ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಜಾಬ್ಗೆ ಅವಕಾಶ; ಆದ್ರೆ ತಾಳಿ, ಕಾಲುಂಗರಕ್ಕೆ ನಿಷೇಧ; ಇದ್ಯಾವ ನ್ಯಾಯ ಎಂದ ಅಭ್ಯರ್ಥಿಗಳು
Karnataka Civil Services Exam: ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗೆ ಹಾಜರಾಗುವ ಮಹಿಳಾ ಅಭ್ಯರ್ಥಿಗಳು ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ತಮ್ಮ 'ಮಂಗಳಸೂತ್ರ' ತೆಗೆಯುವಂತೆ ಸೂಚಿಸಲಾಗಿತ್ತು. ತಾಳಿ ಹಾಗೂ ಕಾಲುಂಗರ ತೆಗೆಸಿದ್ದಕ್ಕೆ ಮಹಿಳಾ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ನ.06: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸ್ಮರ್ಧಾತ್ಮಕ ಪರೀಕ್ಷಾ (Competitive) ಕೇಂದ್ರಗಳಲ್ಲಿ ಹಿಜಾಬ್ಗೆ ಅವಕಾಶ ನೀಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಇದು ಸಹಜವಾಗಿ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ನಿನ್ನೆ (ನ.05) ರಂದು ನಡೆದಿದ್ದ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲಾಗಿತ್ತು. ಆದರೆ ಮಹಿಳಾ ಅಭ್ಯರ್ಥಿಗಳ ಕೊರಳಲ್ಲಿನ ತಾಳಿ ಹಾಗೂ ಕಾಲುಂಗುರ ತೆಗೆಸಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಮೇಲೆ, ತಾಳಿ ಹಾಗೂ ಕಾಲುಂಗರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ. ನಮಗೊಂದು ನ್ಯಾಯ, ಅವರಿಗೊಂದು ನ್ಯಾಯವೇ ಎಂದು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗೆ ಹಾಜರಾಗುವ ಮಹಿಳಾ ಅಭ್ಯರ್ಥಿಗಳು ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ತಮ್ಮ ‘ಮಂಗಳಸೂತ್ರ’ ತೆಗೆಯುವಂತೆ ಸೂಚಿಸಲಾಗಿತ್ತು.
ಇದನ್ನೂ ಓದಿ: FDA ಪರೀಕ್ಷೆ ಅಕ್ರಮ ಬೆನ್ನಲ್ಲೇ ಅಲರ್ಟ್; ಕೆಪಿಎಸ್ಸಿ ಪರೀಕ್ಷಾರ್ಥಿಗಳ ಕಿವಿ ವೊಲೆ, ಚೈನ್, ಕಾಲುಂಗರು ತೆಗೆಸಿದ ಪೊಲೀಸರು
ಈ ಕುರಿತು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪ್ರತಿಕ್ರಿಯಿಸಿ ಈ ನಿಯಮ “ಹಿಂದೂಗಳಿಗೆ” ಮಾತ್ರವೇ? ನಮ್ಮ ಹಿಂದೂ ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರವನ್ನು ತೆಗೆಯಲು ಹೇಳಿದ್ದೀರಿ. ಅತ್ತ ಓರ್ವ ಅಭ್ಯರ್ಥಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೀರಿ ಇದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
ಹಿಂದೂ ಸಂಸ್ಕೃತಿಯಲ್ಲಿ ಮಂಗಳಸೂತ್ರವನ್ನು ತೆಗೆಯುವಂತಿಲ್ಲ. ನನ್ನ ಮಂಗಳಸೂತ್ರ ಮತ್ತು ಕಾಲ್ಬೆರಳ ಉಂಗುರವನ್ನು ತೆಗೆದು ಒಳಗೆ ಹೋದೆ. ಆದೆ ಅವರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದರು ಎಂದು ಮಹಿಳಾ ಅಭ್ಯರ್ಥಿ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:27 am, Mon, 6 November 23