ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ನೇಮಕ; ರಾಜ್ಯದ 16 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ರಾಕೇಶ್ ಸಿಂಗ್ ನೇಮಕವಾಗಿದ್ದಾರೆ. ಈ ಮೊದಲು ಬಿಬಿಎಂಪಿ ಆಯುಕ್ತರಾಗಿದ್ದ ಮಂಜುನಾಥ ಪ್ರಸಾದ್​ ಕಂದಾಯ ಇಲಾಖೆಗೆ ವರ್ಗಾವಣೆ ಹೊಂದಿದ್ದಾರೆ.

ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ನೇಮಕ; ರಾಜ್ಯದ 16 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬಿಬಿಎಂಪಿ ಮುಖ್ಯ ಕಚೇರಿ
Follow us
TV9 Web
| Updated By: ganapathi bhat

Updated on:Apr 05, 2022 | 1:01 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಮಂಜುನಾಥ್ ಪ್ರಸಾದ್ ವರ್ಗಾವಣೆಯಾಗಿದ್ದಾರೆ. ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್​ ಗುಪ್ತಾ ನೇಮಕವಾಗಿದ್ದಾರೆ. ಜೊತೆಗೆ, ಬಿಬಿಎಂಪಿ ಆಡಳಿತಾಧಿಕಾರಿಯಾಗಿ ರಾಕೇಶ್ ಸಿಂಗ್ ನೇಮಕವಾಗಿದ್ದಾರೆ. ಈ ಮೊದಲು ಬಿಬಿಎಂಪಿ ಆಯುಕ್ತರಾಗಿದ್ದ ಮಂಜುನಾಥ ಪ್ರಸಾದ್​ ಕಂದಾಯ ಇಲಾಖೆಗೆ ವರ್ಗಾವಣೆ ಹೊಂದಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತ ಗೌರವ್​ ಗುಪ್ತಾಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಕಂದಾಯ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆ ಎಸಿಎಸ್ ಆಗಿರುವ ರಾಕೇಶ್ ಸಿಂಗ್​ಗೆ ಬಿಬಿಎಂಪಿ‌ ಆಡಳಿತಾಧಿಕಾರಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.

16 ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ ಮೂವರು ಡಿವೈಎಸ್​ಪಿಗಳ ಹಾಗೂ 28 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹದಿನಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. 16 ಅಧಿಕಾರಿಗಳ ಪಟ್ಟಿ ಇಲ್ಲಿದೆ.

ವಂದಿತಾ ಶರ್ಮ- ಸರ್ಕಾರದ ಎಸಿಎಸ್ ಹೆಚ್ಚುವರಿ ಹೊಣೆ ರಾಜೀವ್ ಚಾವ್ಲಾ- ಎಸಿಎಸ್, ಡಿಪಿಎಆರ್ ಜಿ. ಕುಮಾರ ನಾಯ್ಕ್- ಎಸಿಎಸ್, ಇಂಧನ ಇಲಾಖೆ ಜೊತೆಗೆ ಎಸಿಎಸ್, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಹೊಣೆ ಪಂಕಜ್ ಕುಮಾರ್ ಪಾಂಡೆ- ಕಾರ್ಯದರ್ಶಿ, MSME ಮತ್ತು ಗಣಿ ಇಲಾಖೆ ವಿ‌.ಪೊನ್ನುರಾಜ್- ಕಾರ್ಯದರ್ಶಿ, DPAR (ಇ-ಆಡಳಿತ) ಸಿಂಧೂ ರೂಪೇಶ್- ನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ ಎಸ್. ಹೊನ್ನಾಂಬ- ನಿರ್ದೇಶಕಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡಾ. ಬಿ.ಆರ್. ಮಮತಾ- ಹೆಚ್ಚುವರಿ ಮಿಷನ್ ಡೈರೆಕ್ಟರ್, ಸಕಾಲ ಹೆಚ್.ಎನ್. ಗೋಪಾಲಕೃಷ್ಣ- ವ್ಯವಸ್ಥಾಪಕ ನಿರ್ದೇಶಕ, ಪಬ್ಲಿಕ್ ಲ್ಯಾಂಡ್ ಕಾರ್ಪೊರೇಷನ್ ಐಟಿ ಬಿಟಿ ಇಲಾಖೆಯ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ

ಇದನ್ನೂ ಓದಿ: ಕೊರೊನಾ 2ನೇ ಅಲೆ ಆರ್ಭಟ.. ಬಿಬಿಎಂಪಿ ವಿದ್ಯಾರ್ಥಿಗಳಿಗೆ ಕಂಟಕವಾಯ್ತು ಕೊರೊನಾ

ಬೆಂಗಳೂರಿನ ಪ್ರಮುಖ ವೃತ್ತಗಳಿಗೆ ಹೊಸರೂಪ ನೀಡಲಿದೆ ಬಿಬಿಎಂಪಿ; ಟ್ರಾಫಿಕ್​ ಕಿರಿಕಿರಿ ತಗ್ಗಿಸಿ, ಅಂದ ಹೆಚ್ಚಿಸಲು ಯೋಜನೆ

Published On - 7:07 pm, Wed, 31 March 21

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು