Girish Karnad: ಸಾಹಿತಿ, ನಾಟಕಗಾರ, ನಿರ್ದೇಶಕ ಗಿರೀಶ್ ಕಾರ್ನಾಡ್ ಕುರಿತು ನೀವು ತಿಳಿಯ ಸಂಗತಿಗಳು

ಗಿರೀಶ್ ಕಾರ್ನಾಡ್ ಅವರದು ತಮ್ಮ ಬಹುಮುಖಿ ಜೀವನಕ್ಕೆ ಹೆಸರುವಾಸಿಯಾದ ವ್ಯಕ್ತಿತ್ವ. ಕನ್ನಡ ಸಾಹಿತ್ಯ ಲೋಕದಲ್ಲಿ ಗಿರೀಶ್​ ಕಾರ್ನಾಡ್​ ಅವರ ಸಾಧನೆ ಅಪಾರ. ತಮ್ಮ ನಾಟಕಗಳ ಮೂಲಕ ಅವರು ಮಹತ್ವದ ಚಿಂತನೆಗಳನ್ನು ಓದುಗರ ಹೃದಯದಲ್ಲಿ ಬಿತ್ತಿದರು. ಅವರ ಜನ್ಮ ವಾರ್ಷಿಕೋತ್ಸವದಂದು, ಅವರ ಕುರಿತಾದ ಕೆಲವು ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ.

Girish Karnad: ಸಾಹಿತಿ, ನಾಟಕಗಾರ, ನಿರ್ದೇಶಕ ಗಿರೀಶ್ ಕಾರ್ನಾಡ್ ಕುರಿತು ನೀವು ತಿಳಿಯ ಸಂಗತಿಗಳು
ಸಾಹಿತಿ ಗಿರೀಶ್ ಕಾರ್ನಾಡ್
Follow us
ವಿವೇಕ ಬಿರಾದಾರ
|

Updated on:May 19, 2023 | 7:23 AM

ಗಿರೀಶ್ ಕಾರ್ನಾಡ್ (Girish Karnad) ಎಂದು ಕರೆಯಲ್ಪಡುವ ಗಿರೀಶ್ ರಘುನಾಥ್ ಕಾರ್ನಾಡ್ ಅವರು ತಮ್ಮ ಬಹುಮುಖಿ ಜೀವನಕ್ಕೆ ಹೆಸರುವಾಸಿಯಾದ ವ್ಯಕ್ತಿತ್ವ. ಕನ್ನಡ ಸಾಹಿತ್ಯ ಲೋಕದಲ್ಲಿ ಗಿರೀಶ್​ ಕಾರ್ನಾಡ್​ ಅವರ ಸಾಧನೆ ಅಪಾರ. ತಮ್ಮ ನಾಟಕಗಳ ಮೂಲಕ ಅವರು ಮಹತ್ವದ ಚಿಂತನೆಗಳನ್ನು ಓದುಗರ ಹೃದಯದಲ್ಲಿ ಬಿತ್ತಿದರು. ಇಂದಿಗೂ ಅವರ ನಾಟಕಗಳು ಗಮನಾರ್ಹ ಕೃತಿಗಳಾಗಿ, ಪ್ರಸ್ತುತತೆ ಉಳಿಸಿಕೊಂಡಿವೆ. ಗಿರೀಶ್​ ಕಾರ್ನಾಡ್​ ಅವರ ಪ್ರತಿಭೆ ಕೇವಲ ನಾಟಕಗಳ ಬರವಣಿಗೆಗೆ ಮಾತ್ರ ಸೀಮಿತವಲ್ಲ. ಕನ್ನಡ ಚಿತ್ರರಂಗದ ಜನಪ್ರಿಯ ಮುಖ, ಅವರು ಹಲವಾರು ಸಾಧನೆಗಳು ಮತ್ತು ಆಸಕ್ತಿಗಳನ್ನು ಹೊಂದಿರುವ ವ್ಯಕ್ತಿಯಾಗಿದ್ದರು. ಅವರು ನಟ, ಬರಹಗಾರ, ನಾಟಕಕಾರ, ನಟ, ವಿದ್ವಾಂಸ, ನಿರ್ದೇಶಕ, ಶಿಕ್ಷಣ ತಜ್ಞ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರ ಜನ್ಮ ವಾರ್ಷಿಕೋತ್ಸವದಂದು, ಇವರ ಬಗ್ಗೆ ಕೆಲವು ಆಸಕ್ತಿದಾಯಕ ಸಂಗತಿಗಳ ಬಗ್ಗೆ ತಿಳಿಯೋಣ.

  1. ಗಿರೀಶ್ ಕಾರ್ನಾಡ್ ಅವರು ಮೇ 19, 1938 ರಂದು ಮಹಾರಾಷ್ಟ್ರದ ಮಾಥೆರಾನ್‌ನಲ್ಲಿ ಜನಿಸಿದರು. ಅವರು ಕೊಂಕಣಿ ಮಾತನಾಡುವ ಕುಟುಂಬದಲ್ಲಿ ಬೆಳೆದರು. ಅವರ ತಂದೆ ವೈದ್ಯ ಮತ್ತು ತಾಯಿ, ನರ್ಸ್. ಅವರ ತಂದೆ ವೈದ್ಯ ಮತ್ತು ರಂಗಭೂಮಿ ಅಭಿಮಾನಿಯಾಗಿದ್ದರು. ಹೀಗಾಗಿ ಗಿರೀಶ್ ಕರ್ನಾಡ ಅವರಿಗೆ ರಂಗಭೂಮಿ ಮೇಲಿನ ಆಸಕ್ತಿ ರಕ್ತಗತವಾಗಿಯೇ ಬಂದಿದೆ.
  2. ರೋಡ್ಸ್ ವಿದ್ವಾಂಸರಾಗಿ ಆಕ್ಸ್‌ಫರ್ಡ್‌ನ ಲಿಂಕನ್ ಮತ್ತು ಮ್ಯಾಗ್ಡಲೆನ್ ಕಾಲೇಜುಗಳಿಂದ ಪದವಿ ಪಡೆದರು. ಅವರು ತತ್ವಶಾಸ್ತ್ರ, ರಾಜಕೀಯ ವಿಜ್ಞಾನ ಮತ್ತು ಅರ್ಥಶಾಸ್ತ್ರದಲ್ಲಿ ಮಾಸ್ಟರ್ ಆಫ್ ಆರ್ಟ್ಸ್ ಪದವಿ ಪಡೆದಿದ್ದರು.
  3. ಗಿರೀಶ್ ಕಾರ್ನಾಡ್​ ಅವರು 22 ನೇ ವಯಸ್ಸಿನಲ್ಲಿ ಯಯಾತಿ ನಾಟಕ ಬರೆದರು. ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡಿದವರಲ್ಲಿ ಇವರೂ ಒಬ್ಬರು. ಕುವೆಂಪು ಅವರ ‘ಕಾನೂರು ಹೆಗ್ಗಡತಿ’ ಕೃತಿಯನ್ನು ಗಿರೀಶ್​ ಕಾರ್ನಾಡ್​ ಬೆಳ್ಳಿತೆರೆಗೆ ತಂದರು.
  4. ಕನ್ನಡ ಚಿತ್ರರಂಗದ ಮೇರು ನಟರಾದ ಶಂಕರ್​ನಾಗ್​ ಮತ್ತು ವಿಷ್ಣುವರ್ಧನ್​ ಅವರಿಗೆ ಮೊದಲ ಬಾರಿಗೆ ಆ್ಯಕ್ಷನ್​-ಕಟ್​ ಹೇಳಿದ್ದೇ ಗಿರೀಶ್​ ಕಾರ್ನಾಡ್​. ಅವರ ನಿರ್ದೇಶನದಲ್ಲಿ ಮೂಡಿಬಂದ ‘ವಂಶ ವೃಕ್ಷ’ ಸಿನಿಮಾ ಮೂಲಕ ವಿಷ್ಣುವರ್ಧನ್​ ಮೊದಲ ಬಾರಿಗೆ ಕ್ಯಾಮೆರಾ ಎದುರಿಸಿದರು. ಶಂಕರ್​ನಾಗ್​ ಮೊದಲು ನಟಿಸಿದ ‘ಒಂದಾನೊಂದು ಕಾಲದಲ್ಲಿ’ ಸಿನಿಮಾಗೆ ಗಿರೀಶ್​ ಕಾರ್ನಾಡ್​ ನಿರ್ದೇಶನ ಮಾಡಿದರು. ಮಾಲ್ಗುಡಿ ಡೇಸ್ ಎಂಬ ದೂರದರ್ಶನ ಸರಣಿಯನ್ನು ರಚಿಸಿದರು. ಮಾಲ್ಗುಡಿ ಡೇಸ್‌ನ ಮೊದಲ ಎಂಟು ಸಂಚಿಕೆಗಳಿಗೆ ಅವರು ಸ್ವಾಮಿಯ ತಂದೆಯ ಪಾತ್ರವನ್ನು ಸಹ ನಿರ್ವಹಿಸಿದ್ದಾರೆ.
  5. ಟೈಗರ್ ಜಿಂದಾ ಹೈ, ಶಿವಾಯ್ ಮುಂತಾದ ಇತ್ತೀಚಿನ ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿಯ ಜೊತೆಗೆ, ಅವರಿಗೆ ಪದ್ಮಶ್ರೀ (1974), ಪದ್ಮಭೂಷಣ (1992) ಸಹ ಲಭಿಸಿದೆ.
  6. ದೀರ್ಘಕಾಲದ ಅನಾರೋಗ್ಯದಿಂದ ಬಹು ಅಂಗಾಂಗ ವೈಫಲ್ಯದಿಂದಾಗಿ ಅವರು ಜೂನ್ 10, 2019 ರಂದು ಬೆಂಗಳೂರಿನಲ್ಲಿ ತಮ್ಮ 81 ನೇ ವಯಸ್ಸಿನಲ್ಲಿ ನಿಧನರಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 am, Fri, 19 May 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ