೊಲೀಸರು ರವಿಯನ್ನು ಬಳ್ಳಾರಿ ಹೊರವಲಯದಲ್ಲಿ ಟ್ರ್ಯಾಪ್ ಮಾಡಿ ಅರೆಸ್ಟ್ ಮಾಡಿದ್ದಾರೆ. ಇಲ್ಲಿಯ ವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್, ಧನರಾಜ್, ಭರತ್ , ಸಲೀಂ, ಕಾರ್ತಿಕ್, ಮುಹಮ್ಮದ್ ಅಲ್ತಾಫ್, ದಾದಾಪೀರ, ರವಿ ಪತ್ನಿ ಚೈತ್ರಾ ಮತ್ತು ಇತ್ತೀಚಿನ ಬಂಧಿತರಾದ ರವಿ ಹಾಗೂ ಗಂಗಾಧರ ಸೇರಿ ಒಟ್ಟು 10 ಮಂದಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ ಗಂಗಾವತಿ: ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ

ಈಗಾಗಲೇ ರವಿ ಮೇಲೆ ಕೊಲೆ, ಕೊಲೆ ಯತ್ನ ಮತ್ತು ದೋಂಬಿ ಗಲಾಟೆ ಸೇರಿ 15ಕ್ಕೂ ಹೆಚ್ಚು ಕೇಸ್‌ಗಳಿವೆ. ಗೌಳಿ ಗಂಗಾಧರ ಮೇಲೂ 8 ಕೇಸ್ ದಾಖಲಾಗಿವೆ. ಕೊಪ್ಪಳ ಎಸ್‌ಪಿ ಡಾ. ರಾಮ್ ಅರಸಿದ್ದಿ ಈ 10 ಮಂದಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈ ಪ್ರಕರಣ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿತ್ತು . ರವಿ ಬಂಧನದೊಂದಿಗೆ ಪ್ರಕರಣದ ತನಿಖೆಗೆ ವೇಗ ಬಂದಿದೆ ಮತ್ತು ಶೀಘ್ರದಲ್ಲೇ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ