Karnataka Dam Water Level: ಘಟಪ್ರಭಾ ಡ್ಯಾಂ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕರ್ನಾಟಕದ ಎಲ್ಲ ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಇದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮುಂದಿನ ಮಳೆಗಾಲದವರೆಗು ನೀರಿನ ಕೊರತೆ ಉಂಟಾಗುವುದಿಲ್ಲ ಎಂದು ರೈತರು ನಂಬಿದ್ದಾರೆ. ಹಾಗಾದರೆ ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಇಲ್ಲಿದೆ
ಉತ್ತರ ಕರ್ನಾಟಕದ ಪ್ರಮುಖ ನದಿಗಳಲ್ಲಿ ಘಟಪ್ರಭಾ ಕೂಡ ಒಂದು. ಘಟಪ್ರಭ ನದಿ ಕೃಷ್ಣೆಯ ಉಪನದಿಯಾಗಿದೆ. ಘಟಪ್ರಭಾ ನದಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಗ್ರಾಮದಲ್ಲಿ ಜಲಾಶಯ ನಿರ್ಮಿಸಲಾಗಿದೆ. ಈ ಜಲಾಶಯ ಭರ್ತಿಯಾಗಿದೆ. ಹಾಗಾದರೆ ಹಿಡಿಕಲ್ ಡ್ಯಾಂ ಸೇರಿದಂತೆ ಕರ್ನಾಟಕದ 14 ಜಲಾಶಯಗಳಲ್ಲಿ (Karnataka Dam Water Level) ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 123.08 | 123.08 | 19968 | 19968 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 75.13 | 85.96 | 37687 | 10663 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 34.45 | 22.91 | 1644 | 1644 |
ಕೆ.ಆರ್.ಎಸ್ (KRS Dam) | 38.04 | 49.45 | 47.60 | 29.43 | 12210 | 10423 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 144.58 | 73.96 | 4337 | 5318 |
ಕಬಿನಿ ಜಲಾಶಯ (Kabini Dam) | 696.13 | 19.52 | 18.40 | 15.82 | 2821 | 2850 |
ಭದ್ರಾ ಜಲಾಶಯ (Bhadra Dam) | 657.73 | 71.54 | 64.30 | 48.88 | 7584 | 7295 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 51.00 | 43.48 | 2777 | 2777 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 36.04 | 29.46 | 8167 | 9775 |
ವರಾಹಿ ಜಲಾಶಯ (Varahi Dam) | 594.36 | 31.10 | 21.70 | 10.74 | 678 | 376 |
ಹಾರಂಗಿ ಜಲಾಶಯ (Harangi Dam) | 871.38 | 8.50 | 8.01 | 8.21 | 962 | 1282 |
ಸೂಫಾ (Supa Dam) | 564.00 | 145.33 | 122.68 | 79.68 | 2667 | 3657 |
ನಾರಾಯಣಪುರ ಜಲಾಶಯ (Narayanpura Dam) | 492.25 | 33.31 | 33.31 | 27.72 | 24253 | 24253 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 20.08 | 24.52 | 1270 | 135 |
62.48 ಮೀಟರ್ ಎತ್ತರದ ಹಿಡಕಲ್ ಡ್ಯಾಂ 51 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಸದ್ಯ ಜಲಾಶಯದಲ್ಲಿ 51 ಟಿಎಂಸಿ ನೀರು ಸಂಗ್ರಹವಾಗುವ ಮೂಲಕ ಡ್ಯಾಂ ಭರ್ತಿಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ