5 DySPಗಳಿಗೆ ಕ್ವಾರಂಟೈನ್! ಸಿಎಂ BSY ಸ್ವಕ್ಷೇತ್ರದಲ್ಲಿ ಏನಿದು ಅವಾಂತರ?

ಶಿವಮೊಗ್ಗ: ಹಚ್ಚಹಸಿರಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇದೀಗ ಕೊರೊನಾ ಆತಂಕ ಮಡುವುಗಟ್ಟಿದೆ. ಅದೂ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳನ್ನೇ ಬಾಧಿಸತೊಡಗಿದೆ. ಮುಖ್ಯಮಂತ್ರಿ ಸ್ವಕ್ಷೇತ್ರವಾದ ಶಿಕಾರಿಪುರದಲ್ಲಿ ಕಳೆದ ವಾರ ದಿಢೀರನೆ ಕೊರೊನಾ ಸೋಂಕು ಪ್ರಕರಣಗಳು ತಲೆಯೆತ್ತಿದ್ದವು. ಆ ಸಂದರ್ಭದಲ್ಲಿ ಶಿಕಾರಿಪುರ ತಾಲೂಕಿನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 12ಕ್ಕೂ ಹೆಚ್ಚು ಇನ್ಸ್​ಪೆಕ್ಟರ್​ಗಳು, 5 DySPಗಳಿಗೆ ಈಗ ಕ್ವಾರಂಟೈನ್ ಮಾಡಲಾಗಿದೆ. ಯಾರು ಆ ಬಾಲಕಿ? ಇವರಿಗೆ ಯಾಕೆ ಕ್ವಾರಂಟೈನ್? ಕಳೆದ ವಾರ ಆಗಿದ್ದೇನೆಂದ್ರೆ.. ಶಿವಮೊಗ್ಗದಲ್ಲಿ ಅತ್ಯಾಚಾರ […]

5 DySPಗಳಿಗೆ ಕ್ವಾರಂಟೈನ್! ಸಿಎಂ BSY ಸ್ವಕ್ಷೇತ್ರದಲ್ಲಿ ಏನಿದು ಅವಾಂತರ?
Follow us
|

Updated on:May 19, 2020 | 2:59 PM

ಶಿವಮೊಗ್ಗ: ಹಚ್ಚಹಸಿರಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇದೀಗ ಕೊರೊನಾ ಆತಂಕ ಮಡುವುಗಟ್ಟಿದೆ. ಅದೂ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳನ್ನೇ ಬಾಧಿಸತೊಡಗಿದೆ. ಮುಖ್ಯಮಂತ್ರಿ ಸ್ವಕ್ಷೇತ್ರವಾದ ಶಿಕಾರಿಪುರದಲ್ಲಿ ಕಳೆದ ವಾರ ದಿಢೀರನೆ ಕೊರೊನಾ ಸೋಂಕು ಪ್ರಕರಣಗಳು ತಲೆಯೆತ್ತಿದ್ದವು. ಆ ಸಂದರ್ಭದಲ್ಲಿ ಶಿಕಾರಿಪುರ ತಾಲೂಕಿನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 12ಕ್ಕೂ ಹೆಚ್ಚು ಇನ್ಸ್​ಪೆಕ್ಟರ್​ಗಳು, 5 DySPಗಳಿಗೆ ಈಗ ಕ್ವಾರಂಟೈನ್ ಮಾಡಲಾಗಿದೆ.

ಯಾರು ಆ ಬಾಲಕಿ? ಇವರಿಗೆ ಯಾಕೆ ಕ್ವಾರಂಟೈನ್? ಕಳೆದ ವಾರ ಆಗಿದ್ದೇನೆಂದ್ರೆ.. ಶಿವಮೊಗ್ಗದಲ್ಲಿ ಅತ್ಯಾಚಾರ ಪ್ರಕರಣವೊಂದು ನಡೆದಿತ್ತು.  ಸಂತ್ರಸ್ತೆ ಮತ್ತು ಆರೋಪಿಯನ್ನು ಕರೆದುಕೊಂಡು ಹೋಗಿ ಶಿಕಾರಿಪುರದಲ್ಲಿ ಸ್ಥಳ ಮಹಜರು ಮಾಡಲಾಗಿತ್ತು. ಅಪ್ರಾಪ್ತ ವಯಸ್ಸಿನ ಬಾಧಿತ ಬಾಲಕಿ ಮತ್ತು ಆರೋಪಿಯನ್ನು ಪೊಲೀಸ್ ಜೀಪಿನಲ್ಲಿ ಕರೆದುಕೊಂಡು ಹೋಗಲಾಗಿತ್ತು. ಅದಾದಮೇಲೆ ಶಿಕಾರಿಪುರ ಗ್ರಾಮಾಂತರದ CPI ಬಾಲಕಿಯನ್ನು ಶಿವಮೊಗ್ಗದಲ್ಲಿ ಆಸ್ಪತ್ರೆಗೆ ಬಿಟ್ಟು ಬಂದಿದ್ದರು.  ಬಳಿಕ ಸೀದಾ SP ಕಚೇರಿಗೆ ತೆರಳಿ, CPIಗಳ ಸಭೆಯಲ್ಲಿ ಭಾಗವಹಿಸಿದ್ದರು.

ಶಿಕಾರಿಪುರ ಗ್ರಾಮಾಂತರದ CPI ಶಿಕಾರಿಪುರದಿಂದ ಆ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪೊಲೀಸ್ ಜೀಪ್​ನಲ್ಲಿ ಶಿವಮೊಗ್ಗ ನಗರಕ್ಕೆ ಕರೆತಂದು ಅನುಮಾನದ ಮೇಲೆ ಕೊವೀಡ್ ಆಸ್ಪತ್ರೆಗೆ ಸೇರಿಸಿದ್ದರು! ಇದೀಗ ಫಲಿತಾಂಶ ಹೊರಬಿದ್ದಿದ್ದು ಬಾಲಕಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅಂದು ಸಿಪಿಐ ಸಭೆಯಲ್ಲಿ ಭಾಗವಹಿಸಿದ ಎಲ್ಲಾ CPI ಮತ್ತು DySPಗಳಿಗೆ ಈಗ ಕ್ವಾರಂಟೈನ್ ಭಾಗ್ಯ ಕಲ್ಪಿಸಲಾಗಿದೆ.

Published On - 2:23 pm, Tue, 19 May 20

ತಾಜಾ ಸುದ್ದಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!