ಅಮೂಲ್ಯ ವೃಕ್ಷಗಳ ಸಂರಕ್ಷಣೆಗೆ ಈಶ್ವರ ಖಂಡ್ರೆ ಕ್ರಮ: ಅರಣ್ಯ, ಸರ್ಕಾರಿ, ಪಟ್ಟಾ ಭೂಮಿಯಲ್ಲಿ ಶ್ರೀಗಂಧ, ಬೀಟೆ, ತೇಗದ ಜಿಯೋ ಟ್ಯಾಗ್​

| Updated By: ವಿವೇಕ ಬಿರಾದಾರ

Updated on: Jan 20, 2024 | 2:30 PM

ಮರಗಳ ಅಕ್ರಮ ಕಡಿತ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಬೀಟೆ, ಶ್ರೀಗಂಧ, ತೇಗದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.

ಅಮೂಲ್ಯ ವೃಕ್ಷಗಳ ಸಂರಕ್ಷಣೆಗೆ ಈಶ್ವರ ಖಂಡ್ರೆ ಕ್ರಮ: ಅರಣ್ಯ, ಸರ್ಕಾರಿ, ಪಟ್ಟಾ ಭೂಮಿಯಲ್ಲಿ ಶ್ರೀಗಂಧ, ಬೀಟೆ, ತೇಗದ ಜಿಯೋ ಟ್ಯಾಗ್​
ಸಚಿವ ಈಶ್ವರ್​ ಖಂಡ್ರೆ
Follow us on

ಬೆಂಗಳೂರು, ಜ.20: ಮರಗಳ ಅಕ್ರಮ ಕಡಿತ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಅವರು ಬೀಟೆ, ಶ್ರೀಗಂಧ, ತೇಗದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.

ಕಾಡನಂಚಿನಲ್ಲಿರುವ ಎಲ್ಲ ಜಮೀನಿನಲ್ಲಿ ಅಂದರೆ ಗ್ರಾಮಗಳಿಗೆ ಹೊಂದಿಕೊಂಡ ವನಪ್ರದೇಶ, ಪಟ್ಟಾಭೂಮಿ ಮತ್ತು ಸರ್ಕಾರಿ ಜಮೀನಿನಲ್ಲಿರುವ ಬೀಟೆ (ರೋಸ್ ವುಡ್), ತೇಗ (ಟೀಕ್) ಮತ್ತು ಶ್ರೀಗಂಧ (ರಕ್ತ ಚಂದನ) ಮರಗಳಿಗೆ 3 ತಿಂಗಳ ಅವಧಿಯೊಳಗೆ ಜಿಯೋ ಟ್ಯಾಗ್ ಮಾಡಿ ಇಲಾಖೆಗೆ ವಲಯವಾರು ಪಟ್ಟಿ ಸಲ್ಲಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಇದನ್ನೂ ಓದಿ: ಅರ್ಜುನ ಆನೆ ಸಾವು: ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ – ಈಶ್ವರ ಖಂಡ್ರೆ

ಇತ್ತೀಚೆಗೆ ಹಾಸನ ಜಿಲ್ಲೆ ಬೇಲೂರು ತಾಲೂಕು, ನಂದಗೋಡನಹಳ್ಳಿ, ಸಕಲೇಶಪುರದ ಕೌಡಳ್ಳಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಇಡಗುಂದಿಯೇ ಮೊದಲಾದ ಕಡೆಗಳಲ್ಲಿ ಅಕ್ರಮವಾಗಿ ನೂರಾರು ಅಮೂಲ್ಯ ಮನ್ನಾ ಜಾತಿಯ ವೃಕ್ಷಗಳನ್ನು ಕಡಿದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಶುಂಠಿ ಬೆಳೆಯ ಹೆಸರಲ್ಲಿ ಮರಗಳ ಹನನ ಆಗುತ್ತಿರುವುದನ್ನು ತಪ್ಪಿಸಲು ಶ್ರೀಗಂಧ, ತೇಗ ಮತ್ತು ಬೀಟೆ ಮರಗಳ ಜಿಯೋ ಟ್ಯಾಗ್ ಮಾಡಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.

ಅರಣ್ಯದೊಳಗೆ ಬೆಲೆ ಬಾಳುವ ಮರ ಕಡಿದು ಸಾಗಾಟ ಮಾಡಲು ಸಾಧ್ಯವಾಗದಂತೆ ಕಳ್ಳಬೇಟೆ ನಿಗ್ರಹ ತಂಡಗಳನ್ನು ನಿಯೋಜಿಸಲಾಗಿದೆ. ಆದರೆ ಕಾಡಿನಂಚಿನಲ್ಲಿ ಮತ್ತು ಸರ್ಕಾರಿ ಭೂಮಿಯಲ್ಲಿ, ಅರಣ್ಯ ಇಲಾಖೆ ಗುತ್ತಿಗೆ ನೀಡಿರುವ ಎಸ್ಟೇಟ್ ಹಾಗೂ ಪಟ್ಟಾ ಜಮೀನಿನಲ್ಲಿರುವ ಬೆಲೆಬಾಳುವ ವೃಕ್ಷಗಳ ಸಂರಕ್ಷಣೆ ಇಲಾಖೆಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಜಿಯೋ ಟ್ಯಾಗ್ ಮಾಡಿದರೆ ವೃಕ್ಷ ಸಂರಕ್ಷಣಾ ಕಾಯಿದೆ ಅಡಿ ಪೂರ್ವಾನುಮತಿ ಪಡೆಯದೆ ಮರ ಕಡಿಯಲು ಸಾಧ್ಯವಾಗುವುದಿಲ್ಲ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ