AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರವಾಗಿ ಹತ್ಯೆಯಾಗಿದ್ದು, ಎಲ್ಲರೂ ಬೆಚ್ಚಿಬೀಳುವಂತೆ ಮಾಡಿದೆ. ತಡರಾತ್ರಿ ವೆಂಕಟೇಶ್ ನನ್ನು ಕಾರಿನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ಆತನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿಯದಿದ್ದರೂ ಹಳೆಯ ದ್ವೇಷದಿಂದ ಈ ದುರ್ಘಟನೆ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ.

ಗಂಗಾವತಿ: ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆ
ಹತ್ಯೆಯಾದ ಬಿಜೆಪಿ ಯುವ ಮುಖಂಡ ವೆಂಕಟೇಶ್ ಮತ್ತು ಶಂಕಿತ ಆರೋಪಿ ರವಿ
ಶಿವಕುಮಾರ್ ಪತ್ತಾರ್
| Edited By: |

Updated on:Oct 27, 2025 | 1:12 PM

Share

ಕೊಪ್ಪಳ, ಅಕ್ಟೋಬರ್ 8: ದೇವಿಕ್ಯಾಂಪ್​ನಿಂದ ಗಂಗಾವತಿಗೆ ಬೈಕ್​ ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ಹೆಚ್​​​ಆರ್​ಎಸ್​ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ.

ನಡೆದಿದ್ದೇನು?

ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್(31) ಕೊಲೆಯಾದ ದುರ್ದೈವಿ. ವೆಂಕಟೇಶ್ ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ಸಮಯದಲ್ಲಿ ದುಷ್ಕರ್ಮಿಗಳು ಅವರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಹೀಗೆ ಬಂದವರು ಅವರ ಬೈಕ್​ಗೆ ಗುದ್ದಿದ್ದಾರೆ. ವೆಂಕಟೇಶ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ವೆಂಕಟೇಶ್​​​​​​ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ದುರಂತ ಘಟನೆ ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಮುಂದೆಯೇ ನಡೆದಿದೆ. ಗಂಗಾವತಿನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು,  ಘಟನೆ ನಡೆದ ಸ್ಥಳಕ್ಕೆ ಬಂದ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದು, ಗಂಗಾವತಿಯ ಹೆಚ್​​​ಆರ್​ಎಸ್​ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ.

ಹಳೇ ದ್ವೇಷಕ್ಕೆ ನಡೀತಾ ಕೊಲೆ?

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಹಿಂದೆ ಹಳೇ ದ್ವೇಷವಿರುವ ಶಂಕೆ ವ್ಯಕ್ತವಾಗಿದೆ. ವೆಂಕಟೇಶ್ ಕುರುಬರ ಸ್ನೇಹಿತರು ರವಿ ಎಂಬಾತನ ಮೇಲೆ ಕೊಲೆ ಆರೋಪ ಹೊರಿಸಿದ್ದಾರೆ. ವೆಂಕಟೇಶ್ ಹಾಗೂ ರವಿ ಮದ್ಯೆ ಕಳೆದ ಏಳೆಂಟು ವರ್ಷಗಳಿಂದ ದ್ವೇಷವಿದ್ದು, ನಾಯಕತ್ವದ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯ ಮೂಡಿತ್ತು. ಏರಿಯಾ ಕಂಟ್ರೋಲ್‌ ವಿಚಾರಕ್ಕೂ ವೆಂಕಟೇಶ್ ನಡುವೆ ಭಿನ್ನಾಭಿಪ್ರಾಯವಿತ್ತು. ಇದೇ ಕಾರಣದಿಂದ ರವಿ ಈ ದುಷ್ಕೃತ್ಯವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 am, Wed, 8 October 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ