ಗೌರಿ ಲಂಕೇಶ್‌ ಕೊಲೆ ಪ್ರಕರಣ: 11ನೇ ಆರೋಪಿ​ಗೆ ಷರತ್ತುಬದ್ಧ ಜಾಮೀನು

| Updated By: Rakesh Nayak Manchi

Updated on: Dec 08, 2023 | 11:26 PM

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಈತನಾಗಿದ್ದಾನೆ. ಗೌರಿ ಲಂಕೇಶ್ ಕೊಲೆ ಒಳಸಂಚಿನಲ್ಲಿ ಭಾಗಿಯಾಗಿರುವ ಆರೋಪ ಈತನ ಮೇಲಿದೆ.

ಗೌರಿ ಲಂಕೇಶ್‌ ಕೊಲೆ ಪ್ರಕರಣ: 11ನೇ ಆರೋಪಿ​ಗೆ ಷರತ್ತುಬದ್ಧ ಜಾಮೀನು
ಗೌರಿ ಲಂಕೇಶ್
Follow us on

ಬೆಂಗಳೂರು, ಡಿ.8: ಪತ್ರಕರ್ತೆ ಗೌರಿ ಲಂಕೇಶ್ (Gauri Lankesh) ಹತ್ಯೆ ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಈತನಾಗಿದ್ದಾನೆ.

1 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದೆಂದು ಹೈಕೋರ್ಟ್ ಷರತ್ತು ವಿಧಿಸಿದೆ. ಆರೋಪಿ ಮೋಹನ್ ನಾಯಕ್ ಐದು ವರ್ಷಗಳಿಂದ ಜೈಲಿನಲ್ಲಿದ್ದು, ಇತರೆ ಸಂಘಟಿತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪವಿಲ್ಲ.

ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಲೈಂಗಿಕ ಬಯಕೆ ನಿಯಂತ್ರಣಕ್ಕೆ ಸಲಹೆ ನೀಡಿದ ಕಲ್ಕತ್ತಾ ಹೈಕೋರ್ಟ್​​ಗೆ ಸುಪ್ರೀಂ ತರಾಟೆ

ಪ್ರಕರಣ ಸಂಬಂಧ ಇನ್ನೂ 400 ಸಾಕ್ಷಿಗಳ ವಿಚಾರಣೆ ಬಾಕಿಯಿರುವ ಹಿನ್ನೆಲೆ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಈತನಾಗಿದ್ದು, ಗೌರಿ ಲಂಕೇಶ್ ಕೊಲೆ ಒಳಸಂಚಿನಲ್ಲಿ ಭಾಗಿಯಾಗಿರುವ ಆರೋಪ ಈತನ ಮೇಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ