AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಅಗ್ನಿ ಅವಘಡ: ಅನಿಲ ಸೋರಿಕೆಯಿಂದ ಸುಟ್ಟು ಕರಕಲಾದ ಮನೆ

ಪಕ್ಕದ ಮನೆಯವರು ಊರಿಗೆ ಹೋಗುವಾಗ ಫಾತಿಮಾಗೆ ಬಳಸಲು ತಮ್ಮ ಸಿಲಿಂಡರ್ ಕೊಟ್ಟಿದ್ದರು. ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಿಲಿಂಡರ್ ಸ್ಪೋಟವಾಗಿದೆ. ಮನೆ ಕಟ್ಟಲು ಅಂತ ಮಹಿಳೆ ಕೂಡಿಟ್ಟಿದ್ದ ಎರಡು ಲಕ್ಷ ರೂ. ನಗದು ಬೆಂಕಿಗಾಹುತಿಯಾಗಿದೆ.

ಕಲಬುರಗಿಯಲ್ಲಿ ಅಗ್ನಿ ಅವಘಡ: ಅನಿಲ ಸೋರಿಕೆಯಿಂದ ಸುಟ್ಟು ಕರಕಲಾದ ಮನೆ
ಸುಟ್ಟು ಕರಕಲಾಗಿರುವ ಮನೆ
Follow us
sandhya thejappa
| Updated By: preethi shettigar

Updated on: Apr 05, 2021 | 12:42 PM

ಕಲಬುರಗಿ: ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಫಾತಿಮಾ ಎನ್ನುವವರ ಮನೆಯಲ್ಲಿ ಘಟನೆ ನಡೆದಿದ್ದು, ಸುಮಾರು 9 ಕೋಳಿಗಳು, ಫ್ರಿಡ್ಜ್, ದವಸ ಧಾನ್ಯಗಳು, ಬಟ್ಟೆ ಸೇರಿ ಒಂದು ಲಕ್ಷ ಎಂಬತ್ತು ಸಾವಿರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಪಕ್ಕದ ಮನೆಯವರು ಊರಿಗೆ ಹೋಗುವಾಗ ಫಾತಿಮಾಗೆ ಬಳಸಲು ತಮ್ಮ ಸಿಲಿಂಡರ್ ಕೊಟ್ಟಿದ್ದರು. ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಿಲಿಂಡರ್ ಸ್ಪೋಟವಾಗಿದೆ. ಮನೆ ಕಟ್ಟಲು ಅಂತ ಮಹಿಳೆ ಕೂಡಿಟ್ಟಿದ್ದ ಎರಡು ಲಕ್ಷ ರೂಪಾಯಿ ನಗದು ಬೆಂಕಿಗಾಹುತಿಯಾಗಿದ್ದು, ಈ ದುರ್ಘಟನೆ ನಿನ್ನೆ ಸಂಜೆ ನಡೆದಿದೆ. ಸದ್ಯ ಈ ಪ್ರಕರಣ ಚಿತ್ತಾಪೂರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ತೆಲಂಗಾಣದ ಮರಗಳಿಗೆ ಕಿಡಿಗೇಡಿಗಳಿಂದ ಬೆಂಕಿ  ತೆಲಂಗಾಣದ ನಿರ್ಮಲ ಜಿಲ್ಲೆಯ ಬಾಮನಿ ಗ್ರಾಮದ ಬಳಿಯಿರುವ ಮರಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 250ಕ್ಕೂ ಹೆಚ್ಚು ಮರಗಳಿಗೆ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಉರಿಯುತ್ತಿದ್ದ ಮರಗಳನ್ನು ನಂದಿಸಲು ಅಗ್ನಿ ಶಾಮಕದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದೆ.

250 ಮರಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಕಾರಿನ ಎಂಜಿನ್​ನಲ್ಲಿ ಧಿಡೀರ್ ಬೆಂಕಿ ಕಾರಿನ ಎಂಜಿನ್​ನಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದ ಘಟನೆ ತೆಲಂಗಾಣದ ನಿಜಾಮಬಾದ್ ನಗರದ ಕಂಟೇಶ್ವರ ಬೈಪಾಸ್ ವೃತ್ತದಲ್ಲಿ ನಡೆದಿದೆ. ನಗರದ ಕಂಟೇಶ್ವರ ಬೈಪಾಸ್ ವೃತ್ತದ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೇ ಕಾರನ್ನು ರಸ್ತೆ ಬದಿ ನಿಲ್ಲಿಸಿ, ನಂತರ ಬೆಂಕಿ ನಂದಿಸಲು ಯತ್ನಿಸುತ್ತಾರೆ. ಆದರೆ ಚಾಲಕನ ಪ್ರಯತ್ನ ವಿಫಲಗೊಂಡು ಕಾರು ಅಗ್ನಿಗೆ ಆಹುತಿಯಾಗಿದೆ.

ನಾಲ್ಕು ಎಕರೆಯಲ್ಲಿ ಬೆಳೆದಿದ್ದ ನಾಟಿ ಕಬ್ಬು ಬೆಂಕಿಗಾಹುತಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿಯಲ್ಲಿ ಸುಮಾರು ನಾಲ್ಕು ಎಕರೆಯಲ್ಲಿ ಬೆಳೆದಿದ್ದ ನಾಟಿ ಕಬ್ಬು ಬೆಂಕಿಗಾಹುತಿಯಾಗಿದೆ. ಪಕ್ಕದ ಜಮೀನಿನ ಪ್ರಭಾಕರ ಎಂಬುವರು ಹೊಲದ ಬದುವಿಗೆ ಹಚ್ಚಿದ ಬೆಂಕಿ ವ್ಯಾಪಿಸಿ ರೈತ ಹನಮಂತ ಹಾಳಕೇರಿ ಎಂಬುವರಿಗೆ ಸೇರಿದ ಕಬ್ಬು ಬೆಳೆ ನಾಶವಾಗಿದೆ. ತಗುಲಿದ ಬೆಂಕಿಯಿಂದ ಕಬ್ಬು, ಹನಿ ನೀರಾವರಿ, ಪೈಪು ಸೇರಿ ಅಂದಾಜು 7 ಲಕ್ಷ ರೂ. ವಸ್ತುಗಳು ನಾಶವಾಗಿದೆ.

ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಬೆಳೆ ಬೆಂಕಿಗಾಹುತಿಯಾಗಿದೆ

ದಕ್ಷಿಣಕನ್ನಡ ಆಕಸ್ಮಿಕವಾಗಿ ಬೆಂಕಿ ಜಿಲ್ಲೆಯ ಮಂಗಳೂರಿನ ಪಚ್ಚನಾಡಿಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದು ಇಡೀ ಘಟಕ ಸುಟ್ಟು ಭಸ್ಮವಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರ ಸಾಹಸ ಪಟ್ಟರು. ಜಿಲ್ಲಾಧಿಕಾರಿ ಡಾ.ಕೆ.ವಿರಾಜೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

(Gas Cylinder Burst in kalaburagi and 1 house has been burnt no death reported)

ಇದನ್ನೂ ಓದಿ

ನಿನ್ನ ಗರ್ಲ್​ಫ್ರೆಂಡ್​ಮೇಲೆ ಕೈ ಹಾಕಿದ್ದಕ್ಕೆ ಸಿಟ್ಟು ಬಂತಾ?; ಉರಿಯುವ ಬೆಂಕಿಗೆ ತುಪ್ಪ ಸುರಿದ ಪ್ರಶಾಂತ್ ಸಂಬರಗಿ ​

ಹತ್ತಾರು ಎಕರೆ ಅರಣ್ಯ ಭಸ್ಮ; ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆ, ಕೃಷ್ಣಮೃಗಗಳ ಪರದಾಟ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ