AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಸ್ಫೋಟದ ನೆನಪು ಮಾಸುವ ಮುನ್ನವೇ ತುಮಕೂರಲ್ಲೂ ಸ್ಫೋಟ; ಮನೆ ಧ್ವಂಸ, ಮಹಿಳೆಗೆ ಗಾಯ

ಇಂದು ಬೆಳಗ್ಗೆ ಲಕ್ಷ್ಮೀಕಾಂತ್​ ಮನೆಗೆ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದಾರೆ. ಅವರ ಮನೆಯ ಸುತ್ತ 200 ಮೀ ದೂರದವರೆಗೆ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಶಿವಮೊಗ್ಗ ಸ್ಫೋಟದ ನೆನಪು ಮಾಸುವ ಮುನ್ನವೇ ತುಮಕೂರಲ್ಲೂ ಸ್ಫೋಟ; ಮನೆ ಧ್ವಂಸ, ಮಹಿಳೆಗೆ ಗಾಯ
ಜೆಲಾಟಿನ್ ಸ್ಫೋಟಗೊಂಡ ಸ್ಥಳ
Lakshmi Hegde
|

Updated on:Feb 02, 2021 | 12:25 PM

Share

ತುಮಕೂರು: ಶಿವಮೊಗ್ಗದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ಜೆಲೆಟಿನ್ ಸ್ಫೋಟಗೊಂಡು 6 ಮಂದಿ ಮೃತಪಟ್ಟಿದ್ದಾರೆ. ಆ ಮಹಾ ದುರಂತದ ನೆನಪು ಮಾಸುವ ಮೊದಲೇ ತುಮಕೂರಿನ ಮಸ್ಕಲ್​ ಗ್ರಾಮದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಇದೂ ಕೂಡ ಜಿಲೆಟಿನ್​ ಸ್ಫೋಟ !

ಕ್ರಷರ್ ಹಾಗೂ ಕಲ್ಲು ಬಂಡೆಗಳನ್ನು ಸ್ಫೋಟಿಸುವ ಜೆಲೆಟಿನ್​ ಕಡ್ಡಿ ಸ್ಫೋಟಗೊಂಡು ಮನೆಯೊಂದು ಧ್ವಂಸವಾಗಿದೆ. ಇದರಿಂದಾಗಿ ಮಹಿಳೆಯೊಬ್ಬಳ ತಲೆಗೆ ಗಂಭೀರ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಮಕೂರು ತಾಲೂಕಿನ ಹೆಬ್ಬೂರು ಪೋಲಿಸ್ ಠಾಣೆ ವ್ಯಾಪ್ತಿಯ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಬಳಿ ಇರುವ ಮಸ್ಕಲ್ ಗ್ರಾಮದ ಲಕ್ಷ್ಮೀಕಾಂತ ಎಂಬುವರ ಮನೆ ಈ ಜಿಲಿಟಿನ್​ ಸ್ಫೋಟಕ್ಕೊಳಗಾಗಿದ್ದು, ಸೀಟಿನ ಮನೆ ಸಂಪೂರ್ಣ ನಾಶವಾಗಿದೆ. ಸ್ಫೋಟದ ಹೊಡೆತಕ್ಕೆ ಮನೆಯ ಶೀಟುಗಳೆಲ್ಲ ಚೂರುಚೂರಾಗಿವೆ.

ಸೋಮವಾರ ಮಧ್ಯಾಹ್ನ 12ಗಂಟೆಯ ಹೊತ್ತಿಗೆ ಸ್ಫೋಟ ಸಂಭವಿಸಿದ್ದು, ಆ ವೇಳೆ ಲಕ್ಷ್ಮೀಕಾಂತ್​ ಮಕ್ಕಳನ್ನು ಕರೆದುಕೊಂಡು ಶಾಲೆಗೆ ಹೋಗಿದ್ದರು. ಅವರ ಪತ್ನಿ ಸುವರ್ಣಮ್ಮ ಒಬ್ಬರೇ ಇದ್ದರು. ಚೂರಾದ ಸೀಟುಗಳು ಇವರ ತಲೆಗೆ ಬಡಿದು, ಗಾಯಗೊಂಡಿದ್ದಾರೆ.

ಲಕ್ಷ್ಮೀಕಾಂತ್​ ಮನೆಯಲ್ಲಿ ಜೆಲಾಟಿನ್ ಕಡ್ಡಿ ಹೇಗೆ? ಮಸ್ಕಲ್ ಗ್ರಾಮದ ನಿವಾಸಿ ಲಕ್ಷ್ಮೀಕಾಂತ ಕಲ್ಲು ಬಂಡೆಗಳನ್ನು ಸ್ಫೋಟಿಸುವುದು, ಮಣ್ಣು ತೆಗೆಯಲು ಸಹಾಯ ಮಾಡುವುದು, ಸಂದರ್ಭ ಬಂದರೆ ಕೂಲಿ ಕೆಲಸ ಮಾಡುತ್ತಿದ್ದರು. ಇವರು ಮಸ್ಕಲ್ ಸಮೀಪದ ಶಾಲೆಯೊಂದರಲ್ಲಿ ಕಲ್ಲು ಬಂಡೆಗಳನ್ನು ಸ್ಫೋಟಿಸಲು ಜೆಲಾಟಿನ್ ಕಡ್ಡಿ ಬಳಕೆ ಮಾಡಿಕೊಂಡು ಹೆಚ್ಚಾಗಿದ್ದ ಜೆಲೆಟಿನ್ ಕಡ್ಡಿಗಳನ್ನು ತಂದು ಮನೆಯಲ್ಲಿ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಶೀಟಿನ ತಾಪಕ್ಕೆ ಜೆಲಾಟಿನ್​ ಕಡ್ಡಿ ಕಲ್ಲುಬಂಡೆ ಸ್ಫೋಟಿಸಲು ಜೆಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಿದ್ದ ಲಕ್ಷ್ಮೀಕಾಂತ್​ಗೆ ಇವು ಮನೆಯಲ್ಲೇ ಸ್ಫೋಟಗೊಳ್ಳಬಹುದೆಂಬ ಅಂದಾಜು ಇರಲಿಲ್ಲ. ಮನೆಗೆ ಶೀಟುಗಳನ್ನು ಹಾಕಿದ್ದರಿಂದ ಬಿಸಿಲಿನ ತಾಪಕ್ಕೆ ಅವುಗಳ ಶಾಖ ಹೆಚ್ಚಾಗಿದೆ. ಇದರಿಂದಾಗಿ ಮನೆಯೊಳಗಿನ ಶಾಖವೂ ಹೆಚ್ಚಾಗಿ ಜೆಲಾಟಿನ್​ ಕಡ್ಡಿಗಳು ಸ್ಫೋಟಗೊಂಡಿವೆ. ಇದರ ಶಬ್ದಕ್ಕೆ ಅಕ್ಕಪಕ್ಕದ ಮನೆಯವರೂ ಕಕ್ಕಾಬಿಕ್ಕಿಯಾಗಿ, ಮನೆಯಿಂದ ಹೊರಗೆ ಬಂದು ನೋಡಿದ್ದಾರೆ. ಲಕ್ಷ್ಮೀಕಾಂತ್​ ಮನೆಯ ಪಕ್ಕದಲ್ಲೇ ಇದ್ದ ತಿಮ್ಮರಾಜು ಎಂಬುವರ ಮನೆಯ ಸೀಟುಗಳೂ ಪುಡಿಯಾಗಿವೆ. ಸ್ಫೋಟದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿ ಕೃಷ್ಣ, ಡಿವೈಎಸ್​​ಪಿ ಶ್ರೀನಿವಾಸ್​, ಕ್ಯಾತ್ಸಂದ್ರ ವೃತ್ತ ನಿರೀಕ್ಷಕ ಚನ್ನೇಗೌಡ ದೌಡಾಯಿಸಿದ್ದಾರೆ.

ಬುದ್ಧಿ ಕಲಿಯದ ಜಿಲ್ಲಾಡಳಿತ ಶಿವಮೊಗ್ಗದ ಹುಣಸೋಡಿನಲ್ಲಿ ಜಿಲೆಟಿನ್​ ಸ್ಫೋಟಗೊಂಡಿದ್ದು ಅದೆಷ್ಟು ಆತಂಕ ಮೂಡಿಸಿತ್ತು ಎಂಬುದು ಗೊತ್ತೇ ಇದೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪನವರು ಮೃತರ ಕುಟುಂಬಗಳಿಗೆ ಪರಿಹಾರವನ್ನೂ ಘೋಷಿಸಿದ್ದಾರೆ. ಅಷ್ಟೇ ಅಲ್ಲ, ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಸೂಚನೆಯನ್ನೂ ನೀಡಿದ್ದಾರೆ. ಆದರೆ ತುಮಕೂರು ಜಿಲ್ಲಾಡಳಿತ ಮಾತ್ರ ಇದ್ಯಾವುದನ್ನೂ ಗಂಭೀರವಾಗಿ ಪರಿಗಣಿಸಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ

ಜಿಲ್ಲೆಯಲ್ಲಿ ಅಕ್ರಮ ಅಕ್ರಮ ಗಣಿಗಾರಿಕೆ, ಜೆಲೆಟಿನ್ ಬಳಕೆಮಾಡುವವರು ಅದನ್ನು ಎಲ್ಲಿಂದ ತರಿಸಿಕೊಳ್ಳುತ್ತಾರೆ ಎಂಬುದನ್ನು ಪತ್ತೆ ಹಚ್ಚುವ ಪ್ರಯತ್ನವನ್ನೂ ಜಿಲ್ಲಾಡಳಿತ ಮಾಡಿಲ್ಲ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಜಾಣಕುರುಡಾಗಿದ್ದಾರೆ.

ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿಯವರು ಜನವರಿ 26ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ಅ ರೀತಿ ಇದ್ದರೆ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಇದೀಗ ಮಸ್ಕಲ್​ ಗ್ರಾಮದಲ್ಲಿ ಜೆಲೆಟಿನ್ ಸ್ಫೋಟಗೊಂಡಿದ್ದರೂ ಅವರು ಇತ್ತ ತಲೆ ಹಾಕಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಂಬ್​ ನಿಷ್ಕ್ರಿಯ ದಳ ಭೇಟಿ ಇನ್ನು ಇಂದು ಬೆಳಗ್ಗೆ ಲಕ್ಷ್ಮೀಕಾಂತ್​ ಮನೆಗೆ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದಾರೆ. ಅವರ ಮನೆಯ ಸುತ್ತ 200 ಮೀ ದೂರದವರೆಗೆ ನಿಷೇಧಾಜ್ಞೆ ಹೊರಡಿಸಿದ್ದಾರೆ. ಮನೆಯಲ್ಲಿ ಇನ್ನೂ ಜಿಲಾಟಿನ್ ಕಡ್ಡಿಗಳು ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಸುತ್ತಮುತ್ತ ಯಾರೂ ಬರಬಾರದು ಎಂದು ಪೊಲೀಸರು ಸೂಚಿಸಿದ್ದಾರೆ.

Published On - 11:27 am, Tue, 2 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ